ಶಿಥಿಲಗೊಂಡ ವಿದ್ಯುತ್ ಕಂಬಗಳು: ಅವಘಡಕ್ಕೆ ಆಹ್ವಾನ
ಇಲಾಖೆ ನಿರ್ಲಕ್ಷ್ಯ, ಸಾರ್ವಜನಿಕರ ಆಕ್ರೋಶ
Team Udayavani, Jul 18, 2019, 5:48 AM IST
ತೆಕ್ಕಟ್ಟೆ: ಕೊರ್ಗಿ ಗ್ರಾ.ಪಂ. ವ್ಯಾಪ್ತಿಯ ಚಂದಾಡಿ ಅರೆಕಲ್ಲು ಜನವಸತಿ ಪ್ರದೇಶದ ಸಮೀಪದಲ್ಲಿರುವ 11 ಕೆವಿ ವಿದ್ಯುತ್ ಸಂಪರ್ಕದ ವಿದ್ಯುತ್ ಕಂಬವೊಂದು ಶಿಥಿಲಗೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಇದರೊಂದಿಗೆ ಕೊರ್ಗಿ-ಹೆಸ್ಕಾತ್ತೂರು ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗದಲ್ಲಿ ಕಳೆದ ಹಲವು ದಿನಗಳಿಂದಲೂ ವಿದ್ಯುತ್ ಕಂಬಗಳು ವಾಲಿಕೊಂಡಿದ್ದು, ಇದರಲ್ಲಿರುವ ವಿದ್ಯುತ್ ತಂತಿಗಳೂ ಜೋತಾಡುತ್ತಿವೆ. ನಿತ್ಯ ವಿದ್ಯಾರ್ಥಿಗಳ ಸಹಿತ ಹಲವಾರು ಮಂದಿ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಅವಘಡದ ಭೀತಿ ಕಾಡಿದೆ.
ಬೀಳುವ ಸ್ಥಿತಿಯಲ್ಲಿರುವ ಕಂಬಗಳ ಬಗ್ಗೆ ಸ್ಥಳೀಯರು ಹಿಂದೆ ನಡೆದ ಗ್ರಾಮಸಭೆಯಲ್ಲಿ ಗಮನಕ್ಕೆ ತಂದಿದ್ದರು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲವಾದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಕ್ರಮಕ್ಕೆ ಆಗ್ರಹ
ಕೊರ್ಗಿ ಪ್ರಮುಖ ಜನವಸತಿ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದಲೂ ವಿದ್ಯುತ್ ಕಂಬಗಳು ಶಿಥಿಲಾವಸ್ಥೆಯಲ್ಲಿದ್ದು ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಸ್ಥಳೀಯಾಡಳಿತ ಹಾಗೂ ಮೆಸ್ಕಾಂ ಇಲಾಖೆಯ ಗಮನಕ್ಕೆ ತಂದರೂ ಕೂಡಾ ಇದು ವರೆಗೆ ಯಾವುದೇ ಪ್ರಯೋಜನವಾಗಲಿಲ್ಲ .
-ಪ್ರಶಾಂತ್ ಆಚಾರ್ಯ ಕೊರ್ಗಿ, ಸ್ಥಳೀಯರು
ಗಮನಕ್ಕೆ ತಂದಿದ್ದೇನೆ
ಪ್ರಮುಖ ಭಾಗದಲ್ಲಿರುವ ವಿದ್ಯುತ್ ಕಂಬವೊಂದು ಶಿಥಿಲಗೊಂಡಿರುವ ವಿಷಯದ ಬಗ್ಗೆ ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ತುರ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
-ಸುಧಾಕರ ಶೆಟ್ಟಿ ಪಿಡಿಒ, ಗ್ರಾ.ಪಂ.ಕೊರ್ಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.