ಅರ್ಜಿ ಹಿಂಪಡೆದ ಗೃಹ ನಿರ್ಮಾಣ ಸಂಘ
Team Udayavani, Jul 18, 2019, 3:04 AM IST
ಬೆಂಗಳೂರು: ರಾಮಚಂದ್ರಾಪುರ ಮಠದ ಗಿರಿನಗರ ಶಾಖಾ ಮಠದ ಜಾಗವೂ ಸೇರಿಕೊಂಡಂತೆ ಮಠಕ್ಕೆ ಸೇರಿದ “ಪುನರ್ವಸು ಭವನ’ ನಿರ್ಮಾಣ ಮಾಡುತ್ತಿರುವ ನಿವೇಶನದ ವಿವಾದಕ್ಕೆ ಸಂಬಂಧಿಸಿದ ಅರ್ಜಿಯಲ್ಲಿ ತಮ್ಮನ್ನೂ ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘ ವಾಪಸ್ ಪಡೆದಿದೆ.
ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠ ಸಲ್ಲಿಸಿರುವ ತಕರಾರು ಅರ್ಜಿಯಲ್ಲಿ ತಮ್ಮ ವಾದವನ್ನೂ ಆಲಿಸುವಂತೆ ಕೋರಿ ಗೃಹ ನಿರ್ಮಾಣ ಸಂಘ ಸಲ್ಲಿಸಿದ್ದ ಮೇಲ್ಮನವಿ ನ್ಯಾ. ಎಲ್. ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತು.
ಈ ವೇಳೆ ಮೇಲ್ಮನವಿದಾರರ ಪರ ವಕೀಲರು, ಅರ್ಜಿ ಹಿಂಪಡೆಯುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘದ ಮೇಲ್ಮನವಿ ವಜಾಗೊಳಿಸಿ ಆದೇಶಿಸಿತು.
“ಪುನರ್ವಸು ಭವನ’ ನಿರ್ಮಾಣಕ್ಕಾಗಿ ನಕ್ಷೆ ಮಂಜೂರು ಮಾಡಲು ಹಾಗೂ ಖಾತೆ ನೋಂದಣಿ ಮಾಡಿಕೊಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಬಿಬಿಎಂಪಿ ಆಯುಕ್ತರ ಕ್ರಮ ಪ್ರಶ್ನಿಸಿ ರಾಮಚಂದ್ರಾಪುರ ಮಠ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯಲ್ಲಿ ತಮ್ಮನ್ನೂ ಪ್ರತಿವಾದಿಯನ್ನಾಗಿಸಲು ಕೋರಿ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಈ ಮಧ್ಯಂತರ ಅರ್ಜಿಯನ್ನು 2018ರ ಸೆ.25ರಂದು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಹಾಕರ ಸಂಘ ಮೇಲ್ಮನವಿ ಸಲ್ಲಿಸಿತ್ತು.
ಪ್ರಕರಣವೇನು?: ಗಿರಿನಗರದಲ್ಲಿ ನಿವೇಶನವೊಂದನ್ನು ಖರೀದಿಸಿದ್ದ ರಾಮಚಂದ್ರಪುರ ಮಠ, ಅಲ್ಲಿ ಕಟ್ಟಡ ನಿರ್ಮಾಣ ಮಾಡಲು ಬಿಬಿಎಂಪಿಯಿಂದ 2010ರಲ್ಲಿ ನಕ್ಷೆ ಮಂಜೂರಾತಿ ಪಡೆದುಕೊಂಡಿತ್ತು. ಆದರೆ, ಮಠ ಕಟ್ಟಡ ನಿರ್ಮಾಣ ಮಾಡುತ್ತಿರುವ ಜಾಗವು ಸಿಎ ನಿವೇಶನವಾಗಿದ್ದು, ಉದ್ಯಾನಕ್ಕೆ ಮೀಸಲಿರಿಸಿದ್ದ ಸ್ಥಳದಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿಸಿ, ಮಠಕ್ಕೆ ಮಂಜೂರು ಮಾಡಿದ್ದ ನಕ್ಷೆಯನ್ನು ಬಿಬಿಎಂಪಿ ರದ್ದುಪಡಿಸಿತ್ತು.
ಇದನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಿ ತೀರ್ಮಾನಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ನಕ್ಷೆ ಮಂಜೂರಾತಿ ಮತ್ತು ಖಾತೆ ನೋಂದಣಿಗೆ ಕೋರಿ ರಾಮಚಂದ್ರಾಪುರ ಬಿಬಿಎಂಪಿಗೆ ಅರ್ಜಿ ಸಲ್ಲಿಸಿತ್ತು. ಆದರೆ, ಅದನ್ನು ಬಿಬಿಎಂಪಿ ಆಯುಕ್ತರು ವಜಾಗೊಳಿಸಿದ್ದರು.
ಅದನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಮತ್ತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದ್ದ ಏಕಸದಸ್ಯ ಪೀಠ, ಕಟ್ಟಡ ನಿರ್ಮಾಣವು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುವುದಾಗಿ ಸ್ಪಷ್ಟಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.