ವೈದ್ಯಾಧಿಕಾರಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ತಾಪಂ ಅಧ್ಯಕ್ಷರ ವಿರುದ್ಧ ವೈದ್ಯಾಧಿಕಾರಿಗಳು ಸುಳ್ಳು ದೂರು ದಾಖಲಿಸಿದ್ದು ಖಂಡನೀಯ

Team Udayavani, Jul 18, 2019, 12:12 PM IST

18-July-18

ಸಾಗರ: ನಗರ ಕಾಂಗ್ರೆಸ್‌ನಿಂದ ಬೋಸ್ಲೆ ಹಠಾವೋ-ಆಸ್ಪತ್ರೆ ಬಚಾವೋ ಚಳುವಳಿ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು

ಸಾಗರ: ನಗರ ಕಾಂಗ್ರೆಸ್‌ ವತಿಯಿಂದ ಬುಧವಾರ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಪ್ರಕಾಶ್‌ ಬೋಸ್ಲೆ ಕೆ.ಆರ್‌. ಜನಪ್ರತಿನಿಧಿಗಳಿಗೆ ಅಗೌರವ ತೋರಿಸುತ್ತಿರುವ ಹಿನ್ನೆಲೆಯಲ್ಲಿ ಬೋಸ್ಲೆ ಹಠಾವೋ-ಆಸ್ಪತ್ರೆ ಬಚಾವೋ ಚಳುವಳಿ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌. ಜಯಂತ್‌, ಈಚೆಗೆ ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರು ಉಪವಿಭಾಗೀಯ ಆಸ್ಪತ್ರೆಗೆ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಸಂಬಂಧ ಮಾತನಾಡಲು ಹೋಗಿದ್ದಾಗ ಬೋಸ್ಲೆ ತಮ್ಮ ಸ್ಥಾನದ ಘನತೆಯನ್ನು ಮರೆತು ಓರ್ವ ತಾಪಂ ಅಧ್ಯಕ್ಷರಿಗೆ ಕನಿಷ್ಟ ಗೌರವ ನೀಡಿಲ್ಲ. ಬದಲಾಗಿ ತಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ನಗರ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ದೂರಿದರು.

ಘಟನೆಗೆ ಸಂಬಂಧಪಟ್ಟಂತೆ ಮಂಗಳವಾರ ಉಪವಿಭಾಗಾಧಿಕಾರಿಗಳು ಮಲ್ಲಿಕಾರ್ಜುನ ಹಕ್ರೆ ಮತ್ತು ಡಾ| ಪ್ರಕಾಶ್‌ ಬೋಸ್ಲೆ ಅವರನ್ನು ಕರೆದು ರಾಜಿ ಮಾಡಿಸಿ, ಸೌಹಾರ್ದದಿಂದ ನಡೆದುಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ ಪ್ರಕಾಶ್‌ ಬೋಸ್ಲೆಯವರು ದ್ವೇಷದ ಸ್ಥಿತಿ ನಿರ್ಮಾಣ ಮಾಡುವ ಉದ್ದೇಶದಿಂದ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಮಲ್ಲಿಕಾರ್ಜುನ ಹಕ್ರೆ ಅವರ ಮೇಲೆ ಜಾಮೀನುರಹಿತವಾಗಿ ಬಂಧಿಸುವ ಸೆಕ್ಷನ್‌ ಹಾಕಿದ್ದಾರೆ. ಪ್ರಾಂತ್ಯಾಧಿಕಾರಿಗಳ ನಿರ್ದೇಶನ ಮೀರಿ ಡಾ|ಪ್ರಕಾಶ್‌ ಬೋಸ್ಲೆ ನಡೆದುಕೊಂಡಿರುವುದು ಖಂಡನೀಯ ಎಂದರು.

ಡಾ| ಪ್ರಕಾಶ್‌ ಬೋಸ್ಲೆ ಅವರ ಸುಳ್ಳು ದೂರನ್ನು ಇರಿಸಿಕೊಂಡು ಪೊಲೀಸರು ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರನ್ನು ಬಂಧಿಸಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆ. ಇದರಿಂದ ಪ್ರಾಮಾಣಿಕವಾಗಿ ಜನರ ಪರ ಕೆಲಸ ಮಾಡುವ ಜನಪ್ರತಿನಿಧಿಗಳ ಗೌರವ ಉಳಿಯುವುದಿಲ್ಲ. ಸರ್ಕಾರಿ ನೌಕರರು ನಮ್ಮನ್ನು ಆಳುವವರು ಎನ್ನುವ ಮನಸ್ಥಿತಿಯಿಂದ ಹೊರಗೆ ಬರಬೇಕು. ಮಲ್ಲಿಕಾರ್ಜುನ ಹಕ್ರೆ ಅವರು ಒಂದೊಮ್ಮೆ ಆವೇಶದಲ್ಲಿ ಮಾತನಾಡಿದರೆ ಸರ್ಕಾರಿ ಅಧಿಕಾರಿಯಾಗಿ ಬೋಸ್ಲೆಯವರು ವಾಸ್ತವಾಂಶ ತಿಳಿಸುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸುಳ್ಳು ದೂರು ನೀಡಿರುವುದು ಸರಿಯಲ್ಲ ಎಂದರು.

ಡಾ| ಪ್ರಕಾಶ್‌ ಬೋಸ್ಲೆ ನೀಡಿದ ದೂರಿನ ಆಧಾರದ ಮೇಲೆ ಎಎಸ್‌ಪಿ ಯತೀಶ್‌ ಅವರು ಮಲ್ಲಿಕಾರ್ಜುನ ಹಕ್ರೆಯವರನ್ನು ಬಂಧಿಸಿದರೆ ಕಾಂಗ್ರೆಸ್‌ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಜನಪ್ರತಿನಿಧಿಗಳ ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಉಗ್ರ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗುತ್ತದೆ. ಜನಪ್ರತಿನಿಧಿಗಳಿಗೆ, ರೋಗಿಗಳಿಗೆ ಗೌರವ ಕೊಡದ ಪ್ರಕಾಶ್‌ ಬೋಸ್ಲೆಯವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಜಿಪಂ ಸದಸ್ಯ ಭೀಮನೇರಿ ಶಿವಪ್ಪ, ಪ್ರಮುಖರಾದ ಮಹಾಬಲ ಕೌತಿ, ರವಿ ಜಂಬೂರುಮನೆ, ತುಕಾರಾಮ ಶಿರವಾಳ, ಭರ್ಮಪ್ಪ ಅಂದಾಸುರ, ಎಚ್.ಎಂ. ರವಿಕುಮಾರ್‌, ಅಣ್ಣಪ್ಪ ಭೀಮನೇರಿ, ಕನ್ನಪ್ಪ ಮುಳಕೇರಿ, ದೂಗೂರು ಪರಮೇಶ್ವರ್‌, ತಾರಾಮೂರ್ತಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.