ಕೋಟ ಅವಳಿ ಕೊಲೆ ಪ್ರಕರಣ:ರಾಘವೇಂದ್ರ ಕಾಂಚನ್‌ಗೆ ಹೈಕೋರ್ಟ್ ಜಾಮೀನು
Team Udayavani, Jul 18, 2019, 1:34 PM IST
ಕೋಟ: ಇಲ್ಲಿನ ಮಣೂರಿನಲ್ಲಿ ಜ. 26ರಂದು ನಡೆದಿದ್ದ ಸ್ನೇಹಿತರಿಬ್ಬರ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಉಡುಪಿ ಜಿ.ಪಂ. ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್‌ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಗೆಳೆಯರಾದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 18 ಮಂದಿ ಆರೋಪಿಗಳಲ್ಲಿ ರಾಘವೇಂದ್ರ ಕಾಂಚನ್ ಓರ್ವನಾಗಿದ್ದು, ಬಂಧನಕ್ಕೊಳಗಾಗಿ ಜೈಲು ಸೇರಿದ್ದ. ಆರೋಪಿಗಳು ತಪ್ಪಿಸಿಕೊಳ್ಳಲು ಸಹಕರಿಸಿದ ಆರೋಪದಡಿಯಲ್ಲಿ ಬಂಧಿತನಾದ ಪೊಲೀಸ್ ಪೇದೆ ವೀರೇಂದ್ರ ಆಚಾರ್ಯನ ಜಾಮೀನು ಅರ್ಜಿ ಇದೇ ಸಂದರ್ಭ ತಿರಸ್ಕೃತ ಗೊಂಡಿದೆ. ಕಾನೂನು ಪ್ರಕ್ರಿಯೆಗಳ ಅನಂತರ 2-3 ದಿನಗಳಲ್ಲಿ ಕಾಂಚನ್ ಬಿಡುಗಡೆಗೊಳ್ಳಲಿದ್ದಾನೆ ಎನ್ನಲಾಗಿದೆ.
ಕುಂದಾಪುರ ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆ ನಡೆಯಬೇಕಿದ್ದು, 2-3 ದಿನಗಳು ತಗಲುವ ಸಾಧ್ಯತೆಗಳಿವೆ. ಜೆಎಂಎಫ್ ಸಿ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್ ಈ ಹಿಂದಿನ ವಿಚಾರಣೆಯಲ್ಲೂ ವಾದ ಮಂಡಿಸಿದ್ದು, ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.