ಶ್ರೀಮಂತ ಪಾಟೀಲ್ ಅಪಹರಣ: ‘ಕೈ’ ದೂರು
Team Udayavani, Jul 19, 2019, 5:27 AM IST
ಬೆಂಗಳೂರು: ಕಾಂಗ್ರೆಸ್‌ನ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ವತಿಯಿಂದ ನಗರ ಪೊಲೀಸ್ ಆಯುಕ್ತ ಅಲೋಕ್‌ಕುಮಾರ್‌ಗೆ ದೂರು ಸಲ್ಲಿಸಲಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ನಟರಾಜ್ ಗೌಡ ಹಾಗೂ ವಕ್ತಾರ ಮಂಜುನಾಥ ಅದ್ದೆ ದೂರು ಸಲ್ಲಿಸಿದ್ದು, ರಾಜ್ಯ ಸರ್ಕಾರದ ವಿಶ್ವಾಸಮತ ಯಾಚನೆಯನ್ನು ವಿಫಲಗೊಳಿಸಲು ಬಿಜೆಪಿಯ ಮಾಜಿ ಶಾಸಕ ಲಕ್ಷ್ಮಣ ಸವದಿ, ಶ್ರೀಮಂತ ಪಾಟೀಲ್ ಅವರನ್ನು ಅಪಹರಣಗೊಳಿಸಿದ್ದಾರೆ. ಶ್ರೀಮಂತ ಪಾಟೀಲ್ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ವಿಪ್ ಜಾರಿಗೊಳಿಸಲಾಗಿದೆ. ಅವರನ್ನು ಕಾನೂನು ಬಾಹಿರವಾಗಿ ಅಪಹರಿಸಿ, ಸರ್ಕಾರವನ್ನು ಪತನಗೊಳಿಸುವ ಹುನ್ನಾರ ಅಡಗಿದೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಆದರೆ, ಶ್ರೀಮಂತ ಪಾಟೀಲ್ ಅವರು ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದು, ‘ನನಗೆ ಎದೆ ನೋವು ಕಂಡ ತಕ್ಷಣ ನಾನು ಚಿಕಿತ್ಸೆಗೆ ಮುಂಬೈಗೆ ಬಂದಿದ್ದೇನೆ. ಇನ್ನೂ ಎದೆಯಲ್ಲಿ ನೋವು ಇದೆ. ಹೀಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿದ್ದೇನೆ’ ಎಂದು ವೀಡಿಯೋ ಬಿಡುಗಡೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.