ದಿನಪೂರ್ತಿ ನಡೆಯದ ವಿಧಾನ ಪರಿಷತ್ ಕಲಾಪ
Team Udayavani, Jul 19, 2019, 5:14 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ರಾಜೀನಾಮೆಗೆ ಆಗ್ರಹಿಸಿ ಮೇಲ್ಮನೆಯಲ್ಲಿ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದರಿಂದ ಗುರುವಾರ ಇಡೀ ದಿನದ ಕಲಾಪ ಬಲಿಯಾಗಿದೆ.
ಬೆಳಗ್ಗೆ 11.30ಕ್ಕೆ ದಿನದ ಕಲಾಪ ಆರಂಭಕ್ಕೂ ಮೊದಲೇ ಪ್ರತಿಪಕ್ಷದ ಸದಸ್ಯರಾದ ಅರುಣ್ ಶಹಾಪುರ, ನಾರಾಯಣಸ್ವಾಮಿ, ಆಯನೂರು ಮಂಜುನಾಥ, ಕೆ.ಪಿ.ನಂಜುಂಡಿ, ತೇಜಸ್ವಿನಿ ಗೌಡ, ಮಹಾಂತೇಶ್ ಕವಟಗಿಮಠ, ಎನ್.ರವಿಕುಮಾರ್, ಎಂ.ಕೆ.ಪ್ರಾಣೇಶ್ ಮೊದಲಾದರು ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸದನದ ಬಾವಿಗಿಳಿದು ಪ್ರತಿಭಟನೆ ಆರಂಭಿಸಿದ್ದರು.
ಸರ್ಕಾರದಲ್ಲಿ ಬಹುತಮ ಇಲ್ಲದೇ ಇದ್ದರೂ, ಸಿಎಂ ರಾಜೀ ನಾಮೆ ನೀಡುತ್ತಿಲ್ಲ. ವರ್ಗಾವಣೆ ದಂಧೆ ಯಲ್ಲಿ ಸರ್ಕಾರ ನಿರತವಾ ಗಿದೆ. ಮುಖ್ಯಮಂತ್ರಿಗಳು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು. ಕೆಲ ಕಾಲ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಧ್ಯಪ್ರವೇಶಿಸಿದ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ, ವಿಧಾನಸಭೆಯಲ್ಲಿ ಸಚಿವರು ಹಾಜರಾತಿ ಇರಬೇಕಾದ್ದರಿಂದ ಸದನವನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಿದರು.
3.30ಕ್ಕೆ ಆರಂಭವಾಗಬೇಕಿದ್ದ ಸದನ 3.45ಕ್ಕೆ ಆರಂಭವಾಯಿತು. ಆಗಲೂ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. ಭಾರತ್ ಮಾತಾಕೀ ಜೈ, ಒಂದೇ ಮಾತರಂ ಘೋಷಣೆಗಳನ್ನು ಕೂಗುತ್ತಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಭಿತ್ತಿಪತ್ರ ಪ್ರದರ್ಶಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವಾಗಲೇ, ಸದಸ್ಯ ಐವನ್ ಡಿಸೋಜಾ ಮಾತನಾಡಿ, ನೀರಿಲ್ಲದ ಬಾವಿಯಿಂದ ಮೇಲೆ ಬನ್ನಿ, ಕಾಂಗ್ರೆಸ್ ಶಾಸಕರನ್ನು ಅಪಹರಣ ಮಾಡಿರುವ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು ಎಂದು ಹೇಳಿದರು.
ಸರ್ಕಾರದಲ್ಲಿ ಬಹುಮತ ಇಲ್ಲದೇ ಇದ್ದರೂ, ಅಧಿಕಾರಕ್ಕೆ ಅಂಟಿಕೊಂಡು ಕೂತಿರುವ ಮೂಲಕ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಸುಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು.
ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದೆ. ಇಲ್ಲಿಯೂ ಕಲಾಪ ನಡೆಯಲು ಅವಕಾಶ ಮಾಡಿಕೊಡಬೇಕು. ಕಳೆದ ಮೂರು ದಿನದಿಂದ ಪ್ರತಿಪಕ್ಷದ ಸದಸ್ಯರ ಪ್ರತಿಭಟನೆಯಿಂದ ಕಲಾಪ ಸರಿಯಾಗಿ ನಡೆದಿಲ್ಲ. ಇಂತಹ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಸಭಾ ನಾಯಕಿ ಹಾಗೂ ಸಚಿವೆ ಡಾ.ಜಯಮಾಲಾ ಆಗ್ರಹಿಸಿದರು.
ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ಪರವಿರೋಧ ವಾಗ್ವಾದ ಹೆಚ್ಚಾಗುತ್ತಿದ್ದಂತೆ ಕಲಾಪದಲ್ಲಿ ಗದ್ದಲ ಏರ್ಪಟ್ಟಿದ್ದರಿಂದ ಸಭಾಪತಿಯವರು ಸದನವನ್ನು ಸಂಜೆ 5.30ರವರೆಗೆ ಮುಂದೂಡಿದರು. 6 ಗಂಟೆಗೆ ಸದನದ ಕಲಾಪ ಪುನರ್ ಆರಂಭವಾಗುತ್ತಿದ್ದಂತೆ ಬಾವಿಗೆ ಇಳಿದು ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದರಿಂದ ಸಭಾಪತಿಯವರು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.