ಎಚ್‌ಡಿಕೆ ರಾಜೀನಾಮೆ ನೀಡುವುದೇ ಒಳಿತು
Team Udayavani, Jul 19, 2019, 5:18 AM IST
ಧಾರವಾಡ: ‘ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಿದ್ದರೆ ಸಿಎಂ ಕುಮಾರಸ್ವಾಮಿ ಗೌರವದಿಂದ ರಾಜೀನಾಮೆ ನೀಡು ವುದೇ ಒಳಿತು’ ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಹಣ ಹಾಗೂ ಅಧಿಕಾರದ ಅಮಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ದೊಂಬರಾಟ ನಡೆಯುತ್ತಿದೆ. ಹಣ-ಅಧಿಕಾರಕ್ಕಾಗಿ ಶಾಸಕರು ರಾಜೀನಾಮೆ ನೀಡಿದ್ದರೆ, ಅಧಿಕಾರ ಉಳಿಸಿಕೊಳ್ಳಲು ಸಿಎಂ ತಂತ್ರ ಹೂಡಿದ್ದಾರೆ. ಇನ್ನು ವಿರೋಧ ಪಕ್ಷದಲ್ಲಿ ಕುಳಿತವರು ಆಪರೇಷನ್ ಕಮಲ ಮಾಡುತ್ತಿದ್ದಾರೆ. ಇದು ರಾಜಕೀಯ ಬಿಕ್ಕಟ್ಟು ಅಲ್ಲ, ಸಂವಿಧಾನದ ಬಿಕ್ಕಟ್ಟು. ಇದಕ್ಕೆ ಕಾರಣರಾದ ಶಾಸಕರಿಗೆ ತಕ್ಕ ಕ್ರಮ ಆಗಬೇಕು. ರಾಜೀನಾಮೆ ನೀಡಿದವರು 6 ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು. ಯಾವುದೇ ಅಧಿಕಾರದ ಸ್ಥಾನ ಹೊಂದಬಾರದು ಎಂಬ ನಿಯಮವಿದ್ದು, ಇದು ಜಾರಿಯಾಗಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.