ಇಂದು ವಿಶ್ವಾಸಮತಕ್ಕೆ ರಾಜ್ಯಪಾಲರ ಸೂಚನೆ
Team Udayavani, Jul 19, 2019, 5:48 AM IST
ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ನಡೆದ ವಿದ್ಯಮಾನಗಳ ಬೆನ್ನಲ್ಲೇ ರಾಜ್ಯಪಾಲ ವಜೂಭಾç ವಾಲಾ ಅವರು ಮಧ್ಯಪ್ರವೇಶ ಮಾಡಿದ್ದು, ಶುಕ್ರವಾರ ಅಪರಾಹ್ನ 1.30ರೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಯವರಿಗೆ ನಿರ್ದೇಶನ ನೀಡುವ ಅಧಿಕಾರ ರಾಜ್ಯಪಾಲರಿಗೆ ಇರುವ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದ್ದು, ಈಗ ಸಮ್ಮಿಶ್ರ ಸರಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ಹದಿನೈದು ಜನ ಶಾಸಕರು ರಾಜೀನಾಮೆ ಕೊಟ್ಟು ನಿಮ್ಮ ಸರಕಾರಕ್ಕೆ ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ನೀವು ನಾಳೆಯೇ ವಿಶ್ವಾಸಮತ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಏನು ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಗುರುವಾರವೇ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯಪಾಲರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಂದೇಶ ರವಾನಿಸಿದ್ದರು. ಆದರೆ ಗದ್ದಲ-ಪ್ರತಿಭಟನೆ ಹಿನ್ನೆಲೆಯಲ್ಲಿ ಸದನ ಮುಂದೂಡಿಕೆಯಾಯಿತು.
ರಾಜ್ಯಪಾಲರ ವಿಶೇಷ ಅಧಿಕಾರಿ ಗುರುವಾರ ಇಡೀ ದಿನ ಸದನದಲ್ಲಿದ್ದು ಕಲಾಪ ವೀಕ್ಷಿಸಿದರು. ಅದರ ಮಾಹಿತಿ ಹಾಗೂ ಬಿಜೆಪಿ ನಿಯೋಗದ ದೂರಿನ ಮೇರೆಗೆ ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶುಕ್ರವಾರ ಅಪರಾಹ್ನ 1.30ರ ಒಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಸ್ನೇಹಿತರು ರಾಜ್ಯಪಾಲರ ಮೇಲೆ ಒತ್ತಡ ಹಾಕಿ ಶುಕ್ರವಾರ ಅಪರಾಹ್ನ 1.30ರೊಳಗೆ ವಿಶ್ವಾಸಮತ ಸಾಬೀತು ಪಡಿಸು ವಂತೆ ಮುಖ್ಯಮಂತ್ರಿಯವರಿಗೆ ಕಾಗದ ಬರೆಸಿದ್ದಾರೆ.
– ಡಿ.ಕೆ. ಶಿವಕುಮಾರ್, ಜಲಸಂಪನ್ಮೂಲ ಸಚಿವ
ಆದೇಶ ಪಾಲನೆ ಅನಿವಾರ್ಯ
ಮುಖ್ಯಮಂತ್ರಿಯವರಿಗೆ ನಿರ್ದೇಶನ ನೀಡುವ ಪರಮ ಅಧಿಕಾರ ರಾಜ್ಯಪಾಲರಿಗಿದೆ ಎಂದು ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಹೇಳಿದ್ದಾರೆ. ಸರಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ಅನುಮಾನ ರಾಜ್ಯಪಾಲರಿಗೆ ಮೂಡಿರಬಹುದು ಅಥವಾ ಮನವರಿಕೆ ಆಗಿರಬಹುದು. ಅದರಂತೆ ಶುಕ್ರವಾರ ಅಪರಾಹ್ನ 1.30ರೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಿರುವುದು ಸರಿಯಾಗಿದೆ. ಒಂದೊಮ್ಮೆ ರಾಜ್ಯಪಾಲರ ಆದೇಶ ಧಿಕ್ಕರಿಸಿದರೆ ಇನ್ನಷ್ಟು ಬಿಕ್ಕಟ್ಟು ಹಾಗೂ ಗಂಭೀರ ಸಮಸ್ಯೆಗಳಿಗೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.