ಸರ್ಕಾರಿ ಕಾಮಗಾರಿಗೆ ಶೇ. 25 ಮರಳು ಕಡ್ಡಾಯ
•ಕೃಷ್ಣಾ ನದಿ ಪಾತ್ರದ 4 ಬ್ಲಾಕ್‌ಗಳಲ್ಲಿ 90,708 ಮೆಟ್ರಿಕ್ ಟನ್ ಮರಳು ಸಂಗ್ರಹ
Team Udayavani, Jul 19, 2019, 8:58 AM IST
ಬಾಗಲಕೋಟೆ: ನಗರದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯಲ್ಲಿ ಲಭ್ಯವಿರುವ ಮರಳಿನ ಪೈಕಿ ಶೇ. 25ರಷ್ಟು ಮರಳನ್ನು ಸರ್ಕಾರಿ ಕಾಮಗಾರಿಗಳಿಗೆ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಸೂಚಿಸಿದರು.
ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರ ಮತ್ತು ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಬೀಳಗಿ ತಾಲೂಕಿನ ಕೃಷ್ಣಾ ನದಿ ಪಾತ್ರದ 4 ಬ್ಲಾಕ್‌ಗಳಲ್ಲಿ 90,708 ಮೆಟ್ರಿಕ್ ಟನ್ ಮರಳನ್ನು ಗುತ್ತಿಗೆದಾರರು ದಾಸ್ತಾನು ಮಾಡಿದ್ದು, ಈ ಪೈಕಿ ಅದರಲ್ಲಿ ಶೇ. 25 ಮರಳನ್ನು ಸರ್ಕಾರಿ ಕಾಮಗಾರಿಗಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಸೂಚಿಸಿದರು.
ಮೀಸಲಿರಿಸಿದ ಮರಳನ್ನು ಬೀಳಗಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸ್ಟಾಕ್ ಮಾಡಿಸಬೇಕು. ಸ್ಟಾಕ್ ಮಾಡಿದ ಮರಳನ್ನು ಪಿಆರ್‌ಡಿಪಿಎಲ್, ನಿರ್ಮಿತಿ ಕೇಂದ್ರ ಹಾಗೂ ಇತರೆ ಇಲಾಖೆಯವರಿಗೆ ನೀಡಬೇಕು. ಪಡೆದ ಮರಳಿನ ಹಣ ಶೀಘ್ರ ಪಾವತಿಸಬೇಕು. ಅಲ್ಲದೇ ಪಟ್ಟಾ ಜಮೀನುಗಳಲ್ಲಿ ನಡೆದ ಮರಳುಗಾರಿಕೆಯಲ್ಲಿ ಸರ್ಕಾರಿ ಕಾಮಗಾರಿಗಳಿಗಾಗಿ ನೀಡಿದ ಮರಳಿನ ಮಾಹಿತಿ ಪಡೆಯಬೇಕು. ಪ್ರತಿ ತಿಂಗಳು ಸರ್ಕಾರಿ ಕಾಮಗಾರಿಗಳಿಗೆ ನೀಡಿದ ಮರಳಿನ ಮಾಹಿತಿ ಮುಂದಿನ ಸಭೆಯಲ್ಲಿ ನೀಡಬೇಕು ಎಂದು ತಿಳಿಸಿದರು.
ಕಳೆದ ಸಭೆಯಲ್ಲಿ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಈ ನಿಟ್ಟಿನಲ್ಲಿ ಪರವಾನಗಿಯಲ್ಲಿ ನಮೂದಿಸಿದ್ದ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮರಳನ್ನು ಸಾಗಿಸುತ್ತಿದ್ದ 7 ಲಾರಿಗಳ ತಪಾಸಣೆ ಮಾಡಲಾಗಿ ಹೆಚ್ಚಿನ ಪ್ರಮಾಣದಲ್ಲಿ ಮರಳನ್ನು ಸಾಗಿಸುತ್ತಿದ್ದ 2 ಲಾರಿ ಮಾಲೀಕರಿಗೆ ರೂ.5 ಸಾವಿರ, 4 ಲಾರಿಗಳಿಗೆ ತಲಾ ರೂ.10 ಸಾವಿರ ದಂಡ ವಸೂಲಿ ಮಾಡಲಾಗಿದೆ. ಉಳಿದ ಒಂದು ಲಾರಿ ದಂಡ ಪಾವತಿಸದೇ ಇರುವ ಕಾರಣ ಮುಧೋಳ ಪೊಲೀಸ್ ಠಾಣಾ ವಶಕ್ಕೆ ನೀಡಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.
ಅದೇ ರೀತಿ ಬೀಳಗಿ ತಾಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ಕಲ್ಲು ಸಾಗಾಣಿಕೆ ಸಂಬಂಧ ಬೀಳಗಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 7 ಪ್ರಕರಣ, ಜಮಖಂಡಿ ವ್ಯಾಪ್ತಿಯಲ್ಲಿ ಜಪ್ತಿ ಮಾಡಿದ ಮರಳಿಗೆ ಜು. 16ರಂದು 142 ಮೆಟ್ರಿಕ್ ಟನ್‌ಗೆ ಪರವಾನಗಿ ಜಾರಿ ಮಾಡಲಾಗಿದ್ದು, ಒಟ್ಟು ಜಪ್ತಿ ಮಾಡಿದ ಮರಳಿಗೆ 347 ಮೆ.ಟನ್ ಪರವಾನಗಿ ಜಾರಿ ಮಾಡಲಾಗಿರುವುದಾಗಿ ಸಭೆಗೆ ತಿಳಿಸಲಾಯಿತು.
ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆಗೆ ಕೋರಿ ಬಂದ 18 ಅರ್ಜಿಗಳು ಈ ಹಿಂದಿನ ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಿ ಮರಳು ನಿಕ್ಷೇಪ ಕಾಪಾಡುವ ಸಲುವಾಗಿ ಆದ್ಯತೆ ಮೇರೆಗೆ ಅರ್ಜಿ ಪರಿಗಣಿಸಲು ಅರ್ಜಿ ಪಟ್ಟಿ ತಯಾರಿಸಿರುವುದಾಗಿ ಸಭೆಗೆ ತಿಳಿಸಲಾಯಿತು.
ಸರ್ಕಾರಿ ಕಾಮಗಾರಿಗಳಿಗೆ ಮರಳು ಬೇಡಿಕೆ ಪಡೆದುಕೊಂಡು ಎಸ್.ಆರ್ ದರದಲ್ಲಿ ವಿಲೇಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಮಹಮ್ಮದ ನರಸುಲ್ಲಾ ಸಭೆಗೆ ತಿಳಿಸಿದರು. ಉಪವಿಭಾಗಾಧಿಕಾರಿ ಎ.ಜಯಾ, ಪ್ರೊಬೆಷನರಿ ಐಎಎಸ್ ಅಧಿಕಾರಿ ಗರಿಮಾ, ಜಿಪಂ ಉಪ ಕಾರ್ಯದರ್ಶಿ ಎ.ಜಿ. ತೋಟದ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜಯ್ಯ, ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಮಣಿಯಾರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಪ್ರಶಾಂತ ಗಿಡದಾನಪ್ಪಗೋಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.