ಸುರತ್ಕಲ್: ಕೆಲಸ ಕೊಡಿಸುವುದಾಗಿ 30ಕ್ಕೂ ಹೆಚ್ಚು ಮಂದಿಗೆ ವಂಚನೆ
Team Udayavani, Jul 19, 2019, 11:19 AM IST
ಸುರತ್ಕಲ್ : ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 30ಕ್ಕೂ ಮಿಕ್ಕಿದ ಯುವಕ – ಯುವತಿಯರಿಂದ 6 ಲಕ್ಷಕ್ಕೂ ಮಿಕ್ಕಿ ಹಣ ಸಂಗ್ರಹಿಸಿ ವಂಚಿಸಿದ ಪ್ರಕರಣ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಈ ಸಂಬಂಧ ಪುತ್ತೂರು ಕೆಮ್ಮಿಂಜೆಯ ಯತೀಶ್(28) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಯು ಈ ಹಿಂದೆ ಖಾಸಗಿ ವಿಮಾನಯಾನ ಸಂಸ್ಥೆಯ ಕಚೇರಿಯೊಂದರಲ್ಲಿ ಉದ್ಯೋಗದಲ್ಲಿದ್ದ. ಈತ ಶೋಕಿ ಜೀವನಕ್ಕಾಗಿ ಹಣ ಮಾಡುವ ಉದ್ದೇಶದಿಂದ ವಿವಿಧ ಏವಿಯೇಷನ್ ಕೋರ್ಸ್ ಮುಗಿಸಿ ಕೆಲಸ ಹುಡುಕುತ್ತಿದ್ದ ಯುವಜನ ರನ್ನೇ ಬಲೆಗೆ ಹಾಕಿಕೊಂಡಿದ್ದ. ಆತನು ಪ್ರತಿಯೊಬ್ಬ ರಿಂದಲೂ 28 ಸಾ.ರೂ.ಹಣ ಪಡೆ ದಿದ್ದು, ಜು.7ರಂದು ಕೇರಳದಲ್ಲಿ ಸಂದರ್ಶನವಿದೆ ಎಂದು ನಂಬಿಸಿದ್ದ. ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದ. ಮೋಸ ಹೋದ ಹೊಸಬೆಟ್ಟಿನನ ಲಿಕಿಂಗ್ ಎಂಬವರು ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸರು ಆರೋಪಿಯನ್ನು ಕದ್ರಿ ಪಾರ್ಕ್ ಬಳಿಯಿಂದ ವಶಕ್ಕೆ ಪಡೆದರು. ಆತನಿಗೆ ನ್ಯಾಯಾಂಗ ಬಂಧನವಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.