ಜೆಡಿಎಸ್‌ನಲ್ಲಿ ಅನಾಥ ಪ್ರಜ್ಞೆ: ಅಭಿವೃದ್ಧಿಗೆ ಗ್ರಹಣ

ನಾರಾಯಣಗೌಡರ ರಾಜೀನಾಮೆಗೂ ವ್ಯಕ್ತವಾಗದ ಪ್ರತಿರೋಧ • ಪುತ್ರನ ಸೋಲಿನಿಂದ ಹೊರಬರದ ಮುಖ್ಯಮಂತ್ರಿ

Team Udayavani, Jul 19, 2019, 12:33 PM IST

mandya-tdy-1

ಮಂಡ್ಯ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿವಿನ ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ ಕೆ.ಆರ್‌.ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡರ ರಾಜೀನಾಮೆ ಜೆಡಿಎಸ್‌ನಲ್ಲಿ ಸಂಚಲನ ಉಂಟು ಮಾಡಿದ್ದು, ಈ ಕಾರಣದಿಂದಲೇ ಜೆಡಿಎಸ್‌ ಶಾಸಕರಿಗೆ ರೆಸಾರ್ಟ್‌ ಬಂಧನದಲ್ಲಿ ಇರಿಸಲಾಗಿದ್ದು, ಜಿಲ್ಲೆಯ ಅಭಿವೃದ್ಧಿ ಪ್ರಕ್ರಿಯೆಯಲ್ಲೂ ಕೂಡ ಗ್ರಹಣ ಹಿಡಿದಂತಾಗಿದೆ.

ವರ್ಷದ ಹಿಂದಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಪಾರ ನಿರೀಕ್ಷೆಯನ್ನಿಟ್ಟುಕೊಂಡು ಜಿಲ್ಲೆಯ ಜನರು ಜೆಡಿಎಸ್‌ ಕೈ ಹಿಡಿದಿದ್ದರು. ಏಳು ಕ್ಷೇತ್ರಗಳಲ್ಲೂ ದಳಪತಿಗಳು ವಿಜಯದುಂಧುಬಿ ಮೊಳಗಿಸಿ ಭರ್ಜರಿ ಜಯ ದಾಖಲಿಸಿದ್ದರು. ಹತ್ತು ವರ್ಷಗಳ ಬಳಿಕ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ್ದು ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ಪರ್ವ ಶುರುವಾಗಲಿದೆ ಎಂಬ ಆಶಾಕಿರಣ ಎಲ್ಲರಲ್ಲೂ ಮೂಡಿತ್ತು.

ಪ್ರಗತಿಯತ್ತ ಸಣ್ಣ ಹೆಜ್ಜೆ ಇಡಲಿಲ್ಲ:

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಅಭಿವೃದ್ಧಿಯ ಬಗ್ಗೆ ಜಿಲ್ಲೆಯ ಜನರು ಕಂಡಿದ್ದ ಆಶಾಗೋಪುರ ಗಾಳಿಗೋಪುರವಾಗಿದೆ. ಜಿಲ್ಲೆ ಯೊಳಗೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿ ಉಳಿದಿದೆ. ಒಂದು ವರ್ಷದಲ್ಲಿ ಪ್ರಗತಿಯತ್ತ ಒಂದು ಸಣ್ಣ ಹೆಜ್ಜೆಯನ್ನೂ ಇಡಲು ಸಾಧ್ಯವಾಗಲಿಲ್ಲ. ಇದರಿಂದ ರೋಸಿ ಹೋಗಿರುವ ಜನರು ಜೆಡಿಎಸ್‌ ವಿರುದ್ಧವೇ ತಿರುಗಿ ಬಿದ್ದಿ ದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ಲೋಕಸಭಾ ಚುನಾ ವಣೆ ಸಾಕ್ಷಿಯಾಗಿದ್ದು, ಜೆಡಿಎಸ್‌ ಶಾಸಕರು ದಿನೇದಿನೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವುದರ ದಿಕ್ಸೂಚಿಯೂ ಆಗಿದೆ.

ಮುಖ್ಯಮಂತ್ರಿ ತಮ್ಮ ಪುತ್ರ ನಿಖೀಲ್ ಕುಮಾರಸ್ವಾಮಿಗೆ ರಾಜಕೀಯ ಭವಿಷ್ಯ ಕಲ್ಪಿಸುವ ಏಕಮಾತ್ರ ಉದ್ದೇಶದಿಂದ 8500 ಕೋಟಿ ರೂ. ಅಭಿವೃದ್ಧಿಯ ಚಿತ್ರಣವಿರುವ ದೂರದ ಬೆಟ್ಟವನ್ನು ತೋರಿಸಿದರೇ ವಿನಃ ಅನುಷ್ಠಾನಕ್ಕೆ ಆಸಕ್ತಿ ವಹಿಸಲಿಲ್ಲ. ಘೋಷಿಸಿದ ಕಾಮಗಾರಿಗಳು ಶಂಕುಸ್ಥಾಪನೆ, ಗುದ್ದಲಿ ಪೂಜೆಗಷ್ಟೇ ಸೀಮಿತವಾದವು. ಹೊಸ ಸಕ್ಕರೆ ಕಾರ್ಖಾನೆ, ಇಸ್ರೇಲ್ ಮಾದರಿ ಕೃಷಿ, ಕೆರೆ-ಕಟ್ಟೆಗಳನ್ನು ತುಂಬಿಸುವ, ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಪುಂಗಿ ನಿರಂತರವಾಗಿ ಊದಿದರೂ ಅವು ಕಾರ್ಯಗತಗೊಳ್ಳಲೇ ಇಲ್ಲ.

ಮುಖ ಮಾಡದ ಸಿಎಂ: ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖೀಲ್ ಸೋತ ಬಳಿಕ ಸಿಎಂ ಕುಮಾರಸ್ವಾಮಿ ಜಿಲ್ಲೆಯ ಕಡೆ ಮುಖ ಮಾಡಲೇ ಇಲ್ಲ. 8500 ಕೋಟಿ ರೂ. ಅಭಿವೃದ್ಧಿಯ ಚಿತ್ರಣ ಕಾಗದದಲ್ಲೇ ಉಳಿಯುವಂತಾಯಿತು. ಹೊಸ ಕಾರ್ಖಾನೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಕೆರೆ-ಕಟ್ಟೆಗಳೆಲ್ಲಾ ನೀರಿಲ್ಲದೆ ಭಣಗುಡುತ್ತಿದ್ದರೂ ಅವುಗಳನ್ನು ತುಂಬಿಸುವುದಕ್ಕೆ ಯಾರಿಗೂ ಆಸಕ್ತಿ ಇದ್ದಂತಿಲ್ಲ. ಮುಂಗಾರು ಮಳೆ ಕೊರತೆಯಿಂದ ಬರಗಾಲ ಜಿಲ್ಲೆಯನ್ನು ಆವರಿಸುತ್ತಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಯನ್ನೇ ನಡೆಸಲಾಗದಂತಹ ಘನಘೋರ ಸ್ಥಿತಿಯಲ್ಲಿ ರೈತರಿದ್ದಾರೆ. ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವಿಲ್ಲದೆ ಅಣೆಕಟ್ಟೆಯ ನೀರಿನ ಮಟ್ಟ ಏರುತ್ತಿಲ್ಲ. ಕುಡಿಯಲು ಸಾಲುವಷ್ಟು ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹವಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕಿದ್ದ ಶಾಸಕರೆಲ್ಲರೂ ರೆಸಾರ್ಟ್‌ ಸೇರಿಕೊಂಡು ಮೋಜು-ಮಸ್ತಿ ನಡೆಸುತ್ತಿದ್ದಾರೆ. ದಳಪತಿಗಳ ನಡೆಯ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಜಿಲ್ಲೆಯ ಜನರ ಋಣ ತೀರಿಸುವ ಮಾತನಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಕೂಡ ಜನರ ಕಷ್ಟದಿಂದ ದೂರವೇ ಉಳಿದು ಅಧಿಕಾರದ ಉಳಿವಿನ ಬೆನ್ನೇರಿರುವುದು ಜನರ ಸ್ಥಿತಿ ಕೇಳ್ಳೋರು ಯಾರು ಎನ್ನುವಂತಾಗಿದೆ.

ರೈತರ ಆತ್ಮಹತ್ಯೆ ನಿಲ್ಲಲಿಲ್ಲ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಒಂದಂಶದೊಂದಿಗೆ ಅಧಿಕಾರಕ್ಕೇರಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನೂ ಗೊಂದಲವಿಲ್ಲದೆ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡುವಲ್ಲಿ ವಿಫ‌ಲರಾಗಿದ್ದಾರೆ. ಋಣಮುಕ್ತ ಪ್ರಮಾಣಪತ್ರ ನೀಡುವ ಮೂಲಕ ರೈತರ ಮನಗೆಲ್ಲುವ ಪ್ರಯತ್ನ ನಡೆಸಿದರಾದರೂ ಬ್ಯಾಂಕುಗಳು ಆ ಋಣಮುಕ್ತ ಪ್ರಮಾಣಪತ್ರಕ್ಕೆ ಕವಡೆಕಾಸಿನ ಕಿಮ್ಮತ್ತನ್ನೂ ನೀಡದೆ ಸಾಲ ಮರುಪಾವತಿಸದ ರೈತರಿಗೆ ನೋಟೀಸ್‌ ಜಾರಿ ಮಾಡುತ್ತಲೇ ಇವೆ. ರೈತರ ಸರಣಿ ಆತ್ಮಹತ್ಯೆ ಎಂದಿನಂತೆ ಮುಂದುವರೆದರೂ ಸತ್ತ ರೈತರಿಗೆ ಪರಿಹಾರ ಕೊಟ್ಟರೇ ವಿನಃ ಆತ್ಮಹತ್ಯೆ ತಡೆಯುವುದಕ್ಕೆ ಸಿಎಂ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ದಳ ನಾಯಕರಿಂದ ಸಾಧ್ಯವಾಗಲೇ ಇಲ್ಲ. ಇದೂ ಸಹ ಜೆಡಿಎಸ್‌ ವರ್ಚಸ್ಸು ಕುಸಿಯುವುದಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಅಭಿವೃದ್ಧಿ ಶೂನ್ಯ: ಏಳು ಕ್ಷೇತ್ರಗಳಲ್ಲಿ ಒಂದು ವರ್ಷ ಜೆಡಿಎಸ್‌ನ ಶಾಸಕರೇ ಇದ್ದರೂ ಯಾರೂ ತಮ್ಮ ಕ್ಷೇತ್ರಗಳನ್ನು ಪರಿಣಾಮಕಾರಿಯಾಗಿ ಪ್ರಗತಿಯತ್ತ ಮುನ್ನಡೆಸಲು ಸಾಧ್ಯವಾಗಲಿಲ್ಲ. ಒಂದೊಂದು ಕ್ಷೇತ್ರಕ್ಕೆ ಕನಿಷ್ಠ 300ರಿಂದ 600 ಕೋಟಿ ಘೋಷಣೆಯಾದರೂ ಯಾವುದೇ ಕಾಮಗಾರಿಗಳು ಕಾರ್ಯರೂಪಕ್ಕೆ ಬರಲಿಲ್ಲ. ಕಾಗದದೊಳಗೆ, ಗುದ್ದಲಿಪೂಜೆಗಳಿಗಷ್ಟೇ ಎಲ್ಲವೂ ಸೀಮಿತವಾಗಿವೆ.

ಸರ್ಕಾರದ ನೇತೃತ್ವವನ್ನು ಜೆಡಿಎಸ್‌ ವಹಿಸಿದ್ದರೂ ಏಳಕ್ಕೆ ಏಳು ಕ್ಷೇತ್ರಗಳನ್ನು ಕೊಡುಗೆಯಾಗಿ ನೀಡಿದ ಮಂಡ್ಯ ಜಿಲ್ಲೆಗೆ ಕಿಂಚಿತ್‌ ಕೊಡುಗೆಯನ್ನು ನೀಡದಿರುವ ಬಗ್ಗೆ ಜನರಲ್ಲಿ ಅಸಮಾಧಾನ ಮೂಡಿಸಿದೆ. ಒಣಗುತ್ತಿರುವ ಬೆಳೆಗಳಿಗೆ ನೀರು ಕೇಳಿದರೂ ಸಕಾಲದಲ್ಲಿ ನೀಡದೆ ಸತಾಯಿಸಿ ಬೆಳೆ ಒಣಗಿದ ಬಳಿಕ ನೀರು ಬಿಡುಗಡೆ ಮಾಡಿರುವ ದಳಪತಿಗಳ ನಿರ್ಲಕ್ಷ್ಯ ಧೋರಣೆ ಬಗ್ಗೆಯೂ ಜಿಲ್ಲೆಯ ಜನರಲ್ಲಿ ಆಕ್ರೋಶವಿದೆ.

 

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.