ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ
ಗ್ರಾಮಲೆಕ್ಕಾಧಿಕಾರಿಗಳಿಂದ ಜಿಲ್ಲಾಧಿಕಾರಿ ಸಿ.ಎಸ್. ಕರೀಗೌಡರಿಗೆ ಮನವಿ ಸಲ್ಲಿಕೆ
Team Udayavani, Jul 19, 2019, 4:48 PM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಜಿಲ್ಲಾಧಿಕಾರಿ ಕರೀಗೌಡರಿಗೆ ಮನವಿ ಪತ್ರ ಸಲ್ಲಿಸಿತು.
ದೇವನಹಳ್ಳಿ: ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್‌ಚಾರ್ಟ್ ಹಾಗೂ ಮುಂಬಡ್ತಿ ಅನ್ಯಾಯ ಸರಿಪಡಿಸುವಿಕೆ ಸೇರಿ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘದಿಂದ ತಾಲೂಕಿನ ಬೀರಸಂದ್ರ ಗೇಟ್ಹತ್ತಿರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ನಿರಂತರ ಅನ್ಯಾಯ ಆಗುತ್ತಿರುವುದನ್ನು ಸರಿಪಡಿಸ ಬೇಕು. ರಾಜ್ಯ ಸರ್ಕಾರ ಈ ಕೂಡಲೇ 20 ಲಕ್ಷ ರೂ. ವಿಶೇಷ ಪರಿಹಾರ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.
ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಒತ್ತಡ: ರಾಜ್ಯ ಕಂದಾಯ ನೌಕರರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ, ಗ್ರಾಮ ಸಹಾಯಕರ ಹುದ್ದೆ ಈವರೆಗೂ ಕಾಯಂ ಗೊಳಿಸಿಲ್ಲ. ಆದ್ದರಿಂದ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳು, ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಲಾಗಿದೆ. ಮನವಿಗೆ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು. ಸರ್ಕಾರಿ ರಜಾ ದಿನಗಳಲ್ಲೂ ಕರ್ತವ್ಯದ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ. ಜತೆಗೆ ಅನ್ಯ ಇಲಾಖೆಗಳ ಕೆಲಸದ ಒತ್ತಡ ಹೇರಲಾಗುತ್ತಿದೆ. ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಂಡು ಒತ್ತಡ ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿದರು.
ಮುಂಬಡ್ತಿ ಅನ್ಯಾಯ ಸರಿಪಡಿಸಿ: ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಗೌರವಾಧ್ಯಕ್ಷ ಡಿ.ಸಂದೀಪ್ ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಅನ್ಯಾಯ ವಾಗುತ್ತಿದೆ. ಇದನ್ನು ಸರಪಡಿಸಬೇಕು. ಪ್ರಯಾಣ ಬಡ್ತಿ ದರವನ್ನು ಒಂದು ಸಾವಿರಕ್ಕೆ ಹೆಚ್ಚುಸುವಂತೆ ಮನವಿ ಮಾಡಲಾಗಿದೆ. ಆದರೆ ಸರ್ಕಾರ ಕೇವಲ 300-500 ರೂ. ಮಾತ್ರ ಹೆಚ್ಚಿಸಿದ್ದು, ಪುನರ್ ಪರಿಶೀಲಿಸಬೇಕು. ಲೆಕ್ಕಾಧಿಕಾರಿ ಗಳಿಗೆ ಜಾಬ್‌ಚಾರ್ಟ್ ನೀಡಬೇಕು ಎಂದರು.
ವಿಶೇಷ ಪರಿಹಾರ ನೀಡಿ: ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಮರಳು ಅಕ್ರಮ ದಂಧೆಕೋರರಿಮದ ಲಾರಿ ಹರಿದು ಮೃತಪಟ್ಟಿರುವ ಸಾಹೇಬ್ ಪಾಟೀಲ್ ಎಂಬ ಗ್ರಾಮ ಲೆಕ್ಕಾಧಿಕಾರಿ ಕುಟುಂಬಕ್ಕೆ ಈವರೆಗೂ ವಿಶೇಷ ಪರಿಹಾರ ಮಂಜೂರು ಮಾಡಿಲ್ಲ. ರಾಜ್ಯ ಸರ್ಕಾರ ಕೂಡಲೇ 20 ಲಕ್ಷ ರೂ. ವಿಶೇಷ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಡೀಸಿ ಸಿ.ಎಸ್. ಕರೀಗೌಡರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮಾತ ನಾಡಿ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾ ರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು. ತಾಲೂಕು ಗ್ರಾಮಲೆಕ್ಕಾಧಿಕಾರಿ ಸಂಘದ ಅಧ್ಯಕ್ಷ ಮಹೇಶ್ ಹಾಗೂ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.