ಇಂದಿನಿಂದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ -2ಗೆ ಶುರು
Team Udayavani, Jul 20, 2019, 3:01 AM IST
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ (ಡಿಕೆಡಿ)ನ ಫ್ಯಾಮಿಲಿ ವಾರ್ ಸೀಜನ್-2 ಪ್ರಸಾರವಾಗಲು ವೇದಿಕೆ ಸಿದ್ಧವಾಗಿದೆ. ಈ ಹೊಸ ಸೀಜನ್ನಲ್ಲಿ ಜೀ ಕನ್ನಡ ವಾಹಿನಿಯ ಕುಟುಂಬದ ಪ್ರಮುಖ ತಾರೆಗಳು ಪಾಲ್ಗೊಂಡು ವೀಕ್ಷಕರನ್ನು ಮನರಂಜಿಸಲಿದ್ದಾರೆ.
ಈಗಾಗಲೇ ಜೀ ವಾಹಿನಿಯಲ್ಲಿ ಜನಪ್ರಿಯವಾಗಿರುವ ಕಮಲಿ, ಗಟ್ಟಿಮೇಳ, ಬ್ರಹ್ಮಗಂಟು, ಜೋಡಿಹಕ್ಕಿ, ರಾಧಾ ಕಲ್ಯಾಣ, ಮಹಾದೇವಿ, ಪಾರು, ಜೋಡಿಹಕ್ಕಿ, ಉಘೇ ಉಘೇ ಮಹಾದೇಶ್ವರ, ಸರೆಗಮಪ, ಡ್ರಾಮಾ ಜೂನಿಯರ್ ಸೀಜನ್-2 ಮತ್ತು ಕಾಮಿಡಿ ಕಿಲಾಡಿಗಳು ಸೀಜನ್-3 ಸೇರಿದಂತೆ, ಹಲವಾರು ರಿಯಾಲಿಟಿ ಶೋ ಮತ್ತು ಧಾರಾವಾಹಿಗಳಿಂದ ಹೊಸ ಪ್ರತಿಭಾವಂತರು ಫ್ಯಾಮಿಲಿ ವಾರ್ ಸೀಜನ್-2ರಲ್ಲಿ ಪ್ರಮುಖ ಸ್ಪರ್ಧಿಗಳಾಗಿ ಭಾಗವಹಿಸುತ್ತಿದ್ದಾರೆ.
ಇನ್ನು ಈ ಬಾರಿಯ ಡಿಕೆಡಿ ಸೀಜನ್ನಲ್ಲಿ ನಟಿ ರಕ್ಷಿತಾ, ವಿಜಯ ರಾಘವೇಂದ್ರ ಮತ್ತು ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ತೀರ್ಪುಗಾರರಾಗಿ ಭಾಗವಹಿಸಲಿದ್ದು, ಅನುಶ್ರೀ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಇಂದಿನಿಂದ (ಜುಲೈ 20) ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9.30ಕ್ಕೆ ಜೀ ಕನ್ನಡ ಮತ್ತು ಜೀ ಕನ್ನಡ ಹೆಚ್.ಡಿ ಯಲ್ಲಿ ಪ್ರಸಾರವಾಗಲಿದ್ದು, ಇಂದು ಕಾರ್ಯಕ್ರಮದ ಗ್ರ್ಯಾಂಡ್ ಪ್ರೀಮಿಯರ್ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.