ಮಾದಕ ದ್ರವ್ಯ ಜಾಲ ಪತ್ತೆ: ಮೂವರ ಸೆರೆ

80 ಸಾ. ರೂ. ಮೌಲ್ಯದ 16 ಗ್ರಾಂ ಎಂಡಿಎಂಎ ವಶ

Team Udayavani, Jul 20, 2019, 5:47 AM IST

Untitled-1

ಮಂಗಳೂರು: ಮಾದಕ (ಎಂಡಿಎಂಎ- ಮಿಥೈಲೆನೆಡಿಯಾಕ್ಷಿ ಮೆಥಾಂಫೆಟಮೈನ್‌) ವನ್ನು ನಗರದ ಬೀಚ್‌ಗಳಲ್ಲಿ ಮಾರಾಟ ಮಾಡುವ ತಂಡವನ್ನು ಮಂಗಳೂರು ಪೊಲೀಸರು ಶುಕ್ರವಾರ ಪತ್ತೆ ಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಅವರಿಂದ 80,000 ರೂ. ಮೌಲ್ಯದ 16 ಗ್ರಾಂ ಎಂಡಿಎಂಎ ಸಹಿತ ಒಟ್ಟು 1,10,200 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿದ್ದಾರೆ.

ಉಳ್ಳಾಲ ಒಳಪೇಟೆ ನಿವಾಸಿ ಅಬೂಬಕರ್‌ ಮಿಸ್ಬಾ (24), ಸೋಮೇಶ್ವರ ಪೆರ್ಮನ್ನೂರು ನಿವಾಸಿ ಶಬ್ಬೀರ್‌ ಅಹಮ್ಮದ್‌ ಯಾನೆ ಶಬ್ಬೀರ್‌ (27) ಮತ್ತು ಉಳ್ಳಾಲ ಅಲೇಕಳ ನಿವಾಸಿ ಶಿಹಾಬ್‌ ಅಬ್ದುಲ್ ರಝಾಕ್‌ (27) ಬಂಧಿತರು.

ಘಟನೆ ವಿವರ
ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ವಿಶೇಷ ಅಪರಾಧ ಪತ್ತೆದಳ ತಂಡವು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತು.

ಮಂಗಳೂರು ಮೂಲದ ಮೂವರು ಆರೋಪಿಗಳು ಮುಂಬ ಯಿಗೆ ತೆರಳಿ ಅಲ್ಲಿಂದ ‘ಎಂಡಿಎಂಎ’ ಮಾದಕದ್ರವ್ಯ ಖರೀದಿಸುತ್ತಿದ್ದರು. ಅದನ್ನು ಮಂಗಳೂರಿಗೆ ತಂದು ವಿದ್ಯಾರ್ಥಿಗಳನ್ನೇ ಪ್ರಮುಖವಾಗಿ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದರು. ಅಲ್ಲದೆ, ಸಾರ್ವಜನಿಕರಿಗೂ ಮಾರು ತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮಂಗಳೂರು ನಗರ ಮತ್ತು ಉಳ್ಳಾಲ ಪಣಂಬೂರು ಮತ್ತು ಇತರ ಬೀಚ್ ಪರಿಸರದಲ್ಲಿ ಬೆಳಗ್ಗಿನಿಂದ ರಾತ್ರಿವರೆಗೆ ಮಾದಕದ್ರವ್ಯವನ್ನು ಮಾರಾಟ ಮಾಡುತ್ತಿದ್ದರು. ಆರೋಪಿಗಳು ಶುಕ್ರವಾರ ಬೈಕಂಪಾಡಿಯಿಂದ ಕೂರಿಕಟ್ಟ ಕಡೆಗೆ ಹೋಗುವ ಕಾಂಕ್ರೀಟ್ ರಸ್ತೆಯಲ್ಲಿ ಸ್ಕೂಟರ್‌ ಸಹಿತ ನಿಂತಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಸುತ್ತುವರಿದು ಬಂಧಿಸಿ ಪಣಂಬೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಬಂಧಿತರಿಂದ 80 ಸಾ.ರೂ. ಮೌಲ್ಯದ 16.55 ಗ್ರಾಂ ತೂಕದ ‘ಎಂಡಿಎಂಎ’ ಮಾದಕ ದ್ರವ್ಯ, 25 ಸಾ. ರೂ. ಮೌಲ್ಯದ ಜ್ಯುಪಿಟರ್‌ ಸ್ಕೂಟರ್‌, 2 ಸಾ.ರೂ. ಮೌಲ್ಯದ 4 ಮೊಬೈಲ್ಗಳು, 3,200 ರೂ. ವಶಕ್ಕೆ ಪಡೆಸಿದ್ದಾರೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,10,200 ರೂ. ಎಂದು ಅಂದಾಜಿಸಲಾಗಿದೆ.

ನಗರ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ ಮತ್ತು ಲಕ್ಷ್ಮೀಗಣೇಶ್‌ ಮಾರ್ಗ ದರ್ಶನದಲ್ಲಿ ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ ಆರ್‌. ಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಸಿಐ ಅಜ್ಮತ್‌ ಅಲಿ, ಮಂಗಳೂರು ಉತ್ತರ ಉಪವಿಭಾಗದ ವಿಶೇಷ ಅಪರಾಧ ಪತ್ತೆ ದಳದ ಅಧಿಕಾರಿ ಎಎಸ್‌ಐ ಮುಹಮ್ಮದ್‌, ಸಿಬಂದಿ ಕುಶಲ ಮಣಿಯಾಣಿ, ಸತೀಶ್‌ ಎಂ., ವಿಜಯ ಕಾಂಚನ್‌, ಇಸಾಕ್‌, ಶರಣ್‌ ಕಾಳಿ ಹಾಗೂ ಮಂಗಳೂರು ನಗರ ಸಿಸಿಬಿ ಘಟಕದ ಪೊಲೀಸ್‌ ಉಪನಿರೀಕ್ಷಕ ಕಬ್ಟಾಳ್‌ರಾಜ್‌, ಎಎಸ್‌ಐಗಳಾದ ಮೋಹನ್‌ ಶೆಟ್ಟಿಯಾರ್‌, ಹರೀಶ್‌ ಮತ್ತು ಸಿಬಂದಿ ಚಂದ್ರಶೇಖರ, ಜಬ್ಟಾರ್‌, ರಾಜಾ, ಮಣಿ, ಯೋಗೀಶ್‌, ನೂತನ್‌ ಹಾಗೂ ವಿಶ್ವ ಪೂಜಾರಿ ಹಾಗೂ ಪಣಂಬೂರು ಠಾಣಾ ಪೊಲೀಸ್‌ ಅಧಿಕಾರಿ ಮತ್ತು ಸಿಬಂದಿ ಮೊದಲಾದವರು ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.