![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 20, 2019, 4:33 PM IST
ಗದಗ: ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಿದ್ದ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಉದ್ಘಾಟಿಸಿದರು.
ಗದಗ: ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸ ಸಂಬಂಧಿ ಮಾರಣಾಂತಿಕ ರೋಗಗಳು ಬರುತ್ತವೆ. ತಂಬಾಕು ಸೇವನೆಗೆ ಸಂಬಂಧಿಸಿದ ಕಾಯಿಲೆಗಳಿಂದ ಪ್ರತಿವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ. ಈ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಇಲಾಖೆ, ಜಲ್ಲಾ ಸಮೀಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಿದ್ದ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಅಧಿನಿಯಮ ಕೋಟ್ಪಾ 2003 ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತ ಮಂಜುನಾಥ ಬೊಮ್ಮನಕಟ್ಟಿ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ. ಶಾಲಾ ಆವರಣದಿಂದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷಿದ್ದವಿದ್ದರೂ ಅಲ್ಲಲ್ಲಿ ಮಾರಾಟ ಮಾಡಲಾಗುತ್ತದೆ. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ಇದ್ದರೆ ಮಕ್ಕಳ ಸಹಾಯವಾಣಿ ಕರೆ ಮಾಡಿ ಮಾಹಿತಿ ಒದಗಿಸಬಹುದಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ವಿರೂಪಾಕ್ಷರೆಡ್ಡಿ ಮಾದಿನೂರ ಮಾತನಾಡಿ, ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚೆಚ್ಚು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಸಮೀಕ್ಷಾಧಿಕಾರಿಗಳು ಹಾಗೂ ಎನ್‌ಟಿಸಿಪಿ ಕಾರ್ಯಕ್ರಮಾಧಿಕಾರಿ ಡಾ| ಸತೀಶ ಬಸರಿಗಿಡದ ಮಾತನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಪಿಪಿಟಿ ಮುಖಾಂತರ, ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾಥಾ ಮುಖಾಂತರ, ಬೀದಿ ನಾಟಕ, ಗೋಡೆ ಬರಹ, ಫ್ಲೆಕ್ಸ್, ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗುತ್ತದೆ ಎಂದು ವಿವರಿಸಿದರು.
ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಗೋಪಾಲ ಸುರಪುರ ಮಾತನಾಡಿ, ಕೋಟ್ಪಾ ಕಾಯ್ದೆ ಸೆಕ್ಷನ್ 4 ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.