ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ

ಉರ್ದು ಶಾಲೆ ಕಾಮಗಾರಿ ಪೂರ್ಣಗೊಳಿಸಿ •ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಾಕೇಶ್‌ ಸೂಚನೆ

Team Udayavani, Jul 20, 2019, 5:19 PM IST

tk-tdy-4

ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಲ್ಪಸಂಖ್ಯಾತ ಕಲ್ಯಾಣದ ಪ್ರಧಾನ ಮಂತ್ರಿಗಳ 15 ಅಂಶಗಳ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮಾತನಾಡಿದರು.

ತುಮಕೂರು: ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಲ್ಪಸಂಖ್ಯಾತ ಕಲ್ಯಾಣದ ಪ್ರಧಾನ ಮಂತ್ರಿಗಳ 15 ಅಂಶಗಳ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗುಬ್ಬಿ ಹಾಗೂ ತುಮಕೂರು ತಾಲೂಕಿನಲ್ಲಿ ಹೆಚ್ಚು ಅಲ್ಪಸಂಖ್ಯಾತರ ಮಕ್ಕಳು ಶಾಲೆಯಿಂದ ಹೊರ ಗುಳಿದಿದ್ದಾರೆ. ಹೊರಗುಳಿದ ಮಕ್ಕಳನ್ನು ವಿಶೇಷ ದಾಖಲಾತಿ ಆಂದೋಲನದಡಿ ಮಕ್ಕಳಿಗೆ ಜಾಗೃತಿ ಮೂಡಿಸಿ ಶಾಲೆಗೆ ದಾಖಲಿಸಬೇಕು. ತಂದೆ- ತಾಯಿ ಯರಿಗೆ ಮಕ್ಕಳ ಭವಿಷ್ಯದ ಅರಿವು ಮೂಡಿಸಬೇಕು ಎಂದರು.ಅಲ್ಪಸಂಖ್ಯಾತ ಶಾಲೆಗಳಲ್ಲಿ ವಿದ್ಯಾರ್ಥಿ ನಿಯರ ದಾಖಲಾತಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಡಿಪಿಐ ಕಾಮಾಕ್ಷಿ, ಆರ್ಥಿಕವಾಗಿ ಹಿಂದುಳಿದಿರುವುದರಿಂದ ಮಕ್ಕಳ ಪೋಷಕರೇ ಗ್ಯಾರೇಜ್‌, ಮತ್ತಿತರ ಕಡೆ ಕೆಲಸಕ್ಕೆ ಕಳುಹಿಸುತ್ತಿ ರುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿ ದಿದ್ದಾರೆ ಎಂದು ಮಾಹಿತಿ ನೀಡಿದರು.

ಉರ್ದು ಶಾಲೆಗಳಿಗೆ ಅವಶ್ಯಕತೆಯಿರುವ ಶೌಚ ಗೃಹ, ಶಾಲಾ ಕಟ್ಟಡ, ಆವರಣ ಗೋಡೆ ಹಾಗೂ ಗ್ರಂಥಾ ಲಯ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಡೀಸಿ ತಾಕೀತು ಮಾಡಿದರು.

ಪೌಷ್ಟಿಕ ಆಹಾರ ಪೂರೈಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು 228 ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಿದ್ದು, ಈ ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ಕೊರತೆಯಾಗದಂತೆ ಪೂರೈಸಬೇಕು. ಸಂಬಂಧಪಟ್ಟ ಮೇಲ್ವಿಚಾರಕರು ಅಂಗನವಾಡಿ ಕೇಂದ್ರಗಳ ವ್ಯಾಪ್ತಿ ಯಲ್ಲಿರುವ ಮಕ್ಕಳ ಮನೆ, ಮನೆಗೆ ತೆರಳಿ ಅಪೌಷ್ಟಿಕತೆ ಬಗ್ಗೆ ತಿಳಿದು ತಮಗೆ ವರದಿ ಸಲ್ಲಿಸಬೇಕು. ಅಪೌಷ್ಟಿಕ ಮಕ್ಕಳ ಬಗ್ಗೆ ವರದಿಯಾದರೆ ಆಯಾ ಮೇಲ್ವಿಚಾರಕರನ್ನೇ ಹೊಣೆಗಾರ ರನ್ನಾಗಿಸಲಾಗುವುದೆಂದು ಎಚ್ಚರಿಸಿದರು.

ಫ‌ಲಾನುಭವಿಗಳಿಗೆ ಚೆಕ್‌: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್‌.ನಟರಾಜ್‌ ಮಾತನಾಡಿ, ಇಲಾಖೆ ಯೋಜನೆಯಡಿ ಅಲ್ಪಸಂಖ್ಯಾತ ಮಹಿಳೆಯರಿಗೆ 2019ನೇ ಸಾಲಿನ ಭಾಗ್ಯಲಕ್ಷ್ಮೀ, ಉದ್ಯೋಗಿನಿ, ಸಮೃದ್ಧಿ, ಧನಶ್ರೀ, ಮುಂತಾದ ಯೋಜನೆಗಳ ಮಹಿಳಾ ಫ‌ಲಾನುಭವಿಗಳಿಗೆ ತರಬೇತಿ ನೀಡಿ ಚೆಕ್‌ ವಿತರಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಕೃಷಿ ಇಲಾಖೆಯಿಂದ ಅಲ್ಪಸಂಖ್ಯಾತ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ತುಂತುರು ನೀರಾವರಿ ಸಾಮಗ್ರಿಗಳು, ಸ್ಪಿಂಕ್ಲರ್‌, ಬಿತ್ತನೆ ಬೀಜ, ಕೃಷಿ ಯಾಂತ್ರೋಪಕರಣ ಫ‌ಲಾನುಭವಿ ರೈತರಿಗೆ ವಿತರಿಸ ಲಾಗುತ್ತಿದೆ ಎಂದು ಹೇಳಿದರು. 15 ಅಂಶಗಳ ಸಮಿತಿ ಸದಸ್ಯ ಖಧೀರ್‌ ಅಹಮದ್‌, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಬಿ.ರಘು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಹಾಗೂ ಮತ್ತಿತರ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.