ರಸ್ತೆ ಬದಿ ಪಾರ್ಕಿಂಗ್‌ಗೆ ತಲಾ 15 ದಿನ ನಿಗದಿ


Team Udayavani, Jul 21, 2019, 3:00 AM IST

raste-badi

ಕೆ.ಆರ್‌.ನಗರ: ಪಟ್ಟಣದಲ್ಲಿ ವಾಹನ ದಟ್ಟಣೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿ, ಸುಗಮ ಸಂಚಾರಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಜುಲೈ 12ರಂದು ಉದಯವಾಣಿಯಲ್ಲಿ “ಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಟ್ರಾಫಿಕ್‌ ಜಾಮ್‌’ ಶೀರ್ಷಿಕೆಯಡಿ ಪೊಲೀಸರ ನಿರ್ಲಕ್ಷ್ಯದಿಂದ ಸಂಚಾರ ದಟ್ಟಣೆ ಬಗ್ಗೆ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ.

ಪಟ್ಟಣದ ಬಜಾರ್‌ ರಸ್ತೆ, ಚಂದ್ರಮೌಳೇಶ್ವರ ರಸ್ತೆ ಮತ್ತು 7ನೇ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ ದಂಡ ವಿಧಿಸಲು ಮುಂದಾಗಿರುವ ಪೊಲೀಸರು, ಮುಕ್ತ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದಾರೆ.

ಸೂಚನಾ ಫ‌ಲಕ: ಈ ಮೂರು ರಸ್ತೆಗಳಲ್ಲಿ ತಿಂಗಳಿನ ಹದಿನೈದು ದಿನಗಳಲ್ಲಿ ಒಂದು ಬದಿ ಮತ್ತು ಉಳಿದ ಹದಿನೈದು ದಿನಗಳಲ್ಲಿ ಮತ್ತೂಂದು ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವಂತೆ ಈಗಾಗಲೇ ಸೂಚನಾ ಫ‌ಲಕ ಅಳವಡಿಸಲಾಗಿದ್ದು, ಇದರಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇದರ ಜತೆಗೆ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ತಳ್ಳುವ ಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುತ್ತಿದ್ದವರಿಗೆ ಚಾಟಿ ಬೀಸಿರುವ ಪೊಲೀಸ್‌ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಂಡು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೊಂದರೆಯಾಗದಂತೆ ಒಂದೆಡೆ ವ್ಯಾಪಾರ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.

ನಿಯಮ ಮೀರಿದರೆ ದಂಡ: ಪಟ್ಟಣದಲ್ಲಿ ಸಂಚಾರ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪ್ರಾಯೋಗಿಕವಾಗಿ ಮೂರು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ದಿನಾಂಕ ನಿಗದಿಪಡಿಸುವುದರ ಜೊತೆಗೆ ನಿಯಮ ಮೀರಿ ವಾಹನ ಚಲಾಯಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಂಡು ಅನಿಯಮಿತ ವೇಗದಿಂದ ಚಲಿಸುವವರಿಗೆ, ಮೊಬೈಲ್‌ ಬಳಸಿ, ವಾಹನ ವಿಮೆ ಇಲ್ಲದವರಿಗೆ ಮತ್ತು ನೋ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸುವವರಿಗೆ ಒಂದು ಸಾವಿರ ರೂ ದಂಡ ವಿಧಿಸಲಾಗುತ್ತಿದೆ.

ಪೇದೆ ನೇಮಕ: ಈ ಮೂರು ರಸ್ತೆಗಳಿಗೆ ಏಕಮುಖ ಪಾರ್ಕಿಂಗ್‌ ವ್ಯವಸ್ಥೆ ಮಾಡುವುದರ ಜೊತೆಗೆ ಪೊಲೀಸ್‌ ಪೇದೆಗಳನ್ನು ನೇಮಿಸಿ ಎಲ್ಲೆಂದರಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸದಂತೆ ಎಚ್ಚರಿಸುವ ಕೆಲಸ ಮಾಡುವುದರ ಜತೆಗೆ ಅತಿಕ್ರಮವಾಗಿ ವಾಹನಗಳನ್ನು ನಿಲ್ಲಿಸಿದರೆ ವಾಹನಗಳಿಗೆ ಬೀಗ ಮುದ್ರೆಗಳನ್ನು ಹಾಕಿ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ.

ಜನರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರಸ್ತೆಗೆ ನೇಮಕಗೊಂಡಿರುವ ಪೇದೆಗಳು, ಮೋಟಾರು ಬೈಕಿನೊಂದಿಗೆ ಈ ಕಡೆಯಿಂದ ಆ ಕಡೆಗೆ ತಿರುಗಾಡಿಕೊಂಡು ಬೆಳಗ್ಗೆಯಿಂದ ರಾತ್ರಿಯವರೆಗೆ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದಕ್ಕೆ ಎಲ್ಲರೂ ಸಹಕಾರ ನೀಡಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಜಾಗೃತಿ ಮೂಡಿಸುತ್ತಿದ್ದಾರೆ. ಈ ಕ್ರಮ ಎಷ್ಟು ದಿನಗಳವರೆಗೆ ಮುಂದುವರಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಈ ವ್ಯವಸ್ಥೆ ನಿರಂತರವಾಗಿ ಮುಂದುವರಿದರೆ ಇಲಾಖೆ ಪ್ರಶಂಸೆಗೆ ಪಾತ್ರವಾಗಲಿದೆ. ಇದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
-ಹೇಮಂತ್‌, ಮೊಬೈಲ್‌ ಅಂಗಡಿ ಮಾಲೀಕ

ಪಟ್ಟಣದ ರಸ್ತೆಗಳಲ್ಲಿ ಸಂಜೆ ವೇಳೆಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರು ಸಂಚಾರ ಮಾಡಲು ತೊಂದರೆಯಾಗುವುದರ ಜತೆಗೆ ಮಕ್ಕಳು ಅಂಗಡಿ ಮುಂಗಟ್ಟುಗಳಿಗೆ ತೆರಳಲು ಹರಸಾಹಸಪಡಬೇಕಾಗಿತ್ತು. ಪೊಲೀಸ್‌ ಇಲಾಖೆಯ ಕ್ರಮದಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆ. ಈ ಕಾರ್ಯ ನಿರಂತ‌ರವಾಗಿರಲಿ.
-ಕೆ.ಪರಮೇಶ್‌, ಪಟ್ಟಣದ ನಿವಾಸಿ

ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಅನುಕೂಲ ಕಲ್ಪಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಪ್ರತಿಯೊಬ್ಬರೂ ಅಗತ್ಯ ಸಹಕಾರ ನೀಡುವುದರ ಜತೆಗೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
-ಸುಬ್ರಹ್ಮಣ್ಯ, ಪೊಲೀಸ್‌ ಉಪನಿರೀಕ್ಷಕ

ಪಟ್ಟಣದಲ್ಲಿ ಸಂಚಾರ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪ್ರಾಯೋಗಿಕವಾಗಿ ಮೂರು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ದಿನಾಂಕ ನಿಗದಿಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ಕಾರ್ಯವನ್ನು ಎಲ್ಲಾ ರಸ್ತೆಗಳಿಗೂ ವಿಸ್ತರಿಸಲಾಗುವುದು.
-ಪಿ.ಕೆ.ರಾಜು, ಪೊಲೀಸ್‌ ವೃತ್ತ ನಿರೀಕ್ಷಕ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.