ಬೇಟಿ ಬಚಾವೊ ಬೇಟಿ ಪಡಾವೊ ಹೆಸರಿನಲ್ಲಿ ವಂಚನೆ: ಎಚ್ಚರಿಕೆ
Team Udayavani, Jul 21, 2019, 5:35 AM IST
ಉಡುಪಿ: ‘ಬೇಟಿ ಬಚಾವೊ ಬೇಟಿ ಪಡಾವೊ’ ಕಾರ್ಯಕ್ರಮದಡಿಯಲ್ಲಿ 2 ಲಕ್ಷ ರೂ. ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು/ಸ್ವಯಂ ಸೇವಾ ಸಂಸ್ಥೆಗಳ/ವ್ಯಕ್ತಿಗಳು ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಕೇಂದ್ರಸರಕಾರದ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿದ್ದು, ವಂಚಕರ ವಿರುದ್ಧ ಜಾಗರೂಕರಾಗಿರುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
ಈ ಯೋಜನೆಯಡಿ ಯಾರಿಗೂ ನಗದು ವಿತರಿಸುವುದಿಲ್ಲ. ಅನಧಿಕೃತ ಸಂಸ್ಥೆಗಳು/ ವ್ಯಕ್ತಿಗಳು ಯೋಜನೆಯಡಿ ಹಣ ನೀಡಿ ಮೋಸಮಾಡುತ್ತಿವೆ. ವಂಚಕರ ವಿರುದ್ಧ ಕ್ರಮತೆಗೆದುಕೊಳ್ಳಲಾಗುವುದು. ಪ್ರಕರಣಗಳು ಬೆಳಕಿಗೆ ಬಂದ ಕಡೆಗಳಲ್ಲಿ ಪೊಲೀಸ್ ದೂರು ದಾಖಲಿಸಲಾಗಿದೆ. ವಂಚಕರ ಬಲೆಗೆ ಬೀಳದಂತೆ, ಅವರಿಗೆಯಾವುದೇ ವೈಯಕ್ತಿಕ ದಾಖಲೆಗಳನ್ನುನೀಡದಂತೆ ಸಾರ್ವಜನಿಕರಿಗೆ ಸಲಹೆ/ಸೂಚನೆ ನೀಡಲಾಗಿದೆ. ವಂಚಕ ವ್ಯಕ್ತಿಗಳ/ಸಂಸ್ಥೆಗಳ ಹೆಸರನ್ನು ಠಾಣೆಗೆ ತಿಳಿಸುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.