ನಾಳೆ ಅಂತಿಮ? ವಿಶ್ವಾಸದ ಆತಂಕದ ನಡುವೆ ಅತೃಪ್ತರ ಮನವೊಲಿಕೆ ಯತ್ನ
ನಾಳೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ
Team Udayavani, Jul 21, 2019, 6:00 AM IST
ಬೆಂಗಳೂರು: ಸೋಮವಾರದ ವಿಶ್ವಾಸಮತ ಆತಂಕದ ನಡುವೆಯೇ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಂಬೈನಲ್ಲಿರುವ ಅತೃಪ್ತ ಶಾಸಕರ ಮನವೊಲಿಕೆಯ ಕೊನೇ ಪ್ರಯತ್ನದಲ್ಲಿ ಶನಿವಾರ ನಿರತರಾಗಿದ್ದರು.
ಬೆಂಗಳೂರಿನ ನಾಲ್ವರು ಶಾಸಕರು ವಾಪಸ್ ಬಂದರೆ ಸರ್ಕಾರ ಸೇಫ್ ಆದಂತೆಯೇ ಎಂಬ ತೀರ್ಮಾನಕ್ಕೆ ಬಂದಿರುವ ದೋಸ್ತಿ ನಾಯಕರು ಅವರನ್ನು ವಾಪಸ್ ಕರೆಸುವ ಮಾರ್ಗೋಪಾಯಗಳ ಬಗ್ಗೆ ನಿರಂತರ ಸಮಾಲೋಚನೆ ಹಾಗೂ ರಹಸ್ಯ ಕಾರ್ಯತಂತ್ರಗಳಲ್ಲಿ ಮುಳುಗಿದ್ದರು.
ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಹಿರಿಯ ಶಾಸಕ ರಾಮಲಿಂಗಾರೆಡ್ಡಿಯವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸುಮಾರು ಒಂದು ಗಂಟೆ ಕಾಲ ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹಾಜರಿದ್ದರು. ಮುಂಬೈ ಸೇರಿರುವ ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್, ಗೋಪಾಲಯ್ಯ ಅವರನ್ನು ವಾಪಸ್ ಕರೆಸಿ, ನಿಮ್ಮ ಮಾತು ಕೇಳಬಹುದು ಎಂದು ದೇವೇಗೌಡರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು.
ಅತೃಪ್ತ ಶಾಸಕರ ಸಮಸ್ಯೆಗಳೇನೇ ಇದ್ದರೂ ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಸೋಮವಾರದ ಅಧಿವೇಶನಕ್ಕೆ ಅವರು ಬರುವಂತೆ ಮಾಡಿ ಎಂದು ಕೇಳಿದರು ಎಂದು ಹೇಳಲಾಗಿದೆ.
ಆದರೆ, ರಾಮಲಿಂಗಾರೆಡ್ಡಿಯವರು, ಈಗ ನನಗೂ ಆ ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ. ಆದರೂ ಪ್ರಯತ್ನಪಡುತ್ತೇನೆ ಎಂದಿದ್ದಾರೆ. ಸಾಧ್ಯವಾದರೆ, ರಾಮಲಿಂಗಾರೆಡ್ಡಿ ಅವರನ್ನು ಭಾನುವಾರ ಮುಂಬೈಗೆ ಕಳುಹಿಸುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಹ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚಿಸಿದರು. ನಂತರ ಸಚಿವ ಡಿ.ಕೆ.ಶಿವಕುಮಾರ್ ಸಹ ಸಮಾಲೋಚನೆ ನಡೆಸಿದರು.
ಇತ್ತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ತಾಜ್ ವಿವಾಂತ ಹೋಟೆಲ್ಗೆ ಹೋಗಿ ಶಾಸಕರ ಜತೆ ಸಮಾಲೋಚನೆ ನಡೆಸಿದರು. ಜತೆಗೆ, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.
ಇದರ ನಡುವೆ, ಶುಕ್ರವಾರ ಮಧ್ಯರಾತ್ರಿ ಸಚಿವ ಜಮೀರ್ ಆಹಮದ್ ಅವರು ಹೃದಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರನ್ನು ಭೇಟಿ ಮಾಡಿ ಸೋಮವಾರ ವಿಶ್ವಾಸಮತ ಸಂದರ್ಭದಲ್ಲಿ ಸದನಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಅಂತಿಮ ಲೆಕ್ಕಾಚಾರ: ಮುಂಬೈ ಸೇರಿರುವ ಹದಿನೈದು ಜನ ಶಾಸಕರನ್ನು ಹೇಗಾದರೂ ಮಾಡಿ ಸಂಪರ್ಕಿಸಿ ವಾಪಸ್ ಕರೆಸಬೇಕು. ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದಿರುವುದರಿಂದ ಅವರ ಮೂಲಕ ಬೆಂಗಳೂರಿನ ಶಾಸಕರನ್ನು ವಾಪಸ್ ಕರೆಸಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ನಾಯಕರದು.
ಈ ನಡುವೆ ರೆಸಾರ್ಟ್‌ನಿಂದ ಮತ್ತೆ ನಗರದಲ್ಲಿ ತಾಜ್ ವಿವಾಂತ್ ಹೊಟೇಲ್ಗೆ ಕಾಂಗ್ರೆಸ್ ಶಾಸಕರು ಸ್ಥಳಾಂತರಗೊಂಡಿದ್ದಾರೆ. ಬಹುತೇಕ ಶಾಸಕರು ಹೊಟೇಲ್ನಲ್ಲಿ ಉಳಿದುಕೊಳ್ಳಲು ಆಕ್ಷೇಪ ವ್ಯಕ್ತಪಡಿಸಿ, ಹೋಗುವವರು ಎಷ್ಟೇ ಕಾಯ್ದರೂ ಹೋಗುತ್ತಾರೆ. ನಾವ್ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಕಳೆದ ಹತ್ತು ದಿನಗಳಿಂದ ಕ್ಷೇತ್ರಗಳಿಗೆ ತೆರಳಿಲ್ಲ. ಕ್ಷೇತ್ರಕ್ಕೆ ಹೋಗಿ ಬರಲು ಅವಕಾಶ ನೀಡುವಂತೆ ಕೆಲವು ಶಾಸಕರು ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡು ತಮ್ಮ ಕ್ಷೇತ್ರಗಳಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 20 ರಿಂದ 25 ಕಾಂಗ್ರೆಸ್ ಶಾಸಕರು ಮಾತ್ರ ಹೊಟೇಲ್ನಲ್ಲಿ ಉಳಿದುಕೊಂಡಿದ್ದಾರೆ.
-ರಾಮಲಿಂಗಾರೆಡ್ಡಿ, ಕಾಂಗ್ರೆಸ್ ನಾಯಕ
-ಯು.ಟಿ. ಖಾದರ್, ನಗರಾಭಿವೃದ್ಧಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.