ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲ ಬಳಸಿ
ಮಹಿಳಾ ಸ್ವ-ಸಹಾಯ ಸಂಘಗಳಿಗೆ ವೇದಿಕೆ •ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯ
Team Udayavani, Jul 21, 2019, 10:41 AM IST
ಕಲಬುರಗಿ: ಮನೆಯಲ್ಲಿ ತಯಾರಿಸಿದ ಬಟ್ಟೆ ಚೀಲಗಳನ್ನು ಪ್ರದರ್ಶಿಸಿದ ಮಹಿಳಾ ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು.
ಕಲಬುರಗಿ: ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಚೀಲ ಬಳಕೆಗೆ ಪ್ರೋತ್ಸಾಹ ಮತ್ತು ಪ್ರೇರಣೆ ನೀಡುವ ನಿಟ್ಟಿನಲ್ಲಿ ಕಲಬುರಗಿ ಮಹಾನಗರ ಪಾಲಿಕೆ ವಿನೂತನ ಮಾರ್ಗ ಕಂಡುಕೊಂಡಿದೆ. ಬಟ್ಟೆ ಚೀಲ ತಯಾರಿಕೆ ಮತ್ತು ಮಾರಾಟಕ್ಕೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ.
ಪ್ಲಾಸ್ಟಿಕ್ ಮೇಲಿನ ಜನರ ವ್ಯಾಮೋಹದಿಂದ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು ಸವಾಲಾಗಿದೆ. ಹೀಗಾಗಿ ಪ್ಲಾಸ್ಟಿಕ್ ಬದಲಿಗೆ ಬಳಸಬಹುದಾದ ಪರ್ಯಾಯ ವಸ್ತುಗಳ ಬಗ್ಗೆ ಪಾಲಿಕೆಯೇ ಚಿತ್ತ ಹರಿಸಿದ್ದು, ಮಾರುಕಟ್ಟೆಯಲ್ಲಿ ಬಟ್ಟೆ ಚೀಲಗಳು ಯಥೇಚ್ಛ ಪ್ರಮಾಣದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಲು ಮುಂದಾಗಿದೆ.
ದೀನ್‌ದಯಾಳ್ ಅಂತೋದಯ ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ (ಡೇ-ನಲ್ಮ)ಯಡಿ ನೋಂದಾಯಿತ ಮಹಿಳಾ ಸಂಘಗಳ ಮಹಿಳೆಯರಿಗೆ ಬಟ್ಟೆ ಚೀಲ ತಯಾರಿಕೆಗೆ ಪ್ರೋತ್ಸಾಹಿಸಲಾಗುತ್ತಿದೆ. ಅಷ್ಟೇ ಅಲ್ಲ, ಆರಂಭಿಕವಾಗಿ ಪಾಲಿಕೆ ಆವರಣದಲ್ಲಿ ಬಟ್ಟೆ ಚೀಲಗಳ ಮಾರಾಟಕ್ಕೆ ಮಹಿಳೆಯರಿಗೆ ಮಳಿಗೆ ಕಲ್ಪಿಸಲಾಗಿದೆ.
ಬಟ್ಟೆ ಚೀಲ ಬಳಸಿ: ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಮತ್ತು ಉತ್ಪನ್ನಗಳು ಪರಿಸರಕ್ಕೆ ಮಾರಕವಾಗಿವೆ. ಜನರ ಆರೋಗ್ಯದ ಮೇಲೂ ಪ್ಲಾಸ್ಟಿಕ್ ಕೆಟ್ಟ ಪರಿಣಾಮ ಬೀರುತ್ತಿದೆ. ಕಸ ವಿಲೇವಾರಿ ಹಾಗೂ ಚರಂಡಿಯೊಳಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು ಸೇರಿಕೊಳ್ಳುವುದರಿಂದ ನಗರದ ನೈರ್ಮಲ್ಯ ಕಾಪಾಡಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವುದರ ಜತೆಗೆ ಪ್ಲಾಸ್ಟಿಕ್‌ನ ಪರ್ಯಾಯ ವಸ್ತುಗಳ ಬಗ್ಗೆ ಸಾರ್ವಜನಿಕರು ಮತ್ತು ವರ್ತಕರಿಗೆ ಮನವರಿಕೆ ಮಾಡಿಸಲಾಗುವುದು ಎನ್ನುತ್ತಾರೆ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್.
ಕಾನೂನು ಬಾಹಿರವಾಗಿ ಯಾರೂ ಪ್ಲಾಸ್ಟಿಕ್ ಬಳಸಬಾರದು. ಹೋಟೆಲ್, ಕಿರಾಣಿ ಅಂಗಡಿಯವರು ಮತ್ತು ಹಣ್ಣು, ತರಕಾರಿ ಮಾರಾಟಗಾರರು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ನಲ್ಲಿ ಯಾವುದೇ ಆಹಾರ, ಸಾಮಗ್ರಿಗಳನ್ನು ನೀಡಬಾರದು. ಜನತೆ ಪ್ಲಾಸ್ಟಿಕ್ ಬಳಕೆಯಿಂದ ದೂರ ಇರಬೇಕು. ಬಟ್ಟೆ ಚೀಲ ಬಳಕೆ ಮಾಡಬೇಕು. ಎಲ್ಲರ ಸಹಕಾರದಿಂದ ಮಾತ್ರ ಪ್ಲಾಸ್ಟಿಕ್ ನಿಯಂತ್ರಣ ಸಾಧ್ಯವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಬೇಡಿಕೆ ಅನುಸಾರ ಉತ್ಪನ್ನ: ಮಹಾನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡೇ-ನಲ್ಮ ಅಡಿಯ ಮಹಿಳಾ ಸ್ವ-ಸಹಾಯ ಸಂಘಗಳನ್ನು ಒಗ್ಗೂಡಿಸಿ ಬಟ್ಟೆ ಚೀಲ ಉತ್ಪನ್ನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. 8X12, 12X15, 12X18 ಇಂಚಿನ ಮೂರು ವಿವಿಧ ಬಟ್ಟೆ ಚೀಲಗಳನ್ನು ತಯಾರಿಸಲಾಗಿದೆ. ಸಾರ್ವಜನಿಕರು, ವ್ಯಾಪಾರಿಗಳ ಬೇಡಿಕೆ ಅನುಸಾರ ಚೀಲಗಳನ್ನು ಉತ್ಪಾದಿಸಲು ಪ್ರೋತ್ಸಾಹಿಸಲಾಗುವುದು ಎಂದು ಪಾಲಿಕೆ ಸಮುದಾಯ ವ್ಯವಹಾರಿಕ ಅಧಿಕಾರಿ ವಿಜಯಲಕ್ಷ್ಮೀ ಪಟ್ಟೇದಾರ ಹೇಳುತ್ತಾರೆ.
ಹೊಸ ಪ್ರಯತ್ನ: ನಗರದಲ್ಲಿ ಸುಮಾರು ಒಂದು ಸಾವಿರ ಮಹಿಳಾ ಸಂಘಗಳು ಕಾರ್ಯನಿವರ್ಹಿಸುತ್ತಿವೆ. ಅನೇಕ ಸಂಘಗಳ ಪ್ರತಿನಿಧಿಗಳು ಬ್ಯೂಟಿ ಪಾರ್ಲರ್ ಮತ್ತಿತರ ಸ್ವಾವಲಂಬಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಇದೇ ಮೊದಲ ಬಾರಿಗೆ ಪಾಲಿಕೆ ಸಹಯೋಗದಲ್ಲಿ ಬಟ್ಟೆ ಚೀಲ ಉತ್ಪನ್ನ ಹಾಗೂ ಮಾರಾಟಕ್ಕೆ ಪ್ರೋತ್ಸಾಹ ನೀಡಿದೆ. ಇದೊಂದು ಹೊಸ ಪ್ರಯತ್ನ. ನಮ್ಮ ಮನೆಗಳಲ್ಲಿ ಬಟ್ಟೆ ಚೀಲ ತಯಾರಿಸುತ್ತೇವೆ. ಕಡಿಮೆ ದರದಲ್ಲಿ ಬಟ್ಟೆ ಚೀಲಗಳು ಲಭ್ಯ ಇರುತ್ತವೆ ಎಂದು ಜೈ ಕನ್ನಡಾಂಬೆ ಜಿಲ್ಲಾ ಮಟ್ಟದ ಕಲ್ಯಾಣಾಭಿವೃದ್ಧಿ ಸಂಘದ ಅಧ್ಯಕ್ಷೆ ಅರ್ಚನಾ ಟೆಂಗಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.