ಶಿಕ್ಷಕರ ಕಡ್ಡಾಯ ವರ್ಗಾವಣೆ ಖಂಡಿಸಿ ಪ್ರತಿಭಟನೆ
Team Udayavani, Jul 21, 2019, 11:19 AM IST
ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಪಡಿಸಲು ಆಗ್ರಹಿಸಿ ನಗರ ವಲಯದ ಶಿಕ್ಷಕರು ಪ್ರತಿಭಟನೆ ನಡೆಸಿದರು.
ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ನಗರ ವಲಯದ ಶಿಕ್ಷಕರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಡ್ಡಾಯ ವರ್ಗಾವಣೆ ನಿಯಮ ಅವೈಜ್ಞಾನಿಕವಾಗಿದೆ. ಇದರಿಂದ ಅನೇಕ ಶಿಕ್ಷಕರು ತೊಂದರೆ ಅನುಭವಿಸುವಂತಾಗಿದೆ. ಒಂದು ಕಡೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೂಡಲೇ ವರ್ಗಾವಣೆ ಮಾಡುತ್ತಿರುವುದರಿಂದ ಶಿಕ್ಷಕರಿಗೆ ಕೌಟುಂಬಿಕವಾಗಿ ಸಮಸ್ಯೆ ಆಗುತ್ತದೆ. ಕೂಡಲೇ ಈ ನಿಯಮವನ್ನು ಕೈಬಿಟ್ಟು ಮೊದಲಿನ ನಿಯಮದಂತೆಯೇ ವರ್ಗಾವಣೆ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪತಿ-ಪತ್ನಿ ಇಬ್ಬರೂ ಶಿಕ್ಷಕರಿದ್ದರೆ ಅವರಿಗೆ ಒಂದೇ ಕಡೆ ವರ್ಗಾವಣೆ ಕೊಡಲಾಗುತ್ತಿದೆ. ಆದರೆ ಒಬ್ಬರೇ ಶಿಕ್ಷಕರಿದ್ದರೆ ಅಂಥವರಿಗೆ ಕೋರಿಕೆ ಮೇರೆಗೆ ವರ್ಗಾವಣೆ ನೀಡದೇ ಅನ್ಯಾಯ ಮಾಡಲಾಗುತ್ತಿದೆ. ಇದರಿಂದ ಅನೇಕರಿಗೆ ಸಮಸ್ಯೆಯಾಗುತ್ತಿದೆ. ಒಂದು ಊರಿನಲ್ಲಿ ಮನೆ ಇದ್ದರೆ ಇನ್ನೊಂದು ದೂರದ ಊರಿಗೆ ಹೋಗಿ ಕೆಲಸ ನಿರ್ವಹಿಸುವಂತಾಗಿದೆ. ಕೆಲವರು ಬಾಡಿಗೆ ಮನೆಯಲ್ಲಿಯೇ ವಾಸಿಸುವ ಪ್ರಸಂಗ ಉಂಟಾಗಿದೆ. ಹೀಗಾಗಿ ಈ ನಿಯಮ ಕೈಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಗರ ಘಟಕದ ಅಧ್ಯಕ್ಷ ಎಂ.ಜಿ. ಪಾಟೀಲ, ಶಿಕ್ಷಕರಾದ ಲಕ್ಷ್ಮೀ ಗುರವ, ಎಸ್.ಬಿ. ನಾವಲಗಿ, ಅನಂತ ಮರೆನ್ನವರ, ಜಯಶ್ರೀ ಪಾಟೀಲ, ಬಾಬು ಸೊಗಲನ್ನವರ, ಪಿ.ಬಿ. ಗಿರೆಪ್ಪಗೌಡರ, ಆರ್.ಡಿ. ಬೋಗಾರ, ರೇಖಾ ಅಂಗಡಿ, ಆರ್.ಎಂ. ಸಿಂಗದ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.