![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 21, 2019, 11:25 AM IST
ರಾಯಬಾಗ: ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ತಹಶೀಲ್ದಾರ್ ಡಿ.ಎಚ್. ಕೋಮಾರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ರಾಯಬಾಗ: ಅಖೀಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಡಿ.ಎಚ್. ಕೋಮಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಕೆಲ ದಿನಗಳ ಹಿಂದೆ ಭೂ ಕಲಹಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಒಂದೇ ಕುಟುಂಬದ ಹತ್ತು ಜನರ ಹತ್ಯೆ ಖಂಡಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೊರಟಾಗ ರಸ್ತೆಯಲ್ಲಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಉತ್ತರ ಪ್ರದೇಶ ಸರಕಾರದ ಧೋರಣೆ ಖಂಡಿಸಿದರು.
ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಉತ್ತರ ಪ್ರದೇಶ ಸರಕಾರ ಮತ್ತು ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ, ಮಹಾವೀರ ಮೊಹಿತೆ, ಅಪ್ಪಾಸಾಬ ಕುಲಗುಡೆ, ದಿಲೀಪ ಜಮಾದಾರ, ನಾಮದೇವ ಕಾಂಬಳೆ, ಕುಂತಿನಾಥ ಮಗದುಮ್, ಧೂಳಗೌಡ ಪಾಟೀಲ, ವಿಠuಲ ಬಂಡಗಾರ, ಮಾರುತಿ ನಾಯಿಕ, ಜಿನೇಶ್ವರ ಮಗದುಮ್ಮ, ಸುಭಾಷ ಕೋಟಿವಾಲೆ, ರಾಜು ಶಿರಗಾಂವೆ, ಶ್ರವಣ ಕಾಂಬಳೆ, ಸಿದ್ರಾಮ ಪೂಜಾರಿ, ಹಾಜಿ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.