ಪ್ರಾಥಮಿಕ ಸಹಕಾರಿ ಸಂಸ್ಥೆಗಳಿಗೆ ಸ್ವಂತ ಶಕ್ತಿ ಅಗತ್ಯ

ಲಾಭ ಗಳಿಕೆಗೆ ಸಹಕಾರಿ ಸಂಸ್ಥೆಗಳು ಗಮನ ನೀಡಲಿ: ಆರ್‌.ಎಂ. ಮಂಜುನಾಥ ಗೌಡ

Team Udayavani, Jul 21, 2019, 11:47 AM IST

21-July-18

ಸಾಗರ: ಮಲೆನಾಡು ಸಿರಿ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಸನ್ಮಾನ ಸ್ವೀಕರಿಸಿದರು.

ಸಾಗರ: ಪ್ರಾಥಮಿಕ ಸಹಕಾರಿ ಸಂಸ್ಥೆಗಳು ಎಲ್ಲದಕ್ಕೂ ಡಿಸಿಸಿ ಬ್ಯಾಂಕ್‌ ಅವಲಂಬಿಸುವ ಬದಲು ಸ್ವಂತ ಕಾಲಿನ ಮೇಲೆ ನಿಲ್ಲುವ ಪ್ರಯತ್ನ ನಡೆಸಬೇಕು. ರೈತರಿಗೆ ಕೇವಲ ಬೆಳೆಸಾಲ ನೀಡಲು ಮಾತ್ರ ಸೀಮಿತವಾಗದೆ ಇತರ ಮೂಲಗಳಿಗೂ ಸಾಲ ನೀಡಿ ಲಾಭದಾಯಕ ಸ್ಥಿತಿಯತ್ತ ಹೆಜ್ಜೆ ಇರಿಸಬೇಕು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ತಿಳಿಸಿದರು.

ನಗರದ ಮಲೆನಾಡು ಸಿರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ, ಪಿಗ್ಮಿ ಸಂಗ್ರಹಕಾರರು ಮತ್ತು ಡಿಸಿಸಿ ಬ್ಯಾಂಕ್‌ ಸಿಬ್ಬಂದಿಗಳ ಸಂಘಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪಕ್ಕದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶೇ. 80ರಷ್ಟು ಪ್ರಾಥಮಿಕ ಸಹಕಾರಿ ಸಂಘಗಳು ಡಿಸಿಸಿ ಬ್ಯಾಂಕ್‌ ಸಾಲ ಪಡೆಯದೆ ಬೇರೆ ಬೇರೆ ವಿಧದಲ್ಲಿ ವಹಿವಾಟು ನಡೆಸಿ, ಲಾಭ ಗಳಿಸುವ ಮೂಲಕ ಸ್ವತಂತ್ರ ಅಸ್ತಿತ್ವ ಕಂಡುಕೊಂಡಿವೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಇದು ಮೊದಲ್ಗೊಳ್ಳಬೇಕು ಎಂದರು.

ಇತ್ತೀಚಿನ ವರ್ಷಗಳಲ್ಲಿ ಸಹಕಾರಿ ನಿಯಮ, ಕಾನೂನುಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಆಗುವ ಬದಲಾವಣೆ ಮನಗಂಡು ಬದಲಾವಣೆ ಜೊತೆ ಹೆಜ್ಜೆ ಹಾಕುವುದು ಅನಿವಾರ್ಯ. ಈ ಬಗ್ಗೆ ಸದಸ್ಯರಿಗೆ, ರೈತರಿಗೆ ಅರಿವು ಮೂಡಿಸಬೇಕು. ಡಿಸಿಸಿ ಬ್ಯಾಂಕ್‌ ಬಗ್ಗೆ ಎಲ್ಲಿಯೋ ಕುಳಿತು ಮಾತನಾಡುವುದನ್ನು ಬಿಟ್ಟು, ವಾಸ್ತವತೆ ಅರಿಯುವ ಪ್ರಯತ್‌ ನಡೆಸಬೇಕು. ಜಿಲ್ಲೆಯಲ್ಲಿ 483 ಕೋಟಿ ರೂ. ಸಾಲ ಜೂನ್‌ ಅಂತ್ಯದವರೆಗೆ ಸಾಲ ನೀಡಿದೆ. ಇನ್ನೂ 150 ಕೋಟಿ ರೂ. ಸಾಲದ ಬೇಡಿಕೆ ಇದೆ. ಅಪ್ಪ ದುಡ್ಡು ಕೊಡುತ್ತಾನೆ, ಮಗ ಖರ್ಚು ಮಾಡುತ್ತಾನೆ ಎನ್ನುವಂತೆ ಆಗದೆ, ಕೊಟ್ಟ ಸಾಲ ಸದ್ಬಳಕೆ ಮಾಡಿಕೊಳ್ಳಬೇಕು. ಸಹಕಾರಿ ಸಂಸ್ಥೆಗಳು ಲಾಭ ಉದ್ದೇಶದ ಸಂಸ್ಥೆಗಳಲ್ಲ. ಬದಲಾಗಿ ಇದೊಂದು ಸೇವಾಕ್ಷೇತ್ರವಾಗಿದೆ. ನಷ್ಟ ಅನುಭವಿಸದೆ, ಸರಿದೂಗಿಸಿಕೊಂಡು ಹೋಗುವ ಕೆಲಸವನ್ನು ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಂ.ಕೆ. ಚನ್ನವೀರಪ್ಪ ಮಾತನಾಡಿ, ಡಿಸಿಸಿ ಬ್ಯಾಂಕ್‌ನ ನೌಕರರು ಮಾಡಿದ ಲೋಪದಿಂದ ಬ್ಯಾಂಕ್‌ ಸಂಕಷ್ಟಕ್ಕೆ ಒಳಗಾಗಿದ್ದಾಗ ಆರ್‌.ಎಂ. ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಬ್ಯಾಂಕ್‌ ಪುನಶ್ಚೇತನಗೊಳ್ಳಲು ಆಡಳಿತ ಮಂಡಳಿ ಹೆಚ್ಚು ಪರಿಶ್ರಮ ಪಟ್ಟಿದೆ. ಈ ಸಂದರ್ಭದಲ್ಲಿ ಸಾಗರ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳು ಬ್ಯಾಂಕ್‌ ಬೆನ್ನಿಗೆ ನಿಂತು ಬೆಂಬಲ ನೀಡಿರುವುದು ಸ್ಮರಣಾರ್ಹ ಸಂಗತಿ. ತಾಲೂಕಿಗೆ ಸುಮಾರು 70 ಕೋಟಿ ರೂ. ಶೂನ್ಯ ಬಡ್ಡಿದರದಲ್ಲಿ ಸಾಲ- ಸೌಲಭ್ಯವನ್ನು ನೀಡಲಾಗಿದೆ. ಕಳೆದ ಮೂರು ವರ್ಷದಲ್ಲಿ ಅಪಪ್ರಚಾರದ ನಡುವೆಯೂ ಬ್ಯಾಂಕ್‌ 850 ಕೋಟಿ ರೂ. ಠೇವಣಿ ಸಂಗ್ರಹ ಮಾಡಿದೆ. ಮಂಜುನಾಥ ಗೌಡರು ಈ ಬಾರಿ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಬ್ಯಾಂಕ್‌ ನಿರ್ದೇಶಕ ಶ್ರೀಪಾದ ಹೆಗಡೆ ನಿಸ್ರಾಣಿ ಮಾತನಾಡಿ, ಸಣ್ಣ ಮತ್ತು ಅತಿಸಣ್ಣ ರೈತರು ಡಿಸಿಸಿ ಬ್ಯಾಂಕ್‌ನಿಂದ ಸಾಕಷ್ಟು ಸಾಲ ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢರಾಗಿದ್ದಾರೆ. ರೈತರು ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಡಿಸಿಸಿ ಬ್ಯಾಂಕ್‌ ಪರ ನಿಲ್ಲುವ ಅಗತ್ಯವಿದೆ. ಇದರಿಂದ ಡಿಸಿಸಿ ಬ್ಯಾಂಕ್‌ ಮೂಲಕ ಇನ್ನಷ್ಟು ಸೌಲಭ್ಯಗಳನ್ನು ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ತಲುಪಿಸಲು ಸಾಧ್ಯವಾಗುತ್ತದೆ. ಗೌಡರು ಸತತ 10 ಬಾರಿ ಬ್ಯಾಂಕ್‌ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಡಿಸಿಸಿ ಬ್ಯಾಂಕ್‌ 1500 ಕೋಟಿ ವಹಿವಾಟು ಹೊಂದಿದೆ ಎಂದು ಹೇಳಿದರು.

ಗುರುಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಅಗಡಿ ಅಶೋಕ್‌, ಪರಮೇಶ್ವರ ಎಚ್.ಕೆ., ಯೋಗೀಶ್‌, ತಾಪಂ ಉಪಾಧ್ಯಕ್ಷ ಅಕ್ಕಿ ಪರಶುರಾಮ್‌, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ರವಿಕುಮಾರ್‌ ಹುಣಾಲಮಡಿಕೆ, ನಿರ್ದೇಶಕ ಕೆ. ಹೊಳೆಯಪ್ಪ, ಟಿಎಪಿಎಂಸಿಎಸ್‌ ಅಧ್ಯಕ್ಷ ವಿರೇಶ್‌ ಗೌಡ, ವ್ಯವಸಾಪ§ಕ ನಿದೇಶಕ ರಾಜಣ್ಣ ರೆಡ್ಡಿ, ಲೆಕ್ಕ ಪರಿಶೋಧಕ ಶಿವಪ್ಪ ವಿ.ಸಿ. ಇನ್ನಿತರರು ಇದ್ದರು.

ಸಾಧನ ಕಲಾ ಬಳದ ಸದಸ್ಯರು ಪ್ರಾರ್ಥಿಸಿದರು. ರಮೇಸ್‌ ಎಸ್‌.ಎಸ್‌. ಸ್ವಾಗತಿಸಿದರು. ಎಚ್.ಕೆ. ವೆಂಕಟೇಶ್‌ ಹುಲಿಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಮೇಶ್ವರ ಕರೂರು ನಿರೂಪಿಸಿದರು.

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5-uv-fusion

UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.