ಉದ್ಯೋಗ ಖಾತ್ರಿಯಿಂದ ಗ್ರಾಮೀಣ ಅಭಿವೃದ್ಧಿ

•ರೋಜಗಾರ ದಿನಾಚರಣೆಯಲ್ಲಿ ಸಿಇಒ ಶ್ರಮದಾನ•ಅಧಿಕಾರಿಗಳಿಂದ ಯೋಜನೆಗಳ ಮಾಹಿತಿ ತಿಳಿದುಕೊಳ್ಳಿ

Team Udayavani, Jul 21, 2019, 12:29 PM IST

hv-tdy-4

ರಾಣಿಬೆನ್ನೂರ: ಹೊಸ ಚಂದಾಪುರ ಗ್ರಾಮದಲ್ಲಿ ನಡೆದ ವಿಶೇಷ ರೋಜಗಾರ್‌ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಕೆ.ಲೀಲಾವತಿ ಶ್ರಮದಾನ ಮಾಡಿದರು.

ರಾಣಿಬೆನ್ನೂರ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿಗೆ ತಂದಿದ್ದು, ಇಲಾಖೆ ಅಧಿಕಾರಿಗಳ ಮೂಲಕ ಮಾಹಿತಿ ತಿಳಿದುಕೊಂಡು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಲೀಲಾವತಿ ಹೇಳಿದರು.

ಶನಿವಾರ ತಾಲೂಕಿನ ಹೊಸ ಚಂದಾಪುರ ಗ್ರಾಮದಲ್ಲಿ ಜಿಪಂ, ತಾಪಂ, ಗ್ರಾಪಂ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿಶೇಷ ರೋಜಗಾರ ದಿನಾಚರಣೆ ಐಇಸಿ ಸಪ್ತಾಹ ಮತ್ತು ಜಲಶಕ್ತಿ ಅಭಿಯಾನ ಹಾಗೂ ಕೆರೆ ಹೂಳೆತ್ತುವ ಕಾರ್ಯಕ್ರಮದಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಗ್ರಾಮಗಳಿಗೆ ವರದಾನವಾಗಿವೆ. ಒಂದು ಕುಟುಂಬಕ್ಕೆ 100ದಿನಗಳ ಉದ್ಯೋಗ ನೀಡುವುದು. ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಒದಗಿಸುವ ಹಾಗೂ ನೈಸರ್ಗಿಕ ಸಂಪನ್ಮೂಲ ಬಲಪಡಿಸುವ ಹಿತ ದೃಷ್ಟಿಯಿಂದ ಮತ್ತು ವಲಸೆ ಹೋಗುವುದನ್ನು ತಡೆಗಟ್ಟಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶ ಈ ಯೋಜನೆಯದ್ದಾಗಿದೆ ಎಂದರು.

ಈ ಯೋಜನೆಯಲ್ಲಿ ಹೆಣ್ಣು ಮತ್ತು ಗಂಡು ಸಮಾನ ಕೂಲಿ ಪಡೆಯಬಹುದು. ಈ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾಹಿತಿ ಇಲ್ಲದವರು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು ಉದ್ಯೋಗ ಚೀಟಿಯನ್ನು ಮಾಡಿಸಿಕೊಳ್ಳಬಹುದು. ಕೇವಲ ಇದೊಂದೇ ಯೋಜನೆಯಲ್ಲ ಇನ್ನೂ ಹಲವಾರು ಯೋಜನೆಗಳು ನಿಮಗಾಗಿ ಕಾದಿವೆ. ಅವುಗಳ ಉಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಸಸಿಗಳನ್ನು ನೆಡುವುದರ ಮೂಲಕ ನೀರು ವಿನಾಕಾರಣ ದುರ್ಬಳಕೆ ಮಾಡದೆ ಮಿತವ್ಯಯದಿಂದ ಬಳಸುವ ಪ್ರವೃತ್ತಿ ಎಲ್ಲರಲ್ಲೂ ಬರಬೇಕು. ಹೆಚ್ಚೆಚ್ಚು ಗಿಡಮರಳನ್ನು ಬೆಳೆಸಿದರೆ ಅವುಗಳನ್ನು ಸಂರಕ್ಷಿಸಿದರೆ ಆಯಾ ಕಾಲಾವಧಿಗೆ ಮಳೆಯೂ ಚೆನ್ನಾಗಿ ಬರಲು ಸಾಧ್ಯವಾಗುತ್ತದೆ. ನಾವು ಪರಿಸರವನ್ನು ಕಾಪಾಡದೇ ಹೋದರೆ ಮುಂದಿನ ದಿನಮಾನಗಳಲ್ಲಿ ಜೀವನ ಸಾಗಿಸುವುದೇ ದುರಂತವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಪಂ ಅಧ್ಯಕ್ಷೆ ತಿರಕಮ್ಮ ಹರಿಜನ, ಉಪಾಧ್ಯಕ್ಷೆ ರತ್ನವ್ವ ಕರಿಗಾರ, ಸದಸ್ಯರಾದ ನಿಂಗವ್ವ ಹುಳ್ಯಾಳ, ಬಸಪ್ಪ ಲಮಾಣಿ, ಜೆ.ವಿ.ಪಾಟೀಲ, ಹನುಮಂತಪ್ಪ ರಾಮಣ್ಣನವರ, ಬಸನಗೌಡ ಸಂಕನಗೌಡ್ರ, ಪುಷ್ಪಾ ಹೊನ್ನತ್ತಿ, ಲಕ್ಷ್ಮಣ ದೀಪಾವಳಿ, ವಿಜಯಲಕ್ಷ್ಮಿ ಮಲ್ಲಾಡದ, ಪ್ರಕಾಶ ಶಿವಪೂರ, ಲಲಿತಾ ಹುಳ್ಯಾಳ, ತಾಪಂ ಇಒ ಶ್ಯಾಮಸುಂದರ ಕಾಂಬಳೆ, ತಾಪಂ ಸಹಾಯಕ ನಿರ್ದೇಶಕ ಅಶೋಕ ನಾರಜ್ಜಿ, ಪಿಡಿಒ ಹರೀಶ ಗೊಗ್ಗದ, ದಿಂಗಾಲೇಶ್ವರ ಅಂಗೂರ, ಆರ್‌.ಎನ್‌.ತೇಲ್ಕರ ಸೇರಿದಂತೆ ಕೂಲಿಕಾರ್ಮಿಕರು ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.