ಶ್ರೇಯಸ್‌ ಈಗ “ವಿಷ್ಣುಪ್ರಿಯ’

ಪಡ್ಡೆಹುಲಿ ಹುಡುಗನ ಹೊಸ ಚಿತ್ರ

Team Udayavani, Jul 22, 2019, 3:01 AM IST

shreyas

ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್‌ “ಪಡ್ಡೆಹುಲಿ’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದು ನಿಮಗೆ ನೆನಪಿರಬಹುದು. “ಪಡ್ಡೆಹುಲಿ’ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡದಿದ್ದರೂ, ನಟ ಶ್ರೇಯಸ್‌ ನಟನೆ, ಎನರ್ಜಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಶ್ರೇಯಸ್‌ ಸದ್ದಿಲ್ಲದೆ ತಮ್ಮ ಎರಡನೇ ಚಿತ್ರದ ತಯಾರಿ ಶುರು ಮಾಡಿದ್ದರು.

ಶ್ರೇಯಸ್‌ ಅಭಿನಯಿಸುತ್ತಿರುವ ಎರಡನೇ ಚಿತ್ರದ ಟೈಟಲ್‌ ಫಿಕ್ಸ್‌ ಆಗಿದೆ. ಚಿತ್ರಕ್ಕೆ “ವಿಷ್ಣುಪ್ರಿಯ’ ಎಂದು ಹೆಸರಿಡಲಾಗಿದ್ದು, ನೈಜ ಘಟನೆಯನ್ನ ಆಧರಿಸಿ ಈ ಚಿತ್ರ ತೆರೆಗೆ ಬರುತ್ತಿದೆ. ಎಲ್ಲರಿಗೂ ಗೊತ್ತಿರುವಂತೆ ನಿರ್ಮಾಪಕ ಕೆ.ಮಂಜು, ಡಾ.ವಿಷ್ಣುವರ್ಧನ್‌ ಅವರ ದೊಡ್ಡ ಅಭಿಮಾನಿ. ಅದೇ ಕಾರಣದಿಂದ ಮಗನ ಮೊದಲ ಚಿತ್ರ “ಪಡ್ಡೆಹುಲಿ’ಯಲ್ಲೂ ವಿಷ್ಣುವರ್ಧನ್‌ ಅವರ ಸ್ಮರಣೆ ಮಾಡಿದ್ದರು.

ಈಗ ಎರಡನೇ ಚಿತ್ರಕ್ಕೂ “ವಿಷ್ಣುಪ್ರಿಯ’ ಎಂಬ ಟೈಟಲ್‌ ಇಟ್ಟು, ವಿಷ್ಣುವರ್ಧನ್‌ ಮೇಲಿನ ಅಭಿಮಾನ ಮೆರೆದಿದ್ದಾರೆ ಕೆ.ಮಂಜು. ಇಲ್ಲಿಯವರೆಗೆ 25ಕ್ಕೂ ಹೆಚ್ಚು ಚಿತ್ರಗಳನ್ನು, ಹಲವು ಜಾಹೀರಾತುಗಳನ್ನು ನಿರ್ದೇಶಿಸಿರುವ ಮಲಯಾಳಂ ಮೂಲದ ನಿರ್ದೇಶಕ ವಿ.ಕೆ ಪ್ರಕಾಶ್‌, “ವಿಷ್ಣುಪ್ರಿಯ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಧಾರವಾಡದ ಸಿಂಧುಶ್ರೀ ಎಂಬ ಹುಡುಗಿಯ ಕಥೆ ಆಯ್ಕೆಯಾಗಿದೆ.

ನೈಜ ಘಟನೆಯನ್ನಾಧರಿಸಿದ ಕಥೆ ಇದಾಗಿದೆಯಂತೆ. ಈ ಹಿಂದೆ ಕೆ.ಮಂಜು ಅವರು “ಕೆ.ಮಂಜು ಸ್ಕ್ರಿಪ್ಟ್ ಯೋಜನೆ’ ಯಡಿ ಲೇಖಕರಿಂದ ಕಥೆ ಆಹ್ವಾನಿಸಿದ್ದರು. ಸುಮಾರು 50ಕ್ಕೂ ಹೆಚ್ಚು ಕಥೆಗಳು ಬಂದಿದ್ದು, ಅದರಲ್ಲಿ ಸಿಂಧುಶ್ರೀಯವರ ಕಥೆ ಆಯ್ಕೆಯಾಗಿದೆ. ಅಂದಹಾಗೆ, “ಪಡ್ಡೆಹುಲಿ’ ಚಿತ್ರದ ನಂತರ ಶ್ರೇಯಸ್‌ಗಾಗಿ ಇಲ್ಲಿಯವರೆಗೆ ಸುಮಾರು 85ಕ್ಕೂ ಹೆಚ್ಚು ಸ್ಕ್ರಿಪ್ಟ್ಗಳು ಬಂದಿದ್ದರೂ,

ಯಾವ ಕಥೆಯನ್ನೂ ಒಪ್ಪಿಕೊಂಡಿರದ ನಿರ್ಮಾಪಕ ಕೆ. ಮಂಜು, ಈ ಚಿತ್ರದ ಕಥೆ ನೈಜವಾಗಿದೆ ಮತ್ತು ಹೊಸತರವಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಳ್ಳಲಾಗಿದೆ ಎನ್ನುತ್ತಾರೆ. ಸದ್ಯ “ವಿಷ್ಣುಪ್ರಿಯ’ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಆಗಸ್ಟ್‌ನಲ್ಲಿ ಈ ಚಿತ್ರದ ಮುಹೂರ್ತ ನೆರವೇರಲಿದ್ದು, ಸೆಪ್ಟೆಂಬರ್‌ನಲ್ಲಿ “ವಿಷ್ಣುಪ್ರಿಯ’ ಚಿತ್ರದ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.