ಸುಂದರ ಪರಿಸರಕ್ಕಾಗಿ ಸ್ವಚ್ಛತೆ ಕಾಪಾಡಿಕೊಳ್ಳಿ
Team Udayavani, Jul 22, 2019, 3:00 AM IST
ನೆಲಮಂಗಲ: ಸುಂದರ ಹಾಗೂ ನೈರ್ಮಲ್ಯದ ಪರಿಸರಕ್ಕಾಗಿ ಸಮಾಜದ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಾಪಂ ಇಒ ಎಚ್.ಆರ್ ಹನುಮಂತರಾಯಪ್ಪ ಸಲಹೆ ನೀಡಿದರು. ತಾಲೂಕಿನ ವಿಶ್ವೇಶ್ವರಪುರ ಗ್ರಾಪಂ ಆವರಣದಲ್ಲಿ ಆಯೋಜಿಸಲಾಗಿದ್ದ ತ್ಯಾಜ್ಯ ಸಂಗ್ರಹಣ ವಾಹನಕ್ಕೆ ಚಾಲನೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ನಾಗರಿಕರು ಮನೆಯ ಸುತ್ತಲಿನ ಪ್ರದೇಶವನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡರೆ ತ್ಯಾಜ್ಯ ಸಮಸ್ಯೆ ಎದುರಾಗುವುದಿಲ್ಲ. ಮನೆಗಳ ಸುತ್ತಲು, ರಸ್ತೆಗಳ ಬದಿಗಳಲ್ಲಿ ಮರಗಿಡಗಳನ್ನು ಬೆಳೆಸಿಕೊಂಡರೆ ಉತ್ತಮ ಗಾಳಿ ನಮ್ಮದಾಗುತ್ತದೆ. ನಮ್ಮ ಬಡವಾಣೆಯಲ್ಲಿ, ಮನೆಯ ಪಕ್ಕ ತ್ಯಾಜ್ಯ ಹೆಚ್ಚಾಗಿದೆ ಎಂದು ದೂರು ಸಲ್ಲಿಸುವ ಮುಂಚೆ ನಾವು ಮಾಡುವ ತಪ್ಪುಗಳನ್ನು ಮನವರಿಕೆ ಮಾಡಿಕೊಳ್ಳಬೇಕು. ಮೊದಲು ನಾವು ಮನೆ ಮನ ಸ್ವಚ್ಛವಾಗಿರಿಸಿಕೊಂಡರೆ ಸಮಾಜ ಉತ್ತಮವಾಗಿರುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣ ಸುಲಭವಾಗುತ್ತದೆ ಎಂದು ಹೇಳಿದರು.
ಗ್ರಾಪಂ ಸದಸ್ಯ ಯಲ್ಲಪ್ಪ ಮಾತನಾಡಿ, ಗ್ರಾಮದಲ್ಲಿ ಎಲ್ಲೆಂದರಲ್ಲಿ ಎದುರಾಗುವ ತ್ಯಾಜ್ಯ ಸಮಸ್ಯೆ ಮುಕ್ತಗೊಳಿಸಲು ಪಂಚಾಯ್ತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಮನೆಗಳ ತ್ಯಾಜ್ಯ ಸಂಗ್ರಹಣೆಗೆ ವಿಶೇಷ ವಾಹನ ಬಿಡಲಾಗಿದೆ. ಮನೆಯಲ್ಲಿಯೇ ಒಣ ಹಾಗೂ ಹಸಿ ಕಸ ವಿಂಗಡಿಸಿ, ತ್ಯಾಜ್ಯ ಸಂಗ್ರಹಣೆ ವಾಹನದಲ್ಲಿ ಹಾಕಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದರಿಂದ ಸೊಳ್ಳೆಗಳು ಹೆಚ್ಚಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ.
ಇದರಿಂದಾಗಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು. ವಿಶ್ವೇಶ್ವರಪುರ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ದೇವಮ್ಮ ಕೃಷ್ಣಪ್ಪ, ಸದಸ್ಯರಾದ ಕೆಂಪೇಗೌಡ, ಸಿದ್ದರಾಜು, ಗಂಗರಾಜು, ಪಿಡಿಒ ರವೀಂದ್ರ, ನರಸಿಂಹ ಮೂರ್ತಿ, ಕಾರ್ಯದರ್ಶಿ ಧನಂಜಯ, ಮುಖಂಡರಾದ ಗಂಗರಾಜು, ಆರೀಫ್, ಇಕ್ಬಾಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.