ಮಡಿಕೇರಿಯಲ್ಲಿ ಮತ್ತೆ ಕಲ್ಯಾಣ ಆಂದೋಲನ; ಸಾಮರಸ್ಯ ನಡಿಗೆ
Team Udayavani, Jul 22, 2019, 5:21 AM IST
ಮಡಿಕೇರಿ: ಸಹಮತ ವೇದಿಕೆ ವತಿಯಿಂದ ಆ.5 ರಂದು ನಡೆಯಲಿರುವ ”ಮತ್ತೆ ಕಲ್ಯಾಣ ಆಂದೋಲನ” ಕುರಿತು ನಗರದ ಪತ್ರಿಕಾ ಭವನದಲ್ಲಿ ಪ್ರಮುಖರ ಸಭೆ ನಡೆಯಿತು.
ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಕಾರ್ಯಕ್ರಮದ ರೂಪರೇಷೆಗಳ ಕುರಿತು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದರು. ಮಹದೇವಪೇಟೆಯ ಬಸವೇಶ್ವರ ದೇವಾಲಯದಿಂದ ಕಾವೇರಿಹಾಲ್ ವರೆಗೆ ಎಲ್ಲಾ ಸಮುದಾಯಗಳನ್ನೊಳಗೊಂಡ ಸಾಮರಸ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಸಾಣೆ ಮಠದ ಪಂಡಿತರಾದ್ಯ ಶಿವಾ ಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಎಲ್ಲಾ ಧರ್ಮದ ಪ್ರಮುಖರನ್ನು ಒಂದೆಡೆ ಸೇರಿಸಿ ಕಾರ್ಯಕ್ರಮ ನಡೆಸಲಾಗುವುದು. ಆ.5 ರಂದು ನಗರದಲ್ಲಿ ನಡೆಯುವ ಸಮಾವೇಶಕ್ಕೆ ಜಿಲ್ಲೆಯ ಎಲ್ಲಾ ಧರ್ಮದ ಮುಖಂಡರನ್ನು ಹಾಗೂ ಉಪನ್ಯಾಸ ಕಾರ್ಯಕ್ರಮಕ್ಕೆ ಇಬ್ಬರು ಅತಿಥಿ ಉಪನ್ಯಾಸಕರನ್ನು ಆಹ್ವಾನಿಸಲು ಸಭೆ ನಿರ್ಧರಿಸಿತು.
ಎಂ.ಇ.ಮೊಹಿದ್ದೀನ್, ಟಿ.ಎಂ.ಮುದ್ದಯ್ಯ, ಗೊಲ್ಲ ಸಮಾಜದ ಅಧ್ಯಕ್ಷ ಎ.ಎಸ್.ನಾಣಯ್ಯ, ಅಹಿಂದ ಒಕ್ಕೂಟದ ಭಾಗಮಂಡಲ ಅಧ್ಯಕ್ಷ ಬಿ.ಎನ್.ರಂಗಪ್ಪ, ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್, ನಗರಸಭಾ ಮಾಜಿ ಸದಸ್ಯರಾದ ಎಂ.ಎ.ಉಸ್ಮಾನ್, ಹೆಚ್.ಎಸ್. ಯತೀಶ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಜಿ.ಪಂ. ಸದಸ್ಯ ಕುಮುದಾ ಧರ್ಮಪ್ಪ ಪ್ರಮುಖರಾದ ಆರ್.ಪಿ. ಚಂದ್ರಶೇಖರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.