‘ಕೊಡಗಿನ ಪ್ರವಾಸೋದ್ಯಮ ಕ್ಷೇತ್ರ ಪ್ರಗತಿಗೆ ಒತ್ತು’
Team Udayavani, Jul 22, 2019, 5:23 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಪ್ರವಾಸೋದ್ಯಮ ಉತ್ತೇಜನಕ್ಕೆ ಹೆಚ್ಚು ಒತ್ತು ನೀಡುವ ಕಾರ್ಯವನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮಾಡುತ್ತಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಅವರು ತಿಳಿಸಿದ್ದಾರೆ.
ನಗರದ ಕೂರ್ಗ್ ಇಂಟರ್ ನ್ಯಾಷನಲ್ ಹೋಟೆಲ್ನಲ್ಲಿ ಆಯೋಜಿಸಿದ್ದ ಕನೆಕ್ಟ್ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಆಗಸ್ಟ್ 25 ರಿಂದ 27 ರವರೆಗೆ ಕರ್ನಾಟಕ ಇಂಟರ್ ನ್ಯಾಷನಲ್ ಟ್ರ್ಯಾವೆಲ್ ಎಕ್ಸ್‌ಪೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರವಾಸೋದ್ಯಮದಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಪ್ರಮುಖ ಸ್ಥಾನದಲ್ಲಿದ್ದು, ನೆರೆಯ ರಾಜ್ಯ ಕೇರಳ ಹೆಚ್ಚಿನ ಪ್ರಗತಿಯತ್ತ ಸಾಗಿದೆ. ರಾಜ್ಯವೂ ಮುಂಚೂಣಿಗೆ ಬರಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗಿದೆ ಎಂದರು.
ಪುಷ್ಪಗಿರಿ, ತಡಿಯಂಡಮೋಳ್ ಬೆಟ್ಟಗಳ ಚಾರಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು. ನಾಲ್ಕುನಾಡು ಅರಮನೆಯನ್ನು ಅಭಿವೃದ್ಧಿ ಪಡಿಸಬೇಕು. ಹಾರಂಗಿಗೆ ಪ್ರವಾಸಿಗರ ಭೇಟಿಗೆ ಮುಕ್ತ ಅವಕಾಶ ನೀಡಬೇಕು. ತಲಕಾವೇರಿ ಹಾಗೂ ಭಾಗಮಂಡಲಕ್ಕೆ ತೆರಳಲು ದ್ವಿಪಥ ರಸ್ತೆ ಯೋಜನೆ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು. ರಾಜ್ಯ ಪ್ರವಾಸೋದ್ಯಮ ಸೊಸೈಟಿಯ ಜಂಟಿ ಕಾರ್ಯದರ್ಶಿ ರೕಂದ್ರ, ಹೋಮ್ ಸ್ಟೇ ಅಸೋಯೇಷನ್ ಪ್ರತಿನಿಧಿ ಕರುಂಬಯ್ಯ, ಚೇಂಬರ್ ಆಫ್ ಕಾಮರ್ಸ್ ಜಿಲ್ಲಾ ಅಧ್ಯಕ್ಷ ಪ್ರಕಾಶ್, ಟೂರ್ ಅಂಡ್ ಟ್ರಾವೆಲ್ಸ್ ಅಧ್ಯಕ್ಷ ಚೆಯ್ಯಂಡ ಸತ್ಯ, ರಿವರ್ ರ್ಯಾಫ್ಟಿಂಗ್ ಅಸೋಯೇಷನ್ ಅಧ್ಯಕ್ಷ ಕೃಷ್ಣಪ್ಪ ಹಾಜರಿದ್ದರು.
ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.