ಮಳೆಗಾಲದಲ್ಲೂ ನೀರಿಗೆ ಹಾಹಾಕಾರ
•ಜಿಲ್ಲೆಯ ಗಡಿಹಳ್ಳಿಗೆ ಪೂರೈಕೆಯಾಗುತ್ತಿಲ್ಲ ನೀರು•ಕೆರೆ ಅಭಿವೃದ್ಧಿ ಹೆಸರಲ್ಲಿ ಅನುದಾನ ಪೋಲು
Team Udayavani, Jul 22, 2019, 11:26 AM IST
ಕಾರಟಗಿ: ಸಮೀಪದ ದೇವಿಕ್ಯಾಂಪ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ದನಕರುಗಳಿಗೂ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳಾದರೂ ಸಮರ್ಪಕವಾಗಿ ಮಳೆಯಾಗಿಲ್ಲ. ಇದರಿಂದಾಗಿ ಜಲಾಶಯ ತುಂಬುವ ವಿಶ್ವಾಸ ಇಲ್ಲವಾಗಿದೆ. ದೇವಿಕ್ಯಾಂಪ್ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿಗೆ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿಗೆ ಒಳಪಡುತ್ತದೆ. ಅದರಲ್ಲಿ ಕ್ಯಾಂಪ್‌ನ 23ನೇ ವಾರ್ಡ್ ಕಾರಟಗಿ ಪುರಸಭೆ ವ್ಯಾಪ್ತಿಗೆ ಒಳಪಟ್ಟಿದೆ. ಈ ಗ್ರಾಮ ಎರಡು ತಾಲೂಕಿನ ಮಧ್ಯವಿದೆ. ಆದರೂ ನೀರಿಲ್ಲದೇ ನರಳುತ್ತಿದೆ.
ಗ್ರಾಮಕ್ಕೆ ಕೊಳವೆಬಾವಿ ಮೂಲಕ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕಾಲುವೆಗಳಲ್ಲೂ ಕೂಡ ನೀರು ಸ್ಥಗಿತಗೊಳಿಸಿದ್ದರಿಂದ ಜಾನುವಾರುಗಳಿಗೆ ನೀರು ಸಿಗದಂತಾಗಿ ಗ್ರಾಮಸ್ಥರು ಹೊಲಗದ್ದೆಗಳಲ್ಲಿನ ಬೋರ್‌ವೆಲ್, ಕೆರೆ ಬಾವಿಗಳಿಗೆ ಅಲೆಯಬೇಕಾಗಿದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವ ಪರಿಣಾಮ ಕೊಳವೆ ಬಾವಿಗಳಲ್ಲೂ ಕೂಡ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕಾರಟಗಿ ಪುರಸಭೆ 23ನೇ ವಾರ್ಡ್ ವ್ಯಾಪ್ತಿಯಲ್ಲಿ 17 ವರ್ಷಗಳ ಹಿಂದೆ ಕೆರೆ ನಿರ್ಮಾಣಗೊಂಡಿದೆ. ನಂತರ 10 ವರ್ಷಗಳ ಹಿಂದೆ ಕೆರೆ ನಿರ್ಮಾಣಕ್ಕೆ ಅಂದಿನ ಕೃಷಿ ಮಾರುಕಟ್ಟೆ ಸಚಿವ ಶಿವರಾಜ ತಂಗಡಗಿ ಭೂಮಿಪೂಜೆ ಸಲ್ಲಿಸಿದ್ದು, ಅಂದಿನಿಂದ ಕೆರೆ ಅಭಿವೃದ್ಧಿ ನೆಪದಲ್ಲಿ ಸರಕಾರದ ಹಣ ಪೋಲಾಗುತ್ತಿದೆಯೆ ಹೊರತು ಕೆರೆ ಅಭಿವೃದ್ಧಿ ಆಗಿಲ್ಲ. ಕೆರೆಗೆ ಇವರೆಗೂ ನೀರು ಬಂದಿಲ್ಲ. ಕೆರೆ ನಿರ್ವಹಣೆ ಇಲ್ಲದೆ ದಡದಲ್ಲಿ ಕಸ ಬೆಳೆದಿದೆ. ಕೆರೆ ಅಭಿವೃದ್ಧಿಗೊಳಿಸಿ ನೀರು ತುಂಬಿದರೆ ಗ್ರಾಮಕ್ಕೆ ಅನೂಕುಲವಾಗುತ್ತದೆ. ಕೆರೆ ತುಂಬಿಸಲು ಕೆರೆ ಪಕ್ಕದಲ್ಲೇ ತುಂಗಭದ್ರಾ 31ನೇ ವಿತರಣಾ ಕಾಲುವೆ ಇದ್ದು, ಕಾಲುವೆಗೆ ನೀರು ಹರಿಸಿದಾಗ ಕೆರೆ ತುಂಬಿಸಲು ಕೂಡ ಹೆಚ್ಚಿನ ತೊಂದರೆಯಾಗುವುದಿಲ್ಲ. ಇದರಿಂದ ಅಂತರ್ಜಲ ಹೆಚ್ಚುತ್ತದೆ. ಆದರೆ ಸಂಬಂಧಿಸದ ಯಾರೂ ಇತ್ತ ಗಮನಹರಿಸಿಲ್ಲ.
ಸರಕಾರ ಕುಡಿವ ನೀರಿನ ತೊಂದರೆಯಾಗದಂತೆ ಹಲವಾರು ಯೋಜನೆಗಳನ್ನು ರೂಪಿಸಿ ಕೋಟ್ಯಂತರ ರೂ. ಮಂಜೂರು ಮಾಡುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕುಡಿವ ನೀರಿನ ಯೋಜನೆಗಳು ನನೆಗುದಿಗೆ ಬಿದ್ದಿವೆ. 4-5 ತಿಂಗಳಿಂದ ಬೀರು ಬಿಸಿಲಿಗೆ ತತ್ತರಿಸುತ್ತಿರುವ ಜನತೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಲು ನೀರಿಗಾಗಿ ನಿತ್ಯ ಪರದಾಡುವುದು ಸಾಮಾನ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.