ಬಸ್ ಹತ್ತಿಸದೆ ಪಾಸ್ ವಿದ್ಯಾರ್ಥಿಗಳಿಗೆ ತೊಂದರೆ
ಚಾಲಕ, ನಿರ್ವಾಹಕರಿಂದ ಅವಮಾನ: ಎಐಡಿಎಸ್‌ಒ ಆರೋಪ
Team Udayavani, Jul 22, 2019, 12:09 PM IST
ಹಾಸನದ ಬಸ್ ನಿಲ್ದಾಣಾಧಿಕಾರಿ ಮಂಜುನಾಥ್ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿ ಬಸ್‌ಪಾಸ್ ಹೊಂದಿರುವ ವಿದ್ಯಾರ್ಥಿಗಳು ಎಲ್ಲ ಬಸ್‌ಗಳಲ್ಲೂ ಸಂಚರಿಸಲು ಅವಕಾಶ ನೀಡಬೇಕೆಂದು ಎಐಡಿಎಸ್‌ಒ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಹಾಸನ: ಬಸ್ ಚಾಲಕರು, ನಿರ್ವಾಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಬಸ್ ಹತ್ತಿಸದೆ ತೊಂದರೆ ಕೊಡುತ್ತಿದ್ದಾರೆಂದು ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆ (ಎಐಡಿಎಸ್‌ಒ)ಆರೋಪಿಸಿದೆ.
ಕೆಲವು ಬಸ್‌ಗಳಿಗೆ ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಹತ್ತಿಸುತ್ತಿಲ್ಲ. ಕೆಲವು ನಿರ್ವಾ ಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳು ಬಸ್ ಹತ್ತಿದರೆ ಪ್ರಯಾಣಿಕರಿಂದ ಹಣ ಸಂಗ್ರಹ ಆಗುವುದಿಲ್ಲ ಎಂದು ವಿದ್ಯಾರ್ಥಿಗಳು ಬಸ್‌ಗೆ ಕಾಯುತ್ತಿದ್ದರೂ ಬಸ್ ನಿಲ್ಲಿಸದೇ ಹೋಗುತ್ತಾರೆ ಎಂದು ಹಾಸನದ ಸೆಂಟ್ರಲ್ ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯವರಿಗೆ ವಿದ್ಯಾರ್ಥಿಗಳೊಂದಿಗೆ ಮನವಿ ಸಲ್ಲಿಸಿ ಅಳಲು ತೋಡಿಕೊಂಡಿದ್ದಾರೆ.
ಬಸ್ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳು ಬಸ್ ಕಾಯುತ್ತಿದ್ದರೂ ಬಸ್ ನಿಲ್ಲಿಸದೇ ಅಸಡ್ಡೆ ತೋರುತ್ತಿರುವುದರಿಂದ ವಿದ್ಯಾರ್ಥಿಗಳು ಸಕಾಲದಲ್ಲಿ ತರಗತಿಗಳಿಗೆ ಹೋಗಲಾಗುತ್ತಿಲ್ಲ. ಸರ್ಕಾರ ನಿಗದಿಪಡಿಸಿರುವ ಹಣ ನೀಡಿ ಬಸ್‌ಪಾಸ್ ಮಾಡಿಸಿಕೊಂಡಿದ್ದರೂ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಪ್ರಯಾಣಿಸುವಾಗ ಅವಮಾನ ಮಾಡುವ ಮತ್ತು ವಿದ್ಯಾರ್ಥಿಗಳ ಬಗ್ಗೆ ಅಸಡ್ಡೆ ತೋರುವ ನಿರ್ವಾಹಕರು ಮತ್ತು ಚಾಲಕರಿಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿ ಹೇಳಿ ಎಲ್ಲಾ ಬಸ್‌ಗಳಲ್ಲೂ ವಿದ್ಯಾರ್ಥಿಗಳು ಸಂಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಮುಖ್ಯ ಮಾರ್ಗಗಳಾದ ಚನ್ನರಾಯಪಟ್ಟಣ – ಹಾಸನ, ಹೊಳೆನರಸೀಪುರ – ಹಾಸನ, ಸಕಲೇಶಪುರ – ಹಾಸನ, ಅರಕಲಗೂಡು – ಹಾಸನ ಮಾರ್ಗಗಳಲ್ಲಿ ಬಸ್‌ಪಾಸ್ ವಿದ್ಯಾರ್ಥಿ ಗಳು ಸಂಚರಿಸಲು ತೊಂದರೆಯಾಗುತ್ತಿದೆ ಎಂದು ದೂರಿರುವ ವಿದ್ಯಾರ್ಥಿಗಳು ಬಸ್ ನಿರ್ವಾಹಕರು, ಚಾಲಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಬಸ್ ಹತ್ತಿಸಲು ತೊಂದರೆ ಮುಂದುವರಿಸಿದರೆ ಪ್ರತಿಭಟನೆ ಹಮ್ಮಿಕೊಳ್ಳ ಬೇಕಾದೀತು ಎಂದೂ ಎಚ್ಚರಿಕೆ ನೀಡಿದ್ದಾರೆ.
ನಿಲ್ದಾಣಾಧಿಕಾರಿಯವರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಸುಭಾಷ್, ವಿದ್ಯಾರ್ಥಿಗಳ ಮುಖಂಡರಾದ ಅನಿಕೇತ್, ಶರತ್, ಚಂದನ, ಸಂಪ್‌ಕುಮಾರ್, ಹರ್ಷಿತ್, ಕಾವ್ಯ ಮತ್ತಿತತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.