ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಆಗ್ರಹ
Team Udayavani, Jul 22, 2019, 2:40 PM IST
ತೆಲಸಂಗ: ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯುವಂತೆ ಆಗ್ರಹಿಸಿ ರವಿವಾರ ನಡೆದ ಸಭೆಯಲ್ಲಿ ಯುವ ಮುಖಂಡ ಅಪ್ಪು ಜಮಾದರ ಮಾತನಾಡಿದರು.
ತೆಲಸಂಗ: ತಾಲೂಕಿನಲ್ಲಿ ಸರಕಾರದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯುವ ಸೂಚನೆ ಮೇರೆಗೆ ಮಾಹಿತಿ ತಯಾರಿ ನಡೆಯುತ್ತಿದ್ದು, ತೆಲಸಂಗ ಹೋಬಳಿಯಲ್ಲಿಯೇ ಸ್ಕೂಲ್ ತೆರೆಯಬೇಕು. ತಪ್ಪು ಮಾಹಿತಿ ನೀಡಿ ತಾಲೂಕಿನ ಬೇರೆ ಗ್ರಾಮದಲ್ಲಿ ತೆರೆದರೆ ಶಿಕ್ಷಣ ಇಲಾಖೆ ವಿರುದ್ಧ ರಸ್ತೆ ತಡೆದು ಉಗ್ರ ಹೋರಾಟ ಮಾಡುವುದಾಗಿ ಯುವ ಮುಖಂಡ ಅಪ್ಪು ಜಮಾದರ ಎಚ್ಚರಿಸಿದ್ದಾರೆ.
ರವಿವಾರ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯುವಂತೆ ಆಗ್ರಹಿಸಿ ಸೇರಿದ್ದ ಸಭೆಯಲ್ಲಿ ಅವರು ಮಾತನಾಡಿ, ಹೋಬಳಿ ಗ್ರಾಮವಾದ ತೆಲಸಂಗದಲ್ಲಿಯೇ ಸರಕಾರದ ಪಬ್ಲಿಕ್ ಸ್ಕೂಲ್ ತೆರೆಯಬೇಕು. ಸರಕಾರಕ್ಕೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಪ್ಪು ಮಾಹಿತಿ ಒದಗಿಸಿದರೆ ಬೀದಿಗಿಳಿಯುವುದು ಅನಿವಾರ್ಯ ಎಂದರು. ಪಕ್ಕದ ಹಾಲಳ್ಳಿ ಪುಟ್ಟ ಗ್ರಾಮವಾದರೂ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. ತೆಲಸಂಗ ಪಟ್ಟಣದಲ್ಲಿ ಶಾಸಕರ ಮಾದರಿ ಶಾಲೆ ಇದ್ದರೂ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಿಲ್ಲ. 20 ಸಾವಿರ ಜನಸಂಖ್ಯೆ, ಅತಿ ಹೆಚ್ಚು ಮಕ್ಕಳ ಸಂಖ್ಯೆ ಇದ್ದರೂ ಸರಕಾರಿ ಪ್ರೌಢಶಾಲೆ ತೆರೆಯದಿರುವುದಕ್ಕೆ ಹಲವು ಅನುಮಾನ ಬರುತ್ತಿದೆ. ದಲಿತ, ಬಡ ಹಿಂದುಳಿದ ಮಕ್ಕಳು ಸರಕಾರಿ ಶಾಲೆಯಲ್ಲಿ ಓದುತ್ತಿವೆ. ಹೆಚ್ಚಿನ ಶುಲ್ಕ ತುಂಬಿ ಕಾನ್ವೆಂಟ್ ಸೇರಿಸಲು ಸಾಮರ್ಥ್ಯ ಇಲ್ಲದವರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರೂ ಪ್ರೌಢಶಾಲೆ, ಆಂಗ್ಲಮಾಧ್ಯಮ ಶಾಲೆ ಆರಂಭಿಸಲಿಲ್ಲ. ಸದ್ಯಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲು ಆದೇಶವಿದೆ. ಈ ಶಾಲೆಯನ್ನು ತೆಲಸಂಗ ಗ್ರಾಮದಲ್ಲಿಯೇ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಅಥಣಿ ಕ್ಷೇತ್ರ ಶಿಕ್ಷಣ ಇಲಾಖೆ ಆಡಳಿತದ ವಿರುದ್ಧ ಹೋರಾಟ ಮಾಡುವುದಲ್ಲದೆ ರಾಜ್ಯ ಸರಕಾರಕ್ಕೆ ಪತ್ರ ಬರೆದು ದೂರು ನೀಡಲಾಗುವುದು ಎಂದು ಎಚ್ಚರಿಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷ ರವಿ ಗಸ್ತಿ, ಕಾಂಗ್ರೆಸ್ ಮುಖಂಡ ಸುರೇಶ ಹುಜರೆ, ಮಾಜಿ ಸೈನಿಕ ಸುಭಾಸ್ ಖೊಬ್ರಿ, ರವಿ ಸಿಂಧೆ, ರವಿ ಮನ್ನಪ್ಪಗೋಳ, ಸುರೇಶ ಕುಮಠಳ್ಳಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.