ವಿಶ್ವಾಸಮತ ಯಾಚನೆಗೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಅರ್ಜಿ
Team Udayavani, Jul 23, 2019, 3:00 AM IST
ಬೆಂಗಳೂರು: ನಿರ್ದಿಷ್ಟ ಕಾಲಮಿತಿಯೊಳಗೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆ ಸ್ಪೀಕರ್ ಅವರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಆರ್.ಆನಂದಮೂರ್ತಿ ಈ ಅರ್ಜಿ ಸಲ್ಲಿಸಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆ ಸ್ಪೀಕರ್ ಅವರನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಮೈತ್ರಿ ಸರ್ಕಾರದ ಹಲವು ಶಾಸಕರು ರಾಜೀನಾಮೆ ಸಲ್ಲಿಸಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ. ಈ ಮಧ್ಯೆ ಸಚಿವರು ಸಹ ರಾಜೀನಾಮೆ ನೀಡಿದ್ದಾರೆ. ಖುದ್ದು ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆ ಪ್ರಸ್ತಾವನೆ ಮಂಡಿಸಿದ್ದಾರೆ. ಈ ಬಗ್ಗೆ ಜು.18ರಂದು ಸ್ಪೀಕರ್ ಅವರು ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ. ವಿಶ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ರಾಜ್ಯಪಾಲರು ಎರಡು ಬಾರಿ ಸೂಚನೆ ಕೊಟ್ಟಿದ್ದಾರೆ.
ಆದರೆ, ಸ್ಪೀಕರ್ ಹಾಗೂ ಮುಖ್ಯಮಂತ್ರಿಯವರು ರಾಜ್ಯಪಾಲರ ಸೂಚನೆಯನ್ನು ಪಾಲಿಸುತ್ತಿಲ್ಲ. ಬಹುಮತ ಇಲ್ಲದಿದ್ದರೂ, ವಿಶ್ವಾಸಮತ ಯಾಚನೆ ಪೂರ್ಣಗೊಳ್ಳದಿದ್ದರೂ ಮುಖ್ಯಮಂತ್ರಿಯವರು ಅನೇಕ ಆಡಳಿತಾತ್ಮಕ ಹಾಗೂ ಹಣಕಾಸು ಸಂಬಂಧಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಹಾಗಾಗಿ ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಹಾಗೂ ಅಲ್ಲಿಯವರೆಗೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳದಂತೆ ಮುಖ್ಯಮಂತ್ರಿಯವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಕಾಲತ್ತು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.