ಓವರ್‌ ಟೈಮ್‌ ಕೆಲಸದಿಂದ ಖನ್ನತೆ, ಫೋಬಿಯಾ


Team Udayavani, Jul 23, 2019, 5:00 AM IST

i-36

ಎಲ್ಲರೂ ನಿಗದಿತ ಅವಧಿಯಲ್ಲಿ ಕಚೇರಿ ಕೆಲಸಗಳನ್ನು ಮುಗಿಸುವವರು. ನಿಗದಿತ ಅವಧಿಗಳಲ್ಲಿ ಕೆಲಸಗಳನ್ನು ಪೂರ್ಣಗೊಳಿಸದೆ ಇದ್ದರೆ ರಾತ್ರಿ ವೇಳೆಯೆಲ್ಲ ಕಚೇರಿಯಲ್ಲಿ ಕುಳಿತು ಅಂದಿನ ಕೆಲಸವನ್ನು ಮುಗಿಸಿ ಮನೆಗೆ ತೆರಳಬೇಕಾಗುತ್ತದೆ. ಇಂದಿನ ಯುಗದಲ್ಲಿ ಅವಧಿಗೂ ಮೀರಿದ ಕೆಲಸ ಸರ್ವಸಾಮಾನ್ಯವಾಗಿ ಹೋಗಿಬಿಟ್ಟಿದೆ. ಈ ಓವರ್‌ಟೈಮ್‌ ನಮ್ಮ ಅಂದಿನ ಕೆಲಸಗಳನ್ನು ಪೂರ್ಣಗೊಳಿಸಬಹುದು ಆದರೆ ಆರೋಗ್ಯಕ್ಕೆ ಎಂದಿಗೂ ಒಳಿತಲ್ಲ. ಕಚೇರಿಯಲ್ಲಿ ಅವಧಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಜೀವನದಲ್ಲಿ ಅನೇಕ ಸಮಸ್ಯೆ ಉಂಟಾಗಬಹುದು.

ಹೃದಯದ ಸಮಸ್ಯೆ: ಕೆಲಸದ ಒತ್ತಡದಿಂದ ನಮ್ಮ ದೇಹದಲ್ಲಿ ಕಾರ್ಟಿಸೋಲ್ ಎಂಬ ಹಾರ್ಮೋನ್‌ ಬಿಡುಗಡೆಯಾಗುತ್ತದೆ. ಈ ಹಾರ್ಮೋನ್‌ ಹೃದಯ ಸಂಬಂಧಿ ಕಾಯಿಲೆಗಳನ್ನು ಉಂಟುಮಾಡುತ್ತದೆ. ಇದರ ಜತೆ ಪಾರ್ಶ್ವವಾಯು, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಳು ಕಾಣಿಸಿಕೊಳ್ಳಬಹುದು

ಬೆನ್ನು ಮತ್ತು ಕುತ್ತಿಗೆ ತೊಂದರೆ: ಸಾಮಾನ್ಯ ಕಚೇರಿ ಅವಧಿಯಲ್ಲಿ ಕೆಲಸ ಮಾಡಿದರೆ ಅಲ್ಪ ಪ್ರಮಣದ ಬೆನ್ನು ಮತ್ತು ಕುತ್ತಿಗೆ ತೊಂದರೆ ಕಾಣಿಸಿಕೊಳ್ಳುತ್ತದೆ. ಹಾಗಿರುವಾಗ ಅವಧಿ ಮುಗಿದರೂ ನಿರಂತರವಾಗಿ ಕುರ್ಚಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಮುಂದೆ ದೀರ್ಘ‌ವಾದ ಬೆನ್ನು ಮತ್ತು ಕುತ್ತಿಗೆ ತೊಂದರೆ ಅನುಭವಿಸಬೇಕಾದಿತು.

ಆಯಾಸ: ರಾತ್ರಿವಿಡೀ ನಿದ್ದೆ ಕೆಟ್ಟು ಕೆಲಸ ಮಾಡಿದರೆ ಬೆಳಗ್ಗೆ ಫ್ರೆಶ್‌ ಆಗಿ ಕೆಲಸ ಮಾಡಲು ಸಾಧ್ಯವಿಲ್ಲ. ಇದರೊಂದಿಗದಿನವಿಡೀ ಆಯಾಸ, ಕೆಲಸದಲ್ಲಿ ಅನಾಸ್ತಕಿ ಉಂಟಾಗಬಹುದು.

ಕೆಲಸದ ಕ್ಷಮತೆ ಕುಂಠಿತ: ಒಂದು ಅಥವಾ ಎರಡು ದಿನ ಓವರ್‌ ಟೈಮ್‌ ಕೆಲಸ ಮಾಡಬಹುದು ಅಂದರೆ ಅದಕ್ಕಿಂತ ಮಿತಿಮೀರಿ ಮುಂದುವರಿದರೆ ಮಾಡುವ ಕೆಲಸದ ಗುಣಮಟ್ಟ ಮತ್ತು ಕ್ಷಮತೆ ಕಡಿಮೆ ಆಗುತ್ತದೆ. ಕೆಲಸದ ಒತ್ತಡದ ದೂರ ಮಾಡುವ ಸಲುವಾಗಿ ಮದ್ಯ ಸೇವನೆಗೆ ಮುಂದಾಗುವ ಅಪಾಯವಿದೆ. ನೆಮ್ಮದಿ ಲಭಿಸುತ್ತದೆ ಎಂದು ಕುಡಿತದ ದಾಸರಾಗುವ ಸಾಧ್ಯತೆಗಳಿವೆ.

ಮಾನಸಿಕ ಸಮಸ್ಯೆ: ಅವಧಿ ಮೀರಿ ಮಾಡುವ ಕೆಲಸ ನಾನಾ ರೀತಿಯ ದೈಹಿಕ ಸಮಸ್ಯೆ ಜತೆ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಓವರ್‌ ಟೈಮ್‌ ಕೆಲಸ ದೀರ್ಘ‌ಕಾಲದ ಖನ್ನತೆ , ಫೋಬಿಯಾಗಳನ್ನು ಆಹ್ವಾನಿಸಿದಂತೆ. ಕೆಲಸದ ಒತ್ತಡವೂ ನರಗಳ ಮೇಲೂ ಪರಿಣಾಮ ಬೀರುತ್ತದೆ. ಉದ್ವೇಗ, ಆತಂಕಗಳು ಹೆಚ್ಚಾಗುವ ಸಾಧ್ಯತೆ ಇದೆ. ಓವರ್‌ ಟೈಮ್‌ ಕೆಲಸ ಜೀವನ ಶೈಲಿಯ ಮೇಲೂ ಪರಿಣಾಮ ಬೀರುತ್ತದೆ.

ವೈಯಕ್ತಿಕ ಜೀವನ
ದಿನದ 24 ಗಂಟೆ ಕಚೇರಿಯಲ್ಲೇ ಇದ್ದರೇ ದೈಹಿಕ ತೊಂದರೆ ಜತೆ ನಿಮ್ಮ ವೈಯಕ್ತಿಕ ಜೀವನದಲ್ಲೂ ಗಂಭೀರ ಸಮಸ್ಯೆ ಉಂಟಾಗಬಹುದು. ಸಂಗಾತಿ, ಕುಟುಂಬ ಸದಸ್ಯರ ಜತೆ ಕಾಲ ಕಳೆಯಲು ಸಮಯ ಸಿಗದೆ ಅವರಿಂದ ದೂರವಾಗುವ ಸಂಧರ್ಭ ಉಂಟಾಗಬಹುದು.

•ಧನ್ಯಾ

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

1

Pushpa 2: ಕಿಸಿಕ್‌ ಎಂದು ಕುಣಿದ ಶ್ರೀಲೀಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.