ಬೃಹತ್‌ ಗಾತ್ರದ ಮರ ಉರುಳಿ ಬಿದ್ದು ಮನೆಗೆ ಹಾನಿ


Team Udayavani, Jul 23, 2019, 5:32 AM IST

mara

ಕಟಪಾಡಿ: ಉದ್ಯಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಂಪನಬೆಟ್ಟು ಅಂಗನವಾಡಿ ಬಳಿಯ ಸುಮತಿ ಪೂಜಾರಿ ಎಂಬವರ ಮನೆಯ ಮೇಲೆ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಉರುಳಿ ಬಿದ್ದು ಮನೆಗೆ ಹಾನಿ ಉಂಟಾದ ಘಟನೆ ಜು.22ರಂದು ನಡೆದಿದೆ.

ಮನೆಯ ಮೇಲ್ಛಾವಣಿ, ವಿದ್ಯುತ್‌ ಸಂಪರ್ಕ, ಸಿಂಟೆಕ್ಸ್‌ ಟ್ಯಾಂಕ್‌, ಸ್ಟಾ ್ಯಂಡ್‌ ಸಹಿತ ಮತ್ತಿತರ ಸೊತ್ತುಗಳು ಹಾನಿಗೊಳಗಾಗಿದ್ದು ಸುಮಾರು 50 ಸಾವಿರ ರೂ.ಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಸೋಮವಾರ ಬೆಳಗ್ಗೆ ಎಂಟೂ ಮುಕ್ಕಾಲರ ಸುಮಾರಿಗೆ ಮನೆ ಮಂದಿಯಾದ ಸುಮತಿ ಪೂಜಾರಿ, ಯೋಗೀಶ್‌, ಸೌಮ್ಯಾ, ಸೃಜನ್‌ ಮತ್ತು ಮಗು ವೇದಿಕ್‌ ಮನೆಯಲ್ಲಿ ಇರುವ ವೇಳೆಯೇ ಈ ಅವಘಡ ಸಂಭವಿಸಿತ್ತು. ಕೆಲಸಗಳನ್ನು ಪೂರೈಸಿ ಮನೆಮಂದಿ ಕೆಲಸಕ್ಕೆ ಹೊರಡಲು ಅಣಿಯಾಗುತ್ತಿದ್ದಂತೆಯೇ ಸುಮತಿ ಪೂಜಾರಿ ಅಡುಗೆಯ ತಯಾರಿ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ.

ಈ ಸಂದರ್ಭ ಮನೆಯ ನೀರಿನ ಸಂಪರ್ಕಕ್ಕಾಗಿ ಅಳವಡಿಸಲಾದ ಕಬ್ಬಿಣದ ಸ್ಟಾ ್ಯಂಡ್‌ ಮತ್ತು ಸಿಂಟೆಕ್ಸ್‌ ಟ್ಯಾಂಕ್‌ ಮೇಲೆರಗಿದ್ದು ಅನಂತರದಲ್ಲಿ ಮನೆಯ ಮೇಲೆ ಉರುಳಿ ಬಿದ್ದುದರಿಂದ ಮನೆಯೊಳಗಿದ್ದ ಮನೆ ಮಂದಿ ಸಂಭಾವ್ಯ ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮನೆಯೊಳಗಿದ್ದ ಸೌಮ್ಯಾ ಕೆಲಸಕ್ಕೆ ತೆರಳಲು ಅಣಿಯಾಗುತ್ತಿದ್ದಂತೆಯೇ ಸಿಡಿಲು ಬಡಿದಂತಹ ಶಬ್ದ ಉಂಟಾಗಿದ್ದು ಸಣ್ಣ ಮಗುವೂ ಮನೆಯೊಳಗಿದ್ದ ಕಾರಣ ಹೆಚ್ಚು ದಿಗ್ಭ್ರಮೆಗೊಂಡಿದೆ. ಮನೆಯಿಂದ ಹೊರಗೋಡಿ ಬಂದು ನೋಡಿದಾಗ ಮರ ಮನೆಯ ಮೇಲೆ ಬಿದ್ದಿದ್ದು ಗಮನಕ್ಕೆ ಬಂದಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಉದ್ಯಾವರ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುಗಂಧಿಶೇಖರ್‌, ಸದಸ್ಯರಾದ ವಿಲ್ಸನ್‌ ರಾಜ್‌ಕುಮಾರ್‌, ಜಯಂತೀ, ಜಿತೇಂದ್ರ ಶೆಟ್ಟಿ, ಕಿರಣ್‌ ಕುಮಾರ್‌, ಪಿಡಿಒ ರಮಾನಂದ ಪುರಾಣಿಕ್‌, ಪಂಚಾಯತ್‌ ಸಿಬಂದಿಗಳಾದ ನಾರಾಯಣ, ಸಂದೀಪ್‌, ಗ್ರಾಮ ಸಹಾಯಕ ರಾಜ, ಮೆಸ್ಕಾಂ ಸಿಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮರ ತೆರವುಗೊಳಿಸುವಲ್ಲಿ ಮಾರ್ಗದರ್ಶನ ನೀಡಿರುತ್ತಾರೆ.

ಟಾಪ್ ನ್ಯೂಸ್

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

sand

Bramavara: ಬೆಣ್ಣೆಕುದ್ರು; ಮರಳು ಅಕ್ರಮ ಸಾಗಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.