ದೇವನಗರಿ ಸುಂದರ-ಶುಚಿತ್ವಕ್ಕೆ ಯೋಜನೆ
•ಉದ್ಯಮಿಗಳ ನೆರವಿನಿಂದ ವಾರದಲ್ಲಿ ಕಾರ್ಯಾರಂಭ: ಜಿಲ್ಲಾಧಿಕಾರಿ •ಉದ್ಯಮಗಳಿಂದ ಲಾಭದ ಶೇ. 2 ವೆಚ್ಚ
Team Udayavani, Jul 23, 2019, 9:30 AM IST
ದಾವಣಗೆರೆ: ಡಿಸಿ ಜಿ.ಎನ್.ಶಿವಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಲಿನ್ಯಮುಕ್ತ ದಾವಣಗೆರೆ ಕಾರ್ಯಯೋಜನೆ ಮಾಹಿತಿ ನೀಡಿದರು.
ದಾವಣಗೆರೆ: ಪರಿಸರ ಸ್ನೇಹಿ ಹಾಗೂ ಮಾಲಿನ್ಯಮುಕ್ತ ದಾವಣಗೆರೆ ನಗರವನ್ನಾಗಿಸಲು ಉದ್ಯಮಿಗಳ ಸಹಯೋಗದಲ್ಲಿ ಕಾರ್ಯಯೋಜನೆ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.
ನಗರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾರ್ಯಕ್ರಮ ರೂಪಿಸಲಾಗಿದೆ. ಅದರ ಜತೆಗೆ ನಗರವನ್ನು ಮತ್ತಷ್ಟು ಸುಂದರೀಕರಣ ಹಾಗೂ ಶುಚಿತ್ವ ಕಾಪಾಡುವ ಹಿನ್ನೆಲೆಯಲ್ಲಿ ಆಯ್ದ ಉದ್ಯಮಿಗಳ ನೆರವಿನೊಂದಿಗೆ ಯೋಜನೆ ಕಾರ್ಯಗತಗೊಳಿಸಲಾಗುವುದು. ಈ ಸಂಬಂಧ ಅವರೊಂದಿಗೆ ಸೋಮವಾರ ಬೆಳಿಗ್ಗೆ ಸಭೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕುಂದುವಾಡ ಕೆರೆ, ಜಿಲ್ಲಾ ಆಸ್ಪತ್ರೆ ಉದ್ಯಾನವನ, ನಗರದ ಪ್ರಮುಖ ವೃತ್ತಗಳನ್ನು ಅಭಿವೃದ್ಧಿ ಪಡಿಸಿ, ಅವುಗಳ ನಿರ್ವಹಣೆ ಹೊಣೆಯನ್ನು ಉದ್ಯಮಿಗಳು ನಿಭಾಯಿಸಲಿದ್ದಾರೆ. ಉದ್ಯಮಿಗಳು ತಮ್ಮ ಲಾಭಾಂಶ ಶೇ.2 ರಷ್ಟು ಮೊತ್ತವನ್ನು ಈ ಕಾರ್ಯಕ್ಕೆ ವಿನಿಯೋಗಿಸಲಿದ್ದಾರೆ. ನಗರದ ಸೌಂದರಿಕರಣ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಆಂದೋಲನದ ರೀತಿ ಕಾರ್ಯಗತವಾಗಲಿರುವ ಯೋಜನೆಯ ರೂಪುರೇಷೆ ವಾರದೊಳಗೆ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕುಂದುವಾಡ ಕೆರೆ ಕಾರಂಜಿ ಉತ್ಕೃಷ್ಟವಾದದ್ದು. ನೀರಿನ ಸಮಸ್ಯೆಯಿಂದಾಗಿ ಅದು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ಕುಂದುವಾಡ ಕೆರೆ ಅಭಿವೃದ್ಧಿ ಜತೆಗೆ ಅದನ್ನು ಮತ್ತಷ್ಟು ಸುಂದರಗೊಳಿಸಲಾಗುವುದು. ಅಲ್ಲಿ ವಾಯುವಿಹಾರಕ್ಕಾಗಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಮಂದಿ ತೆರಳುತ್ತಾರೆ. ವಾಕರ್ ಪಾಥ್, ಕೆರೆ ಸಂರಕ್ಷಣೆ, ಆಕರ್ಷಕ ಹೂವಿನ ಗಿಡ ಬೆಳೆಸುವುದು ಸೇರಿದಂತೆ ಹಲವು ಅಭಿವೃದ್ಧಿ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆ ಕಾಪಾಡುವ ಜತೆಗೆ ಅವುಗಳನ್ನು ಸುಂದರಗೊಳಿಸಲಾಗುವುದು. ಆ ವೃತ್ತಗಳಲ್ಲಿ ಕಸದ ಬುಟ್ಟಿ ಇರಿಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಖಾಲಿ ಜಾಗದಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಗಿಡ ಬೆಳೆಸಲಾಗುವುದು. ಮುಂದಿನ ದಿನಗಳಲ್ಲಿ ಮನೆ ಮನೆಗೂ ಎರಡು ಡಸ್ಟ್ ಬಿನ್ ವ್ಯವಸ್ಥೆ ಮಾಡಲಾಗುವುದು. ಇದು ಮಾಲಿನ್ಯ ನಿಯಂತ್ರಿಸಲು ಸಹಕಾರಿಯಾಗಲಿದೆ. ಮುಖ್ಯವಾಗಿ ರೋಗ ರುಜಿನ ತಡೆಗೂ ಅನುಕೂಲವಾಗಲಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿಯೂ ಹಲವಾರು ಕಾರ್ಯಕ್ರಮ ಅನುಷ್ಠಾಗೊಳ್ಳುವುದರಿಂದ ದಾವಣಗೆರೆ ನಗರ ಸುಂದರವಾಗಲಿದೆ ಎಂದು ತಿಳಿಸಿದರು. ನಗರದ ಶುಚಿತ್ವ ಹಾಗೂ ಸುಂದರೀಕರಣದ ಕಾರ್ಯದಲ್ಲಿ ಉದ್ಯಮಿಗಳ ಜತೆಗೆ ನಗರದ ಸಂಘ ಸಂಸ್ಥೆಗಳು, ಕಂಪನಿಗಳು ಮುಂದೆ ಬಂದು ಈ ಆಂದೋಲನಕ್ಕೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಕೆ.ವಿ. ಕೊಟ್ರೇಶ್ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.