ವಿಕಲಚೇತನರಿಗೆ ಬಂತು ಸ್ಮಾರ್ಟ್ ಕಾರ್ಡ್
•ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ •ಅಂಗವೈಕಲ್ಯತೆಯ ಶಾಶ್ವತ ಪ್ರಮಾಣ ಪತ್ರ
Team Udayavani, Jul 23, 2019, 11:13 AM IST
ಹರಪನಹಳ್ಳಿ: ತಾಲೂಕಿನಲ್ಲಿ ಪ್ರಥಮವಾಗಿ ಪಡೆದಿರುವ ವಿಕಲಚೇತನರ ಸ್ಮಾಟ್ ಕಾರ್ಡ್.
ಹರಪನಹಳ್ಳಿ: ವಿಶಿಷ್ಟ ವಿಕಲಚೇತನರ ಗುರುತಿನ ಚೀಟಿಗಳನ್ನು ನೀಡುವ ವಿಧಾನ ಪರಿಷ್ಕರಿಸಿದ್ದು, ಆನಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಸ್ಮಾಟ್ಕಾರ್ಡ್ ವಿತರಿಸಲಾಗುತ್ತಿದೆ. ಈಗಾಗಲೇ ಗುರುತಿನ ಚೀಟಿ ಪಡೆದಿರುವ ಎಲ್ಲ ವಿಕಲಚೇತನರು ಹಾಗೂ ಹೊಸದಾಗಿ ಗುರುತಿನ ಚೀಟಿ ಪಡೆಯಲು ಇಚ್ಛಿಸುವ ಎಲ್ಲ ವಿಕಲಚೇತನರು ಅನ್‌ಲೈನ್‌ನಲ್ಲೇ ನೋಂದಣಿ ಮಾಡಿಸಬೇಕಾಗಿದೆ.
ಆನಲೈನ್‌ನಲ್ಲಿ ನೋಂದಣಿ ಮಾಡಿದ ನಂತರ ವಿಕಲಚೇತನರಿಗೆ ರಾಜ್ಯದ ವೈದ್ಯಕೀಯ ಪ್ರಾಧಿಕಾರದಿಂದ ದೃಢೀಕರಿಸಲಾದ ವೈದ್ಯಕೀಯ ಪ್ರಮಾಣಪತ್ರದ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ವಿಶಿಷ್ಟ ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಸ್ಮಾಟ್ ಕಾರ್ಡ್) ಅಂಚೆ ಮೂಲಕ ಅವರ ವಿಳಾಸಕ್ಕೆ ನೇರವಾಗಿ ಕಳಿಸಲಾಗುತ್ತಿದೆ. ಸ್ಮಾರ್ಟ್‌ಕಾರ್ಡ್ ಪಡೆಯುವ ಬಗ್ಗೆ ಅರಿವು ಮೂಡಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಗ್ರಾಮ, ತಾಲೂಕುಮಟ್ಟದ ವಿಆರ್‌ಡಬ್ಲೂ ಹಾಗೂ ಎಂಆರ್‌ಡಬ್ಲೂಗಳಿಗೆ ಸೂಚನೆ ನೀಡಿದೆ.
ಏನಿದು ಸ್ಮಾಟ್ ಕಾರ್ಡ್?: ವಿಕಲಚೇತನರಿಗೆ ವೈದ್ಯಕೀಯ ಪ್ರಾಧಿಕಾರಗಳಿಂದ ದೃಢೀಕರಿಸಲಾಗುವ ವೈದ್ಯಕೀಯ ಪ್ರಮಾಣ ಪತ್ರದ ಸಮಗ್ರ ಮಾಹಿತಿವುಳ್ಳ ಗಣಕೀಕೃತ ಗುರುತಿನ ಚೀಟಿ ನೀಡುವ ವ್ಯವಸ್ಥೆಯಾಗಿದ್ದು, ಇದರಲ್ಲಿ ವಿಕಲಚೇತನ ವ್ಯಕ್ತಿ ವಿವರಗಳು ಹಾಗೂ ಅವರಲ್ಲಿರುವ ವಿಕಲತೆಯ ವಿವರ ಮತ್ತು ಪ್ರಮಾಣವನ್ನು ನಮೂದಿಸಲಾಗಿರುತ್ತದೆ. ಈ ಹಿಂದೆ 10 ವರ್ಷಗಳಿಗೊಮ್ಮೆ ಗುರುತಿನ ಪತ್ರವನ್ನು ನವೀಕರಿಸಿಕೊಳ್ಳಬೇಕಿತ್ತು. ಇದೀಗ ನೀಡುತ್ತಿರುವ ಸ್ಮಾರ್ಟ್ ಕಾರ್ಡ್ ಶಾಶ್ವತ ಪ್ರಮಾಣ ಪತ್ರವಾಗಿದೆ. ಅಗತ್ಯವಿದ್ದಲ್ಲಿ ಪರಿಷ್ಕರಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಅಂಗವೈಕಲ್ಯತೆ ಪ್ರಮಾಣ ಪತ್ರವನ್ನು ಹೊಂದಿರುವ ಮತ್ತು ಹೊಸದಾಗಿ ಪಡೆಯುವವರು ಆನಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಸ್ಮಾರ್ಟ್‌ಕಾರ್ಡ್ ಪಡೆಯಬಹುದು. ಅಂತರ್ಜಾಲದ ವೆಬ್‌ಸೈಟ್ www.swavlambancard.gov.in ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ಆನಲೈನ್ ಮೂಲಕ ನೋಂದಣಿ ಮಾಡಬಹುದು. ಸ್ಕ್ಯಾನ್ ಮಾಡಲಾದ ಪಾಸ್‌ಪೋರ್ಟ್ ಫೋಟೋ, ಸಹಿ ಅಥವಾ ಹೆಬ್ಬೆರಳು ಗುರುತಿನ ಪ್ರತಿ, ಅಧಾರ ಕಾರ್ಡ್, ರೇಷನ್ ಕಾರ್ಡ್, ಮತದಾನ ಗುರುತಿನ ಪತ್ರ ಹಾಗೂ ಅಂಗವೈಕಲ್ಯತೆ ಪ್ರಮಾಣ ಪತ್ರವನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ನೋಂದಣಿ ದೃಢೀಕರಣ ಸಂಖ್ಯೆಯ ಸಂದೇಶವು ಮೊಬೈಲ್ ಸಂಖ್ಯೆಗೆ ರವಾನೆ ಆಗುತ್ತದೆ. ಜಿಲ್ಲಾಮುಖ್ಯ ವೈದ್ಯಾಧಿಕಾರಿಗಳಿಗೆ ಕಾರ್ಡ್ ನೀಡುವ ಮತ್ತು ತಿರಸ್ಕರಿಸುವ ನಿರ್ಣಾಯಕರಾಗಿರುತ್ತಾರೆ.
ಕಾರ್ಡ್ ಪಡೆಯುವುದರಿಂದ ವಿಕಲಚೇತನ ವ್ಯಕ್ತಿಗಳ ಗುರುತು, ಅಂಗವೈಕಲ್ಯತೆ ಪ್ರಮಾಣ ಹಾಗೂ ಎಲ್ಲ ಅಗತ್ಯ ವಿವರಗಳನ್ನು ದಾಖಲಿಸಿಕೊಳ್ಳುತ್ತದೆ. ಅಂಗವೈಕಲ್ಯತೆ ವಿವರಗಳನ್ನು ಇ-ರೀಡರ್ ಸಹಾಯದಿಂದ ಡಿಕೋಡ್ ಮಾಡಬಹುದು. ಆದ್ದರಿಂದ ವಿಕಲಚೇತನ ವ್ಯಕ್ತಿಗಳ ಎಲ್ಲಾ ದಾಖಲೆಗಳನ್ನು ಒದಗಿಸುವ ಅಗತ್ಯವಿರುವುದಿಲ್ಲ. ಕಾರ್ಡ್ ಭಾರತದಾದ್ಯಂತ ವಿಕಲಚೇತನ ವ್ಯಕ್ತಿಗಳ ಅಂಗವೈಕಲ್ಯತೆ ಪುರಾವೆಯಾಗಿ ಪರಿಗಣಿಸಲಾಗುತ್ತದೆ. ವಿಕಲಚೇತನ ವ್ಯಕ್ತಿಗಳ ಗುರುತಿನ ಏಕೈಕ ದಾಖಲೆಯಾಗಿರುತ್ತದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಕಾರ್ಡ್ ಸಹಾಯದಿಂದ ಎಲ್ಲ ಹಂತಗಳಲ್ಲಿ ಸುವ್ಯವಸ್ಥಿತವಾಗಿ ಫಲಾನುಭವಿಗಳ ದೈಹಿಕ ಮತ್ತು ಅರ್ಥಿಕ ಪ್ರಗತಿಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.