ವಿದ್ಯಾರ್ಥಿನಿಯರಿಂದ ಜಾಗೃತಿ ಜಾಥಾ
Team Udayavani, Jul 23, 2019, 4:17 PM IST
ಚಿತ್ರದುರ್ಗ: ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ನಗರದ ಒನಕೆ ಓಬವ್ವ ವೃತ್ತದಲ್ಲಿ ಜಾಗೃತಿ ಜಾಥಾ ನಡೆಸಿದರು.
ಚಿತ್ರದುರ್ಗ: ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ನಗರದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಜಾಗೃತಿ ಜಾಥಾ ನಡೆಸಿದರು. ಅಮೂಲ್ಯವಾದ ನೀರನ್ನು ಅಪವ್ಯಯಗೊಳಿಸದೆ ಹಿತಮಿತವಾಗಿ ಬಳಸುವ ಮೂಲಕ ಜಲಮೂಲ ರಕ್ಷಣೆ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ತಲೆ ಮೇಲೆ ಖಾಲಿ ಕೊಡಗಳನ್ನಿಟ್ಟುಕೊಂಡು ಆಗಮಿಸಿದ ನೂರಾರು ವಿದ್ಯಾರ್ಥಿನಿಯರು, ಗಿಡ-ಮರಗಳನ್ನು ಕಡಿದು ಪರಿಸರ ನಾಶ ಮಾಡುತ್ತಿರುವುದರಿಂದ ಸಕಾಲಕ್ಕೆ ಮಳೆಯಾಗದೆ ಜಿಲ್ಲೆಯಲ್ಲಿ ತೀವ್ರ ಬರ ಆವರಿಸಿದೆ. ಇದರಿಂದಾಗಿ ಜನ-ಜಾನುವಾರುಗಳು ಸೇರಿದಂತೆ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ಜಲಮೂಲ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಮನವಿ ಮಾಡಿದರು.
ಮಳೆ ನೀರನ್ನು ಭೂಮಿಯಲ್ಲಿ ಇಂಗಿಸಿದರೆ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ. ಆಗ ಬರಗಾಲದಲ್ಲಿ ಸ್ವಲ್ಪ ಮಟ್ಟಿಗೆ ನೀರು ದೊರೆಯುವಂತೆ ಮಾಡಬಹುದು. ಅದಕ್ಕಾಗಿ ಮೊದಲು ಜಲಮೂಲವನ್ನು ಕಂಡುಕೊಂಡು ಸಂರಕ್ಷಣೆ ಮಾಡಬೇಕೆಂದರು.
ಪರಿಸರ ತಜ್ಞ ಡಾ| ಎಚ್.ಎಸ್.ಕೆ. ಸ್ವಾಮಿ, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕ ಡಾ| ಕೆ.ಕೆ. ಕಾಮಾನಿ, ಲೇಖಕ ಆನಂದಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.