ನಗರದಲ್ಲಿ ಮುಂದುವರಿದ ವರ್ಷಧಾರೆ; ವಿವಿಧೆಡೆ ಹಾನಿ, ಟ್ರಾಫಿಕ್ ಜಾಮ್
Team Udayavani, Jul 24, 2019, 5:00 AM IST
ಮಹಾನಗರ: ಮುಂಗಾರು ಪ್ರವೇಶ ಪಡೆದು ಒಂದೂವರೆ ತಿಂಗಳು ಕಳೆದರೂ ಮಳೆಯಿಲ್ಲದೆ ಕಂಗೆಟ್ಟಿದ್ದ ಕರಾವಳಿ ಜನತೆಗೆ ಇದೀಗ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಗಳವಾರ ಬೆಳಗ್ಗಿನಿಂದ ಮತ್ತೆ ಮಳೆ ಮುಂದುವರಿದಿದೆ. ಹಾಗಾಗಿ ಈ ಬಾರಿ ಕರಾವಳಿ ಭಾಗದಲ್ಲಿ ಜುಲೈ ತಿಂಗಳ ವಾಡಿಕೆ ಮಳೆಯ ಗುರಿ ಮುಟ್ಟಿದೆ.
ಕರಾವಳಿ ಭಾಗಗಳಲ್ಲಿ ಜುಲೈ ತಿಂಗಳಿನಲ್ಲಿ 881.80 ವಾಡಿಕೆ ಮಳೆಯ ಗುರಿ ತಲುಪಿದೆ. ಕೆಲವು ದಿನಗಳಿಗೆ ಹೋಲಿಸಿದರೆ, ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಮಳೆ ಕೊರತೆ ಪ್ರಮಾಣ ಇಳಿಕೆಯಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ 1,090.2 ವಾಡಿಕೆ ಮಳೆಯಲ್ಲಿ 779.2 ಮಳೆ ಸುರಿದಿದ್ದು, ಬಂಟ್ವಾಳ ತಾಲೂಕಿನಲ್ಲಿ 959.5 ಮಿ.ಮೀ. ವಾಡಿಕೆ ಮಳೆಯಲ್ಲಿ 777.2 ಮಿ.ಮೀ., ಮಂಗಳೂರು ತಾಲೂಕಿನಲ್ಲಿ 876.2 ಮಿ.ಮೀ. ವಾಡಿಕೆ ಮಳೆಯಲ್ಲಿ 728.1 ಮಿ.ಮೀ., ಪುತ್ತೂರು ತಾಲೂಕಿನಲ್ಲಿ 918 ಮಿ.ಮೀ. ವಾಡಿಕೆ ಮಳೆಯಲ್ಲಿ 650.8 ಮಿ.ಮೀ., ಸುಳ್ಯ ತಾಲೂಕಿನಲ್ಲಿ 847.5 ಮಿ.ಮೀ. ವಾಡಿಕೆ ಮಳೆಯಲ್ಲಿ 650.8 ಮಿ.ಮೀ. ಮಳೆ ಸುರಿದಿದೆ.
ಬೆಳಗ್ಗೆಯಿಂದಲೇ ಸುರಿದ ಮಳೆ
ನಗರದಲ್ಲಿ ಮಂಗಳವಾರ ಬೆಳಗ್ಗೆ ಯಿಂದಲೇ ಭಾರೀ ಮಳೆ ಸುರಿದಿದೆ. ಮುನ್ನೆ ಚ್ಚರಿಕಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ಕೆಲಸಕ್ಕೆ ತೆರಳುವ ಮಂದಿ ಮಳೆಗೆ ಪರದಾಡಿದರು.
ಭಾರೀ ಮಳೆಯಿಂದಲಾಗಿ ನಂತೂರು, ಪಿವಿಎಸ್ ವೃತ್ತ, ಕಂಕನಾಡಿ, ಜ್ಯೋತಿ ವೃತ್ತ, ಹಂಪನಕಟ್ಟೆ, ಪಂಪ್‌ವೆಲ್, ಬಂಟ್ಸ್‌ಹಾಸ್ಟೆಲ್, ಬಿಜೈ, ಲಾಲ್‌ಬಾಗ್ ಮತ್ತಿತರ ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಗುಡ್ಡ ಕುಸಿತ
ಡೆಂಗ್ಯೂ ಜ್ವರದಿಂದ ರವಿವಾರ ತಡರಾತ್ರಿ ಮೃತಪಟ್ಟ ಖಾಸಗಿ ವಾಹಿನಿ ಕೆಮರಾಮನ್ ನಾಗೇಶ್ ಪಡು ಅವರ ನೀರುಮಾರ್ಗ ಸಮೀಪದ ಮನೆಯ ಮೇಲೆ ಗುಡ್ಡ ಕುಸಿದ ಘಟನೆ ಮಂಗಳವಾರ ನಡೆದಿದೆ. ಜಪ್ಪಿನಮೊಗರು ಬಳಿ ಮಣ್ಣು ಜರಿದು ಬಿದ್ದು ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿದೆ. ಜ್ಯೋತಿ ವೃತ್ತ ಬಳಿ ಮರವೊಂದು ಬೀಳುವ ಹಂತದಲ್ಲಿದ್ದು, ಕೂಡಲೇ ಮರದ ಕೊಂಬೆ ಕಟಾವು ಮಾಡಬೇಕು ಎಂಬ ದೂರುಗಳು ಮಂಗಳವಾರ ಜಿಲ್ಲಾಡಳಿತ ಕಂಟ್ರೋಲ್ ರೂಂಗೆ ಬಂದಿದೆ. ಇನ್ನು, ಅದ್ಯಪಾಡಿ ಚರ್ಚ್ ಬಳಿ ಮಣ್ಣು ಕುಸಿತವಾದ ಕಾರಣ, ವಾಹನಗಳಿಗೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಯಿತು ಎಂದು ಪೊಲೀಸ್ ಕಂಟ್ರೋಲ್ ರೂಂನಿಂದ ಮಾಹಿತಿ ದೊರೆತಿದೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳದ ಬಳಿ ಗುಡ್ಡ ಕುಸಿದಿದೆ.
ಅಬ್ಬಕ್ಕ ಪಡೆಗೆ ಪೊಲೀಸ್ ಆಯುಕ್ತರ ಶ್ಲಾಘನೆ
ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರ ನಡುವೆಯೂ ನಗರ ಪೊಲೀಸ್ ಇಲಾಖೆಯ ಅಬ್ಬಕ್ಕ ಪಡೆ ಸಕ್ರಿಯವಾಗಿತ್ತು. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಟ್ವೀಟ್ ಮಾಡಿದ್ದು, ಭಾರೀ ಮಳೆಯ ನಡುವೆಯೂ ಮಹಿಳೆಯರ ಸುರಕ್ಷತೆಯ ಅಬ್ಬಕ್ಕ ಪಡೆ ಉತ್ತಮ ಕಾರ್ಯ ಮಾಡಿದೆ ಎಂದು ತಿಳಿಸಿದ್ದಾರೆ.
ಸಮುದ್ರ ತೀರದಲ್ಲಿ ಮುಂಜಾಗ್ರತೆ
ಸದ್ಯ ಭಾರೀ ಗಾತ್ರದ ಅಲೆಗಳ ಅಬ್ಬರ ಇಲ್ಲ. ಸಮುದ್ರ ತೀರದಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದೇವೆ. ಲೈಫ್‌ಗಾರ್ಡ್‌ನವರು ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಪ್ರವಾಸಿಗರು ಕೂಡ ಹೆಚ್ಚಾಗಿ ಬರುತ್ತಿದ್ದು, ಸಮುದ್ರದಲ್ಲಿ ನೀರಾಟವಾಡಲು ಬಿಡುತ್ತಿಲ್ಲ.
- ಯತೀಶ್ ಬೈಕಂಪಾಡಿ, ಪಣಂಬೂರು ಬೀಚ್ ಅಭಿವೃದ್ಧಿ ನಿಗಮದ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.