ರಾ.ಹೆ. 169ರಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
ಪರ್ಯಾಯ ಮಾರ್ಗ ಸೂಚಿಸಿ ಡಿಸಿ ಆದೇಶ
Team Udayavani, Jul 24, 2019, 5:16 AM IST
ಉಡುಪಿ: ಕುದುರೆಮುಖ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ (ಹಳೆಯ ಸಂಖ್ಯೆ-13) ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಆದೇಶಿಸಿದ್ದಾರೆ.
ಈ ರಸ್ತೆಯ ಕುದುರೆಮುಖ ವನ್ಯಜೀವಿ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ 4 ಕಿರು ಸೇತುವೆಗಳು ತುಂಬಾ ಶಿಥಿಲವಾಗಿದ್ದು, ಮರು ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ಅಭಿಯಂತರು ಸಲ್ಲಿಸಿದ್ದ ಪ್ರಸ್ತಾವನೆ ಪರಿಶೀಲಿಸಿ ಸಂಚಾರ ನಿಷೇಧಿಸಲಾಗಿದೆ.
ಈ ಮಾರ್ಗದಲ್ಲಿ ಕಾರು, ಜೀಪು ಬೈಕ್, ರಾಜಹಂಸ ಮತ್ತು ಸಾರ್ವಜನಿಕರು ಪ್ರಯಾಣಿಸುವ ಲಘು ವಾಹನಗಳನ್ನು ಹೊರತುಪಡಿಸಿ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್ಗಳು ಮತ್ತು ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವಾಹನಗಳು, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್ ಮತ್ತು ಎಲ್ಲ ಬಗೆಯ ಅಧಿಕ ಭಾರದ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗವಾಗಿ ಚಿಕ್ಕಮಗಳೂರಿನಿಂದ ಬರುವ 15 ಟನ್ಗಳಿಗಿಂತ ಕಡಿಮೆ ತೂಕದ ವಾಹನಗಳು ಬಾಳೆಹೊನ್ನೂರು- ಮಾಗುಂಡಿ- ಕಳಸ- ಕುದುರೆಮುಖ-ಎಸ್.ಕೆ. ಬಾರ್ಡ್ರ್ ಮುಖಾಂತರ ಮತ್ತು ನರಸಿಂಹರಾಜಪುರ ಕಡೆಯಿಂದ ಬರುವ ವಾಹನಗಳು ಕೊಪ್ಪ-ಹರಿಹರ ಪುರ-ಬಿದರಗೋಡು-ಆಗುಂಬೆ ಮಾರ್ಗವಾಗಿ ಸಂಚರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.