ಜಲ ಸಂರಕ್ಷಣೆಯೇ ಇಂದಿನ ತುರ್ತು ಕಾರ್ಯ

Team Udayavani, Jul 24, 2019, 3:15 PM IST

24-July-27

ದಾವಣಗೆರೆ: ಎಡಿಸಿ ಪದ್ಮ ಬಸವಂತಪ್ಪ ಮಂಗಳವಾರ ಕಾರ್ಯಾಗಾರದಲ್ಲಿ ಮಾತನಾಡಿದ ಸಂದರ್ಭ

ದಾವಣಗೆರೆ: ನೀರಿಲ್ಲದೆ ಜೀವನವಿಲ್ಲ. ಜಲ ಸಂರಕ್ಷಣೆ ಪ್ರಸ್ತುತದ ತುರ್ತು ಕಾರ್ಯವಾಗಿದ್ದು, ಸಾಂಪ್ರದಾಯಿಕ ಜಲಮೂಲಗಳನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಹೇಳಿದ್ದಾರೆ.

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಮಂಗಳವಾರ ಜಲಶಕ್ತಿ ಅಭಿಯಾನ ಅನುಷ್ಠಾನ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲಶಕ್ತಿ ಅಭಿಯಾನವು ಐದು ಮುಖ್ಯ ಕಾರ್ಯಕ್ರಮಗಳಾದ ನೀರು ಸಂರಕ್ಷಣೆ ಮತ್ತು ಮಳೆಕೊಯ್ಲು, ಸಾಂಪ್ರದಾಯಿಕ ನೀರಿನ ಮೂಲಗಳ ನವೀಕರಣ, ನೀರಿನ ಮರುಬಳಕೆ ಮತ್ತು ಮರುಪೂರಣ, ಜಲಾನಯನ ಅಭಿವೃದ್ಧಿ ಹಾಗೂ ಅರಣ್ಯೀಕರಣ ಕುರಿತು ಜಿಲ್ಲೆಯಲ್ಲಿ ಸಾಧಿಸಬಹುದಾದಂತಹ ಪ್ರಗತಿ ಕುರಿತು ಇನ್ನು ಮೂರು ದಿನಗಳ ಕ್ರಿಯಾಯೋಜನೆ ರಚಿಸಬೇಕು. ಸಂಬಂಧಿಸಿದ ಇಲಾಖೆಗಳು ತಾವು ಸಾಧಿಸಿದ ಪ್ರಗತಿ ಕುರಿತು ಕಡ್ಡಾಯವಾಗಿ ಜಲಶಕ್ತಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು ಎಂದರು.

ಜಲ ಸಂರಕ್ಷಣೆ ವಿಚಾರದಲ್ಲಿ ನಮ್ಮ ರಾಜ್ಯ ಉತ್ತಮ ಸ್ಥಾನದಲ್ಲಿದೆ. ಟಾಪ್‌ 20 ಜಿಲ್ಲೆಯಲ್ಲಿ ದಾವಣಗೆರೆ 12ನೇ ಸ್ಥಾನದಲ್ಲಿದೆ. ಜಿಲ್ಲೆಯ ಚನ್ನಗಿರಿ, ಜಗಳೂರು ಮತ್ತು ದಾವಣಗೆರೆ ತಾಲ್ಲೂಕುಗಳನ್ನು ಮೊದಲನೇ ಹಂತದಲ್ಲಿ ಈ ಅಭಿಯಾನಕ್ಕಾಗಿ ಆಯ್ಕೆ ಮಾಡಿಕೊಂಡಿದ್ದು, ಇನ್ನು ಮೂರು ತಿಂಗಳ ಒಳಗೆ ಯೋಜನೆ ರೂಪುಗೊಂಡು, ಅದರ ಪ್ರಕಾರ ಕೆಲಸಗಳು ಪೂರ್ಣಗೊಳ್ಳಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಪ್ರತಿ ಜಿಲ್ಲೆಗೆ ಅಧಿಕಾರಿಗಳನ್ನು ನಿಯೋಜಿಸಿದ್ದು, ಅವರು ಮೊದಲ ಭೇಟಿಯಲ್ಲಿ ಸ್ಥಳಗಳನ್ನು ಗುರುತಿಸಿ ಆಗಬೇಕಾದ ಕೆಲಸಗಳ ಬಗ್ಗೆ ಸೂಚನೆ ನೀಡುವರು. ನಂತರ ಕಾರ್ಯ ಪ್ರಗತಿ ಹಾಗೂ ಸಾಧಿಸಿದ ಕೆಲಸಗಳ ಬಗ್ಗೆ ಪರಿಶೀಲಿಸುವರು.

ಈಗಾಗಲೇ ತಡವಾಗಿದೆ. ಆದ್ದರಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜಲಸಂರಕ್ಷಣೆ ಕುರಿತು ಕ್ರಿಯಾಯೋಜನೆ ರೂಪಿಸಬೇಕು. ಈ ಅಭಿಯಾನದಡಿ ಪ್ರತ್ಯೇಕ ಅನುದಾನ ನೀಡಲಾಗಿಲ್ಲ. ಆದ್ದರಿಂದ ತಮ್ಮ ಇಲಾಖೆಯ ಅನುದಾನದಲ್ಲೇ ಹೊಂದಿಸಿಕೊಂಡು ಕಾರ್ಯ ನಿರ್ವಹಿಸಬೇಕು. ದಾನಿಗಳು ದೊರೆತರೆ ಅವರಿಂದ ನೆರವು ಪಡೆಯಬಹುದು ಎಂದು ತಿಳಿಸಿದರು.

ಸರ್ಕಾರಿ ಕಟ್ಟಡಗಳಲ್ಲಿ ಮಳೆಕೊಯ್ಲು ಹಾಗೂ ಅರಣ್ಯೀಕರಣವನ್ನು ವ್ಯಾಪಕವಾಗಿ ಕೈಗೊಳ್ಳಬೇಕು. ಕಾರ್ಯವೆಸಗುವ ಮುನ್ನ ಮತ್ತು ಕಾರ್ಯ ಸಾಧನೆಯ ನಂತರ ಛಾಯಾಚಿತ್ರಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು ಎಂದು ತಿಳಿಸಿದರು.

ಜಲಶಕ್ತಿ ಅಭಿಯಾನದಡಿ ಜಿಲ್ಲೆಯಲ್ಲಿ ಸಾಧಿಸಬಹುದಾದ ಪ್ರಗತಿ ಕುರಿತು ಪಿಪಿಟಿ ಪ್ರದರ್ಶನದ ಮೂಲಕ ವಿವರಿಸಿದ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ವಿಶ್ವದ ಜನಸಂಖ್ಯೆಯಲ್ಲಿ ಶೇ.17ರಷ್ಟು ಭಾರತೀಯರಿದ್ದಾರೆ. ಆದರೆ ಶೇ.8ರಷ್ಟು ಮಾತ್ರ ಮಳೆ ನೀರು ಬಳಕೆಯಾಗುತ್ತಿದೆ. ಇನ್ನು ಶೇ.92ರಷ್ಟು ಪೋಲಾಗುತ್ತಿದೆ. ಮಳೆನೀರನ್ನು ಹೇಗೆ ಸಂರಕ್ಷಿಸಬೇಕು, ಜಲಸಂರಕ್ಷಣೆ ಏಕೆ ಮತ್ತು ಹೇಗೆ ಮಾಡಬೇಕೆಂಬ ಬಗ್ಗೆ ವಿವರಿಸಿದರು.

ಜಲ ಸಂರಕ್ಷಣೆ ಮತ್ತು ನೀರು ಮಿತಬಳಕೆಗೆ ಆದ್ಯತೆ ನೀಡಬೇಕು. ಬೋರ್‌ವೆಲ್ ರೀಚಾರ್ಜ್‌, ನೀರಿನ ಮರುಬಳಕೆ, ಸರ್ಕಾರಿ ಜಾಗ-ಕಚೇರಿ, ಶಾಲಾ ಕಾಲೇಜು, ಆಸ್ಪತ್ರೆಗಳಲ್ಲಿ ಗಿಡ ನೆಡುವಿಕೆ, ಮನೆಗಳಲ್ಲಿ ಮಳೆಯಕೊಯ್ಲು ಕೈಗೊಳ್ಳಬೇಕು ಎಂದು ಹೇಳಿದರು.

ಶಾಲೆಗಳಲ್ಲಿ ಕಾರ್ಯಸ್ಥಗಿತವಾಗಿರುವ ಮಳೆಕೊಯ್ಲಿಗೆ ಚಾಲನೆ ನೀಡಲು ಡಿಡಿಪಿಐ ಕ್ರಿಯಾಯೋಜನೆ ತಯಾರಿಸಬೇಕು. ಸರ್ಕಾರಿ ಭೂಮಿಗಳಲ್ಲಿ ಅರಣ್ಯೀಕರಣ ಹಾಗೂ ಮುಖ್ಯವಾಗಿ ಐಇಸಿ ಚಟುವಟಿಕೆ ಕೈಗೊಳ್ಳಬೇಕು. ಯಾವುದೇ ಕೆಲಸಗಳು ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಲಸಂರಕ್ಷಣೆಗೆ ಕೈಜೋಡಿಸಬೇಕಿದೆ ಎಂದು ಹೇಳಿದರು.

ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಜಿಪಂ ಸಹಾಯಕ ಯೋಜನಾಅಧಿಕಾರಿ ಶಶಿಧರ್‌, ಡಿಎಚ್ಓ ಡಾ|ರಾಘವೇಂದ್ರಸ್ವಾಮಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯ್ಕ, ಡಿಡಿಪಿಐ ಸಿ.ಆರ್‌.ಪರಮೇಶ್ವರಪ್ಪ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.