ವಿಐಎಸ್‌ಎಲ್ ಉಳಿವಿಗಾಗಿ ಉರುಳು ಸೇವೆ
Team Udayavani, Jul 24, 2019, 4:20 PM IST
ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣಗೊಳ್ಳದಿರಲಿ ಎಂದು ಪ್ರಾರ್ಥಿಸಿ ಕಾರ್ಖಾನೆಯ ಕಾರ್ಮಿಕರು ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಸುತ್ತ ಉರುಳು ಸೇವೆ ಸಲ್ಲಿಸಿದರು.
ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಯನ್ನು ಸಾರ್ವಜನಿಕ ವಲಯದಲ್ಲಿ ಉಳಿಸಬೇಕೆಂದು ಒತ್ತಾಯಿಸಿ ಕಾರ್ಮಿಕರು ಮತ್ತು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟದ 19ನೇ ದಿನವಾದ ಮಂಗಳವಾರ ಕಾರ್ಮಿಕರು ಸಂಜೆ ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ದೇವಾಲಯದ ಸುತ್ತ ಉರುಳು ಸೇವೆ ಸಲ್ಲಿಸಿದರು.
ಆರಂಭದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ ಕಾರ್ಮಿಕರು ಅರ್ಚಕ ರಂಗನಾಥ ಶರ್ಮ ಅವರಿಂದ ನರಸಿಂಹ ಮೂಲ ಮಂತ್ರದ ಉಪದೇಶವನ್ನು ಸಾಮೂಹಿಕವಾಗಿ ಪಡೆದು ನಂತರ ಸಂಕಲ್ಪ ಸಹಿತವಾಗಿ ಪೂಜೆ ಸಲ್ಲಿಸಿ ನಂತರ ದೇವಾಲಯದ ಪ್ರಾಕಾರದ ಸುತ್ತ ಸುಮಾರು 50 ಕಾರ್ಮಿಕರು ಅಂಗಿಯನ್ನು ಕಳಚಿ ದೇವರ ನಾಮಸ್ಮರಣೆ ಮಾಡುತ್ತಾ ಉರುಳು ಸೇವೆ ಸಲ್ಲಿಸಿದರು. ಉಳಿದ ಕಾರ್ಮಿಕರು ಮತ್ತು ಅವರ ಕುಟುಂಬದವರು ದೇವಾಲಯದ ಕೆಳ ಆವರಣದಲ್ಲಿ ಪ್ರದಕ್ಷಿಣಾ ನಮಸ್ಕಾರ ಸಲ್ಲಿಸಿದರು.
ದೇವಾಲಯದ ಪ್ರಧಾನ ಅರ್ಚಕ ರಂಗನಾಥ ಶರ್ಮ ಮಾತನಾಡಿ, ಸರ್ ಎಂ. ವಿಶ್ವೇಶ್ವರಯ್ಯನವರಿಂದ ಸ್ಥಾಪಿತವಾದ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಕ್ಷೇತ್ರಪಾಲಕನಾದ ಶ್ರೀಲಕ್ಷ್ಮೀನರಸಿಂಹ ದೇವರಲ್ಲಿ ಪ್ರತಿನಿತ್ಯ ನಿಷ್ಠೆಯಿಂದ ಪ್ರಾರ್ಥಿಸಿ ನರಸಿಂಹ ಮೂಲಮಂತ್ರವನ್ನು ಶ್ರದ್ಧಾಭಕ್ತಿಯಿಂದ ಪ್ರತಿನಿತ್ಯ ಸಂಕಲ್ಪಸಹಿತವಾಗಿ ಪ್ರಾರ್ಥಿಸುತ್ತಾ ಕಾರ್ಖಾನೆಯ ಉಳಿವಿಗೆ ಅಗತ್ಯವಾದ ಕಾರ್ಯಗಳನ್ನು ಕೈಗೊಂಡರೆ ಖಂಡಿತ ವಿಐಎಸ್‌ಎಲ್ ಕಾರ್ಖಾನೆ ಉಳಿದು ಬೆಳೆಯುವಲ್ಲಿ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಇಂದು ಕಾರ್ಮಿಕರು ದೇವಾಲಯಕ್ಕೆ ಬಂದು ಸಲ್ಲಿಸಿರುವ ಸೇವೆ ನಿಜಕ್ಕೂ ಒಂದು ಉತ್ತಮ ಪ್ರಯತ್ನವಾಗಿದೆ ಎಂದರು.
ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ಅಮೃತ್ ಮೋಹನ್, ನಿವೃತ್ತ ಕಾರ್ಮಿಕ ಸಂಘದ ಸದಸ್ಯರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.