700 ಕಾಮಗಾರಿಗೆ ಅನುಮೋದನೆ

Team Udayavani, Jul 25, 2019, 3:00 AM IST

700kamagari

ಶಿಡ್ಲಘಟ್ಟ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲಾದ್ಯಂತ ಸುಮಾರು 700 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮಂಜುನಾಥ್‌ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ ನರೇಗಾ ಯೋಜನೆಯಡಿ ಜಲಸಂರಕ್ಷಣೆಗೆ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆಯನ್ನು ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಉಸ್ತುವಾರಿ ವಹಿಸಲಾಗಿದೆ.

ಚೆಕ್‌ ಡ್ಯಾಂ: ಅಂರ್ತಜಲ ಮಟ್ಟ ವೃದ್ಧಿಗೊಳಿಸಲು ಮತ್ತು ಮಳೆನೀರು ಸಂರಕ್ಷಣೆ ಮಾಡಲು ಚೆಕ್‌ಡ್ಯಾಂ ಮತ್ತು ಬಹುಕಮಾನ್‌ ಚೆಕ್‌ ಡ್ಯಾಂಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ 160 ಚೆಕ್‌ಡ್ಯಾಂ ಸಮೇತ ಜಿಲ್ಲಾದ್ಯಂತ ವಿವಿಧ ಬಗೆಯ 700 ಕಾಮಗಾರಿಗಳನ್ನು ನಡೆಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಕೆರೆ, ಕಲ್ಯಾಣಿ, ಸಂರಕ್ಷಣೆ: ಜಿಲ್ಲೆಯಲ್ಲಿ ಹಿಂಗಾರು ಆಗಮನದ ಮುನ್ನವೇ ಮಳೆ ನೀರು ಸಂರಕ್ಷಣೆ ಮಾಡಲು ಒತ್ತು ನೀಡಲಾಗಿದೆ. ಸರ್ಕಾರಿ ಕಟ್ಟಡಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕೆರೆ-ಕುಂಟೆ ಮತ್ತು ಕಲ್ಯಾಣಿಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ತಾಲೂಕಿನಲ್ಲಿ ಜಲಸಂರಕ್ಷಣೆ ಮಾಡಲು ಕೆರೆ-ಕುಂಟೆ ಮತ್ತು ಕಲ್ಯಾಣಿಗಳನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಲಾಗಿದೆ ಎಂದು ಶ್ಲಾಘಿಸಿದರು. ಜಿಲ್ಲೆಯಲ್ಲಿ ಇದೇ ಮಾದರಿ ಅನುಸರಿಸಿ ಕಾಮಗಾರಿ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಬೆಳ್ಳೂಟಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಸುಸಜ್ಜಿತ ಕಲ್ಯಾಣಿ ಅಭಿವೃದ್ಧಿಗೊಳಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪರಿಶೀಲನೆ: ತಾಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ಸಮೀಪ ಮಳೆ ನೀರು ಸಂರಕ್ಷಣೆ ಮಾಡಲು ಅಳವಡಿಸಿರುವ ಮಳೆ ಕೊಯ್ಲು ಪದ್ಧತಿ, ರಾಜೀವ್‌ ಗಾಂಧಿ ಸೇವಾ ಕೇಂದ್ರ, ಕುಂಟೆ ಅಭಿವೃದ್ಧಿ ಕಾಮಗಾರಿ ಹಾಗೂ ಚಿಕ್ಕದಾಸರಹಳ್ಳಿ ಬ್ಯಾಟರಾಯಸ್ವಾಮಿ ಸನ್ನಿಧಿಯಲ್ಲಿರುವ ಕಲ್ಯಾಣಿ, ಆನೂರು ಗ್ರಾಮದಲ್ಲಿ ಚೆಕ್‌ಡ್ಯಾಂ, ಪಲಿಚೇರ್ಲು ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್‌ ನಿರ್ಮಾಣ ಸಹಿತ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ರೈತರು ಸಹ ಮಳೆ ನೀರು ಸಂರಕ್ಷಣೆ ಮಾಡಲು ನರೇಗಾ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಲು ಪ್ರಚಾರ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್‌ ಹಗಡೆ, ಜಿಪಂ ಸದಸ್ಯ ತನುಜ, ತಾಪಂ ಸದಸ್ಯ ರಾಜಶೇಖರ್‌, ತಾಪಂ ಇಒ ಶಿವಕುಮಾರ್‌, ಯುವ ಮುಖಂಡ ಬೆಳ್ಳೂಟಿ ಸಂತೋಷ, ನಾಗೇಶ್‌, ಆನೂರು ಗ್ರಾಮ ಪಂಚಾಯಿತಿ ಪಿಡಿಒ ಅರುಣಾಕುಮಾರಿ, ಎಸ್‌.ದೇವಗಾನಹಳ್ಳಿ ಪಿಡಿಒ ಮಧು, ಚಿಕ್ಕಬಳ್ಳಾಪುರ ಜಿಲ್ಲಾ ಎಪಿಎಂಸಿ ಉಪಾಧ್ಯಕ್ಷ ಬೆಳ್ಳೂಟಿ ವೆಂಕಟೇಶ್‌, ಮಳಮಾಚನಹಳ್ಳಿ ಗ್ರಾಪಂ ಸದಸ್ಯ ಡಿ.ಬೈರೇಗೌಡ, ಬಿ.ಬೈರೇಗೌಡ, ಕಾರ್ಯದರ್ಶಿ ರಾಜಣ್ಣ, ಕೃಷಿ ಇಲಾಖೆಯ ಅಧಿಕಾರಿ ಮಾಲತೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.