ಬಸ್ರೂರು: ಯಾರಿಗೂ ಬೇಡವಾಗಿವೆ ಶಿಲಾ ಶಾಸನಗಳು!


Team Udayavani, Jul 25, 2019, 6:33 AM IST

basruru

ಬಸ್ರೂರು: ಐತಿಹಾಸಿಕ ನಗರಿ ಹಾಗೂ ಬಂದರು ಪ್ರದೇಶವಾಗಿದ್ದ ಬಸ್ರೂರಿನಲ್ಲಿ ನಗರದ ಇತಿಹಾಸ ಸಾರುವ ಶಿಲಾ ಶಾಸನಗಳನ್ನು ಉಳಿಸಿಕೊಳ್ಳುವ ಕುರಿತಂತೆ ಯಾರೂ ಗಮನವೇ ಹರಿಸುತ್ತಿಲ್ಲ. ಅಲ್ಲಲ್ಲಿ ಬಿದ್ದಿದ್ದ 12 ಶಿಲಾ ಶಾಸನಗಳನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ವತಿಯಿಂದ ಸಂರಕ್ಷಿಸುವ ಕಾರ್ಯ ಮಾಡಲಾಗುತ್ತಿದೆ. ಆದರೆ ಸುಮಾರು 45 ಕ್ಕೂ ಹೆಚ್ಚು ಶಿಲಾ ಶಾಸನಗಳು ಸರಿಯಾದ ಸಂರಕ್ಷಣೆಯಿಲ್ಲದೆ ವಿನಾಶದಂಚಿಗೆ ಸರಿಯುತ್ತಿದ್ದು, ಅವುಗಳನ್ನು ಸಂಗ್ರಹಿಸಿ ಉಳಿಸುವ ಕಾರ್ಯ ಆಗಬೇಕಾಗಿದೆ.

ಈಗಾಗಲೇ ಎಲ್ಲೆಲ್ಲೊ ಬಿದ್ದಿದ್ದ 12 ಶಿಲಾ ಶಾಸನಗಳನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ಎನ್ನೆಸ್ಸೆಸ್‌ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಿವೃತ್ತ ಉಪನ್ಯಾಸಕ, ಅಧ್ಯಯನಕಾರ ಡಾ| ಕನರಾಡಿ ವಾದಿರಾಜ ಭಟ್ ಅವರು ತಂದು ಶಾರದಾ ಕಾಲೇಜಿನಲ್ಲಿ ಸಂರಕ್ಷಿಸಿದ್ದಾರೆ.

ಅಲ್ಲದೆ ದಿ| ಡಾ.ಪಿ.ಗುರುರಾಜ ಭಟ್ಟರು, ದಿ| ಡಾ.ಬಿ.ವಸಂತ ಶೆಟ್ಟಿ ಮತ್ತು ಡಾ| ಪಿ.ಎನ್‌.ನರಸಿಂಹ ಮೂರ್ತಿಯವರು ಇಲ್ಲಿನ ಶಾಸನಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ಹಲವು ಶಾಸನಗಳನ್ನು ಉಳಿಸಿ ಅಧ್ಯಯನ ನಡೆಸಿದ್ದಾರೆ. ಇಲ್ಲಿನ ಶ್ರೀ ಆದಿನಾಥೇಶ್ವರ ದೇವಸ್ಥಾನ, ಶ್ರೀ ವೆಂಕಟರಮಣ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಳ್ಳೂರು ಶ್ರೀ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಹೇರಿಕೆರೆಯ ಶ್ರೀ ಕೊಳನಕೋಡು ಈಶ್ವರ ದೇವಸ್ಥಾನಗಳಲ್ಲಿ ಕೆಲವು ಶಾಸನಗಳಿದ್ದು, ಅವುಗಳು ಅಲ್ಲೇ ಉಳಿದುಕೊಂಡಿವೆೆ. ಹೇರಿಕೆರೆಯ ಶ್ರೀ ಕೊಳನಕೋಡು ಈಶ್ವರ ದೇವಸ್ಥಾನದಲ್ಲಿ ಕಾಣ ಸಿಗುವ ಒಂದು ಶಿಲಾ ಶಾಸನದಲ್ಲಿ ತುಳು ಲಿಪಿಯಿದೆ ಎಂದು ಹೇಳಲಾಗಿದೆ.

ಸಮೀಪದ ಕಂದಾವರ, ಹಟ್ಟಿಕುದ್ರು, ಬಳ್ಕೂರು, ಜಪ್ತಿ, ಆನಗಳ್ಳಿ ಮುಂತಾದೆಡೆಯಲ್ಲಿ ಹಲವು ಶಾಸನಗಳು ಇದೆಯಾದರೂ ಅವುಗಳನ್ನು ಸಂರಕ್ಷಿಸಿಡುವಲ್ಲಿ ಸ್ಥಳೀಯಾಡಳಿತ ವಿಫಲವಾಗಿದೆ. ಇಲ್ಲಿನ ಪಂತ್ರ ಮನೆಯ ಭೂಮಿಯ ಅಡಿಯಲ್ಲಿ ಹುದುಗಿ ಹೋಗಿದ್ದ ಒಂದು ಶಿಲಾ ಶಾಸನವನ್ನು ಅಗೆದು ತೆಗೆದಿಟ್ಟಿದ್ದಾರೆ. ಆದರೆ ಆ ಶಾಸನವನ್ನು ಇನ್ನೂ ಓದಲಾಗಿಲ್ಲ.

ಶಿಲಾ ಶಾಸನಗಳನ್ನು ಉಳಿಸುವ ಕೆಲಸವನ್ನು ಪ್ರಾಚ್ಯ ಸಂಶೋಧನಾ ಇಲಾಖೆ ಮಾಡಬೇಕಾಗಿದೆ.

ಸ್ಥಳೀಯರು, ಗ್ರಾ.ಪಂ. ಸಹ ಇದಕ್ಕೆ ಆಸಕ್ತಿ ತೋರಬೇಕಾಗಿದೆ. ಬಸ್ರೂರಿನ ಶಿಲಾ ಶಾಸನಗಳ ಬಗ್ಗೆ ನಡೆದ ಸಂಶೋಧನೆ ಇನ್ನೂ ಪೂರ್ಣವಾಗಿಲ್ಲ ಎನ್ನುವುದು ಗಮನಾರ್ಹ.

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.