ಶಾಸಕರ ಖರೀದಿಗೆ ಸಾವಿರ ಕೋಟಿ ರೂ. ಖರ್ಚು
Team Udayavani, Jul 25, 2019, 3:04 AM IST
ಮಂಗಳೂರು: ರಾಜ್ಯದಲ್ಲಿ ಅತೃಪ್ತ ಶಾಸಕರ ಖರೀದಿಯೇ ಬಹುದೊಡ್ಡ ಹಗರಣವಾಗಿದ್ದು, ಅದನ್ನು ಅದೇ ಅತೃಪ್ತ ಶಾಸಕರು ಮುಂದಿನ ಮೂರು ತಿಂಗಳಲ್ಲಿ ಬಹಿರಂಗ ಪಡಿಸಲಿದ್ದಾರೆ. ಶಾಸಕರ ಖರೀದಿಗಾಗಿ ಬಿಜೆಪಿ ಕನಿಷ್ಠ 1,000 ಕೋ.ರೂ. ಖರ್ಚು ಮಾಡಿರಬಹುದು ಎಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಹಾಗೂ ಪಕ್ಷದಲ್ಲಿ ಕೆಲವೊಮ್ಮೆ ಅಭಿಪ್ರಾಯ ಭೇದಗಳು ಸಹಜ. ಆದರೆ ಅದನ್ನೇ ಬಳಸಿಕೊಂಡ ಬಿಜೆಪಿ, ಶಾಸಕರ ಖರೀದಿ ಮಾಡಿದೆ. ಅದಕ್ಕಾಗಿ ಬಿಜೆಪಿ ಏನೇನು ಮಾಡಿದೆ ಎಂದು ನಾನು ಹೇಳಬೇಕಾಗಿಲ್ಲ. ಮುಂದಿನ ಕೆಲವೇ ತಿಂಗಳಲ್ಲಿ ಅದೇ ಶಾಸಕರೇ ಹೇಳುತ್ತಾರೆ; ಕಾದು ನೋಡಿ ಎಂದರು.
ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ನಾವು ನಮ್ಮ ಸೋಲನ್ನು ಒಪ್ಪಿಕೊಂಡಿದ್ದೇವೆ. ಅದೇ ರೀತಿ ಅತೃಪ್ತ ಶಾಸಕರಿಗೆ ಯಾವ ರೀತಿ ನೆರವಾಗಿದ್ದೇವೆ ಎಂಬುದನ್ನು ಬಿಜೆಪಿಯವರು ಒಪ್ಪಿಕೊಳ್ಳಲಿ. ಶಾಸಕರ ಖರೀದಿ ಕುರಿತು ನಾನು ಮಾತ್ರವಲ್ಲ, ಶಾಸಕ ಶ್ರೀನಿವಾಸ ಗೌಡರೇ ಲಂಚದ ಆಫರ್ ಇದ್ದದ್ದನ್ನು ಬಹಿರಂಗಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.