40 ಸಾವಿರ ಉಗ್ರರ ನೆಲೆಯಾಗಿದೆ ಪಾಕ್
Team Udayavani, Jul 25, 2019, 5:00 AM IST
ವಾಷಿಂಗ್ಟನ್: ”ಪಾಕಿಸ್ತಾನದಲ್ಲಿ ಈಗಲೂ 30,000ದಿಂದ 40,000 ಉಗ್ರವಾದಿಗಳಿದ್ದು, ಅವರೆಲ್ಲರೂ ಅಫ್ಘಾನಿಸ್ತಾನ ಹಾಗೂ ಕಾಶ್ಮೀರದಲ್ಲಿ ಹೋರಾಡುವ ತರಬೇತಿ ಪಡೆದವರು” ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.
ವಾಷಿಂಗ್ಟನ್‌ನಲ್ಲಿ, ಅಮೆರಿಕ ಸಂಸದರ ಚಿಂತಕರ ಚಾವಡಿ ‘ಯು.ಎಸ್. ಇನ್ಸ್ಟಿಟ್ಯೂಟ್ ಆಫ್ ಪೀಸ್’ನಲ್ಲಿ ಮಾತನಾಡುವಾಗ ಈ ವಿಚಾರವನ್ನು ಹೊರಹಾಕಿದ್ದಾರೆ. ”ಪಾಕ್‌ನ ಹಿಂದಿನ ಎಲ್ಲಾ ಸರ್ಕಾರಗಳೂ ಭಯೋತ್ಪಾದಕರ ಬಗ್ಗೆ ಅಮೆರಿಕಕ್ಕೆ ಸುಳ್ಳು ಮಾಹಿತಿಗಳನ್ನೇ ನೀಡುತ್ತಾ ಬಂದಿವೆ. ವಿಶೇಷವಾಗಿ ಕಳೆದ 15 ವರ್ಷಗಳಲ್ಲಿ ಪಾಕಿಸ್ತಾನದಲ್ಲಿರುವ 40 ಉಗ್ರ ಸಂಘಟನೆಗಳ ಮಾಹಿತಿ ಅಡಗಿಸಿಡಲಾಗಿದೆ” ಎಂದು ಖಾನ್ ಆರೋಪಿಸಿದ್ದಾರೆ.
”ಕಳೆದ ಆಗಸ್ಟ್‌ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ, ಭಯೋತ್ಪಾದಕರಿಂದ ನಡೆಸಲ್ಪಡುತ್ತಿದ್ದ ಸಂಸ್ಥೆಗಳು, ಧರ್ಮಬೋಧನಾ ಕೇಂದ್ರಗಳನ್ನು ಜಪ್ತಿ ಮಾಡಲಾಗಿದೆ. ಉಗ್ರ ಚಟುವಟಿಕೆಗಳು ಚಿಗುರೊಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದಿದ್ದಾರೆ. ಇದೇ ವೇಳೆ, ಇರಾನ್ ಮೇಲೆ ಅಮೆರಿಕವು ದಾಳಿ ನಡೆಸಿದರೆ ಅತ್ಯಂತ ಘೋರ ಪರಿಣಾಮ ಎದುರಿಸಬೇಕಾದೀತು ಎಂದು ಅವರು ಎಚ್ಚರಿಸಿದ್ದಾರೆ.
ಇಮ್ರಾನ್ ಹೇಳಿಕೆಗೆ ತಿರುಗೇಟು
ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‌ಐ ಸಹಾಯದಿಂದಲೇ ಅಮೆರಿಕಕ್ಕೆ ಉಗ್ರ ಒಸಾಮ ಬಿನ್ ಲಾಡೆನ್‌ನನ್ನು ಹತ್ಯೆಗೈಯ್ಯಲು ಸಾಧ್ಯವಾಗಿದ್ದು ಎಂದು ಇಮ್ರಾನ್ ಖಾನ್ ನೀಡಿದ್ದ ಹೇಳಿಕೆಗೆ ಅಮೆರಿಕದ ಗುಪ್ತಚರ ಇಲಾಖೆಯ (ಸಿಐಎ) ಮಾಜಿ ಮಹಾ ನಿರ್ದೇಶಕ ಡೇವಿಡ್ ಪೆಟ್ರಾಸ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಿನ್ ಲಾಡೆನ್ ಪಾಕಿಸ್ತಾನದಲ್ಲಿದ್ದಾನೆ ಎಂಬ ವಿಚಾರ ಐಎಸ್‌ಐಗೇ ತಿಳಿದಿರಲಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.