ಗಮನಸೆಳೆದ ವೈಮಾನಿಕ ಪ್ರದರ್ಶನ
ಕಾರ್ಗಿಲ್ ವಿಜಯೋತ್ಸವಕ್ಕೆ ಲೋಹ ಹಕ್ಕಿಗಳ ಸಲಾಂ
Team Udayavani, Jul 25, 2019, 10:08 AM IST
ಬೀದರ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೀದರ ವಾಯುನೆಲೆಯಲ್ಲಿ ಬುಧವಾರ ನಡೆದ ವೈಮಾನಿಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಮೈನವಿರೇಳಿಸುವ ವೈಮಾನಿಕ ಪ್ರದರ್ಶನಕ್ಕೆ ಶಾಲಾ ವಿದ್ಯಾರ್ಥಿಗಳು, ಪಾಲಕರು, ವಾಯುನೆಲೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಕ್ಷಿಯಾದರು. ಬಾನಂಗಳದಲ್ಲಿ ವಿಮಾನಗಳ ಚಕಿತಗೊಳಿಸುವ ಹಾರಾಟ ಕಂಡು ವಿದ್ಯಾರ್ಥಿಗಳು ಜಯಘೋಷ ಕೂಗಿ ಸಂತಸ ವ್ಯಕ್ತಪಡಿಸಿದರು. ಪ್ರದರ್ಶನದುದ್ದಕ್ಕೂ ಜೈಹಿಂದ್, ವಂದೇ ಮಾತರಂ ಎನ್ನುವ ಜಯಘೋಷಗಳು ಮೊಳಗಿದವು.
ಏರ್ ಫೋರ್ಸ್ ಶಾಲೆ, ಕೇಂದ್ರೀಯ ವಿದ್ಯಾಲಯ, ಸಂಸ್ಕಾರ ಸ್ಕೂಲ್, ಗುರುನಾನಕ್, ಗ್ಲೋಬಲ್ ಸೈನಿಕ್ ಪಬ್ಲಿಕ್ ಶಾಲೆಗಳ ಒಟ್ಟು 600 ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ದೊಡ್ಡ ಪರದೆಯಲ್ಲಿ ಕಾರ್ಗಿಲ್ ಯುದ್ಧದ ಸನ್ನಿವೇಶಗಳನ್ನು ಬಿತ್ತರಿಸಲಾಯಿತು. ಎಸ್‌ಪಿ ಟಿ. ಶ್ರೀಧರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಪಾಟೀಲ, ನಗರಸಭೆ ಪೌರಾಯುಕ್ತ ಬಲಭೀಮ ಕಾಂಬಳೆ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.