ಸಾಂಕ್ರಾಮಿಕ ರೋಗಭಯ: ‘ಸಿವಿಕ್‌ ಬೈಲಾ’ ಬಾಣ!

Team Udayavani, Jul 26, 2019, 5:33 AM IST

sankramika-rooga

ಉಡುಪಿ: ಉಡುಪಿ ನಗರ ಪ್ರದೇಶದ ಮನೆ ಹಾಗೂ ಅಂಗಡಿಗಳ ಆವರಣದಲ್ಲಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳು ಕಂಡು ಬಂದರೆ ಜಾಗದ ಮಾಲಕರು ಭಾರೀ ಮೊತ್ತದ ದಂಡ ತೆರಬೇಕಾಗುತ್ತದೆ ಎಚ್ಚರ.

ನಗರದಲ್ಲಿ ಜನವಸತಿ ಪ್ರದೇಶದಲ್ಲಿ ಸ್ವಚ್ಛತೆ ಕಡೆ ಗಮನಹರಿಸದ ಹಿನ್ನೆಲೆಯಲ್ಲಿ ಡೆಂಗ್ಯೂ, ಮಲೇರಿಯ, ಎಚ್1ಎನ್‌1, ಚಿಕುನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಎಷ್ಟು ಅರಿವು ಮೂಡಿಸಿದರೂ ಸಾರ್ವಜನಿಕರು ಎಚ್ಚರ ವಹಿಸದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿ ಯಲ್ಲಿ ಸಿವಿಕ್‌ ಬೈಲಾ ಜಾರಿಗೆ ಉಡುಪಿ ನಗರಸಭೆ ಸಿದ್ಧತೆ ಮಾಡಿಕೊಂಡಿದೆ.

ಬೈಲಾದಲ್ಲಿ ಏನಿದೆ ?

ಬೈಲಾದಲ್ಲಿ ನಗರಸಭೆ ವ್ಯಾಪ್ತಿಯ ಮನೆ ಹಾಗೂ ಕಟ್ಟಡ ಆವರಣಗಳಲ್ಲಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳು ಕಂಡುಬಂದರೆ ಆ ಜಾಗದ ಮಾಲಕರಿಗೆ ಮೊದಲ ಹಂತದಲ್ಲಿ ಎಚ್ಚರಿಕೆ ನೀಡಲಾಗುತ್ತದೆ. ಮತ್ತೆ ಅದೇ ತಪ್ಪು ಕಂಡುಬಂದರೆ ಅಂತಹವರಿಗೆ ಸ್ಥಳದಲ್ಲಿಯೇ ಭಾರೀ ದಂಡ ವಿಧಿಸಲಾಗುತ್ತದೆ.

ಆರೋಗ್ಯ ಇಲಾಖೆಯಿಂದ ಕ್ರಮ

ಉಡುಪಿ ನಗರಸಭೆಗೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ‘ಬೈಲಾ’ ಕರಡು ಪ್ರತಿ ಸಲ್ಲಿಕೆಯಾಗಿದೆ. ಅಲ್ಲದೇ ಮೇ ತಿಂಗಳಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ‘ಬೈಲಾ’ ಜಾರಿಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಪೌರಾಯುಕ್ತರಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ನಗರಸಭೆ ಪ್ರಸ್ತಾವನೆ ಸಲ್ಲಿಸಲು ಎಲ್ಲ ಸಿದ್ಧತೆಗಳನ್ನು ನಡೆಸುತ್ತಿದೆ.

ಆಡಳಿತಾಧಿಕಾರಿಗಳ ಒಪ್ಪಿಗೆ

ನಗರಸಭೆಯ ವ್ಯಾಪ್ತಿಯಲ್ಲಿ ಯಾವುದೇ ‘ಬೈಲಾ’ ಜಾರಿಗೆ ತರಬೇಕಾದರೆ ಮೊದಲು ನಗರಸಭೆ ಸದಸ್ಯರ ಒಂದಾಗಿ ಒಪ್ಪಿಗೆ ಸೂಚಿಸಿದ ಬಳಿಕ ಸರಕಾರಕ್ಕೆ ಕಳುಹಿಸಬೇಕು. ಆದರೆ ಪ್ರಸ್ತುತ ನಗರಸಭೆ ಚುನಾವಣೆ ಮುಗಿದು ಸರಿ ಸುಮಾರು 1 ವರ್ಷ ಆದರೂ ಜನಪ್ರತಿನಿಧಿಗಳು ಅಧಿಕಾರ ಸ್ವೀಕರಿಸದ ಹಿನ್ನೆಲೆ ಜಿಲ್ಲಾಧಿಕಾರಿಗಳು ನಗರಸಭೆ ಆಡಳಿತ ಅಧಿಕಾರಿಯಾಗಿ ನಿರ್ಣಯ ಕೈಗೊಳ್ಳಬೇಕಾಗಿದೆ.

ಪ್ರತಿ ನಾಗರಿಕನ ಜವಾಬ್ದಾರಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸಿವಿಕ್‌ ಬೈಲಾ ಚಾಲ್ತಿಯಲ್ಲಿದೆ. ಉಡುಪಿ ನಗರದಲ್ಲಿಯೂ ಸಾಂಕ್ರಾಮಿಕ ರೋಗ ಪ್ರಕರಣ ಹೆಚ್ಚಿದ ಹಿನ್ನೆಲೆಯಲ್ಲಿ ಸಿವಿಕ್‌ ಬೈಲಾ ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದಾರೆ. ಅಧಿಕಾರಿಗಳು ಜನವಸತಿ ಆವರಣದಲ್ಲಿ ಸೊಳ್ಳೆ ಉತ್ಪತ್ತಿ ಕಾರಣವಾಗುವ ಅಂಶಗಳು ಕಂಡು ಬಂದ ಪ್ರದೇಶದಲ್ಲಿ ಉದ್ದಿಮೆದಾರರಿಗೆ 15,000 ರೂ. ವರೆಗೆ ದಂಡ ವಿಧಿಸಲಾಗಿದೆ.

ಗಂಭೀರ ಸ್ಥಿತಿಯ ಪ್ರಕರಣಗಳಿಲ್ಲ

ನಗರಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಜು. 15ವರೆಗೆ ಒಟ್ಟು 11 ಡೆಂಗ್ಯೂ ಹಾಗೂ 45 ಮಲೇರಿಯಾ ಪ್ರಕರಣ ವರದಿಯಾಗಿವೆ. ಕಾಯಿಲೆ ಪೀಡಿತರು ಗಂಭೀರ ಸ್ಥಿತಿಯಲ್ಲಿರುವ ಯಾವುದೇ ಪ್ರಕರಣವಿಲ್ಲ. -ಡಾ| ಪ್ರಶಾಂತ್‌ ಭಟ್, ರಾಷ್ಟ್ರೀಯ ರೋಗವಾಹಕ ಆಶ್ರಿತ‌ ರೋಗಗಳ ನಿಯಂತ್ರಣಾಧಿಕಾರಿ ಉಡುಪಿ.
ಸಾಂಕ್ರಾಮಿಕ ರೋಗ ಹರಡದಂತೆ ಜವಾಬ್ದಾರಿ ವಹಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಗರಸಭೆ ಅಥವಾ ಜಿಲ್ಲಾಡಳಿತ ಯಾವುದೇ ಕಾನೂನುಗಳನ್ನು ಮಾಡಿದರೂ ಅದು ಜಾರಿಯಾಗಲು ನಾಗರಿಕರ ಸಹಕಾರ ಅತೀ ಅಗತ್ಯ. ಸಾರ್ವಜನಿಕರು ತಮ್ಮ ಮನೆಯ ಆಸುಪಾಸಿನಲ್ಲಿರುವ ಸೊಳ್ಳೆ ಉತ್ಪತ್ತಿ ಪ್ರದೇಶಗಳ ಕುರಿತು ಎಚ್ಚರಿಕೆ ವಹಿಸಿ ಅದರ ನಿರ್ಮೂಲನೆಗೆ ಕ್ರಮ ವಹಿಸಿದರೆ ಉತ್ತಮ. ಟಯರ್‌, ಬಳಸಿದ ಸೀಯಾಳ, ಪ್ಲಾಸ್ಟಿಕ್‌ ವಸ್ತುಗಳಲ್ಲಿ ನೀರು ತುಂಬಿದ್ದರೆ ಅದನ್ನು ಆಯಾ ಪರಿಸರದವರೇ ವಿಲೇ ಮಾಡುವುದು ಉತ್ತಮ. ಖಾಸಗಿ ಪ್ರದೇಶದಲ್ಲಿ ಇಂತಹ ಸೊಳ್ಳೆ ಉತ್ಪತ್ತಿ ಕೇಂದ್ರಗಳಿದ್ದರೆ ಅದನ್ನು ನಗರಸಭೆಗೆ ತಿಳಿಸಿದರೆ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳುವರು. ಮೊದಲು ಎಚ್ಚರಿಕೆ ನೀಡಿ ಅನಂತರ ಭಾರೀ ಪ್ರಮಾಣದ ದಂಡವನ್ನೂ ವಿಧಿಸುವುರು. ಈಗಾಗಲೇ ಜಿಲ್ಲಾಡಳಿತ 2020ರ ಒಳಗಾಗಿ ಉಡುಪಿ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಬೇಕೆಂಬ ಪಣ ತೊಟ್ಟಿದೆ. ಇದು ಈಡೇರಲು ಕೇವಲ ಇಲಾಖೆ ಶ್ರಮಿಸಿದರೆ ಸಾಲುವುದಿಲ್ಲ. ಜಿಲ್ಲೆಯ ಸಾರ್ವಜನಿಕರೆಲ್ಲರೂ ಕೈ ಜೋಡಿಸಿದರಷ್ಟೇ ಇಂತಹ ಮಹತ್ಕಾರ್ಯ ಪೂರ್ಣಗೊಳ್ಳಲು ಸಾಧ್ಯವಾಗುವುದು.

ಮಂಗಳೂರಿನಲ್ಲಿ 15,000 ರೂ. ದಂಡ!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸಿವಿಕ್‌ ಬೈಲಾ ಚಾಲ್ತಿಯಲ್ಲಿದೆ. ಉಡುಪಿ ನಗರದಲ್ಲಿಯೂ ಸಾಂಕ್ರಾಮಿಕ ರೋಗ ಪ್ರಕರಣ ಹೆಚ್ಚಿದ ಹಿನ್ನೆಲೆಯಲ್ಲಿ ಸಿವಿಕ್‌ ಬೈಲಾ ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದಾರೆ. ಅಧಿಕಾರಿಗಳು ಜನವಸತಿ ಆವರಣದಲ್ಲಿ ಸೊಳ್ಳೆ ಉತ್ಪತ್ತಿ ಕಾರಣವಾಗುವ ಅಂಶಗಳು ಕಂಡು ಬಂದ ಪ್ರದೇಶದಲ್ಲಿ ಉದ್ದಿಮೆದಾರರಿಗೆ 15,000 ರೂ. ವರೆಗೆ ದಂಡ ವಿಧಿಸಲಾಗಿದೆ.
– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.