404 ಡಿಪ್ಲೊಮಾ ವಿದ್ಯಾರ್ಥಿಗಳ ಅಕ್ರಮ ಸಾಬೀತು
Team Udayavani, Jul 26, 2019, 5:27 AM IST
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ಮಾಡಿ, ಹೆಚ್ಚಿನ ಅಂಕ ಪಡೆದು, ಭವಿಷ್ಯ ರೂಪಿಸಿಕೊಳ್ಳಲು ಯೋಜನೆ ಸಿದ್ಧಪಡಿಸಿದ್ದ 404 ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಭವಿಷ್ಯಕ್ಕೆ ಕಂಟಕ ತಂದುಕೊಂಡಿರುವುದು ಬಯಲಾಗಿದೆ.
ರಾಜ್ಯದ ವಿವಿಧ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಇಲಾಖೆ ಏ.29ರಿಂದ ಮೇ 18ರ ವರೆಗೆ ಪರೀಕ್ಷೆ ನಡೆಸಿತ್ತು. ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರ ವಹಿಸಲು ಮತ್ತು ಪರೀಕ್ಷಾ ದುರಾಚಾರಗಳನ್ನು ನಿಯಂತ್ರಿಸಲು ಮುಖ್ಯ ವೀಕ್ಷಕರು, ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿತ್ತು. ಆದರೂ, ರಾಜ್ಯದ 434 ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು ಬಯಲಾಗಿದೆ.
ಪರೀಕ್ಷೆಯಲ್ಲಿ ನಕಲು, ಸಾಮೂಹಿಕ ನಕಲು ಸೇರಿ ಹಲವು ರೀತಿಯ ಅಕ್ರಮ ನಡೆಸಲು ಚೀಟಿ, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ಪರಿಕರ, ಕ್ಯಾಲ್ಕುಲೇಟರ್ ಮೊಲಾದ ಪರಿಕರಗಳನ್ನು ಬಳಸಿರುವುದು ತಾಂತ್ರಿಕ ಶಿಕ್ಷಣ ಸಂಸ್ಥೆಯ ತನಿಖೆಯಿಂದ ಬಯಲಾಗಿದೆ.
ವಿದ್ಯಾರ್ಥಿಗಳು ನಡೆಸಿದ ಪರೀಕ್ಷಾ ಅಕ್ರಮದ ಸತ್ಯಾಸತ್ಯತೆ ತಿಳಿಯಲು ಇಲಾಖೆಯ ವಿದ್ಯಾರ್ಥಿ ಮಾಲ್ಪ್ರಾಕ್ಟೀಸ್ ವಿಚಾರಣಾ ಸಮಿತಿಯು ಜುಲೈನಲ್ಲಿ ಎಲ್ಲ ವಿದ್ಯಾರ್ಥಿಗಳ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ 434 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿ ಗಳನ್ನು ದೋಷಮುಕ್ತ ಎಂದು ಘೋಷಿಸಲಾಗಿದೆ. ಉಳಿದ 404 ವಿದ್ಯಾರ್ಥಿಗಳಿಗೆ ಅವರು ಮಾಡಿರುವ ಅಕ್ರಮದ ಆಧಾರದಲ್ಲಿ ಶಿಕ್ಷೆಯನ್ನು ವಿಧಿಸಿದೆ. ಶಿಕ್ಷೆ ಪಡೆದ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಸಂದ ರ್ಭದಲ್ಲಿ ಅಥವಾ ಪರೀಕ್ಷೆಗೆ ದಾಖಲಿಸಿಕೊಳ್ಳುವ ವೇಳೆ ಹೆಚ್ಚಿನ ಎಚ್ಚರಿಕೆಯನ್ನು ಕಾಲೇಜಿನ ಪ್ರಾಂಶು ಪಾಲರು ವಹಿಸಬೇಕು ಎಂದು ನಿರ್ದೇಶನವನ್ನು ಸಮಿತಿ ನೀಡಿದೆ.
ಶಿಕ್ಷೆಯ ವಿಧಾನ: ವಿದ್ಯಾರ್ಥಿಗಳು ಮಾಡಿರುವ ಪರೀಕ್ಷಾ ಅಕ್ರಮದ ಆಧಾರದಲ್ಲಿ ಮೂರು ವಿಧದ ಶಿಕ್ಷೆ ನೀಡಲಾಗಿದೆ. ಕಡಿಮೆ ಅಪರಾಧ ಎಂದು ಸಾಬೀತಾದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದು ಮಾಡಿ ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕಠಿಣ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿಗಳಿಗೆ 2023ರವರೆಗೂ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. 404 ವಿದ್ಯಾರ್ಥಿಗಳಲ್ಲಿ 178 ವಿದ್ಯಾರ್ಥಿಗಳ 2019ರ ಏಪ್ರಿಲ್/ಮೇ ನಲ್ಲಿ ನಡೆದ ಪ್ರಾಯೋಗಿಕ ಹಾಗೂ ಥಿಯರಿ ಪರೀಕ್ಷೆಗಳು ರದ್ದಾಗಿವೆ. ಅಂತಹ ವಿದ್ಯಾರ್ಥಿಗಳು ಸಾಮಾನ್ಯ ವಿದ್ಯಾರ್ಥಿಗಳಂತೆ 2019ರ ಅಕ್ಟೋಬರ್/ನವೆಂಬರ್‌ನಲ್ಲಿ ನಡೆಯುವ ಪರೀಕ್ಷೆಗೆ ದಾಖಲಾತಿ ಮಾಡಿಕೊಳ್ಳಬೇಕು ಮತ್ತು ಎಲ್ಲ ಪರೀಕ್ಷೆಯನ್ನು ಹೊಸದಾಗಿಯೇ ಬರೆಯಬೇಕು. 223 ವಿದ್ಯಾರ್ಥಿಗಳ ಥಿಯರಿ ಪರೀಕ್ಷೆಯನ್ನು ಮಾತ್ರ ರದ್ದು ಮಾಡಲಾಗಿದೆ. ಇಂತಹ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಯನ್ನು 2019ರ ಅಕ್ಟೋಬರ್/ನವೆಂಬರ್‌ನಲ್ಲಿ ಬರೆಯಬಹುದಾಗಿದೆ. ಇನ್ನು 3 ವಿದ್ಯಾರ್ಥಿಗಳ 2019ರ ಏಪ್ರಿಲ್ ಮತ್ತು ಮೇನಲ್ಲಿ ಬರೆದಿರುವ ಎಲ್ಲ ಪರೀಕ್ಷೆಯೂ ರದ್ದಾಗಿದೆ ಹಾಗೂ 2022ರ ಅಕ್ಟೋಬರ್/ನವೆಂಬರ್ ವರೆಗೂ ಡಿಬಾರ್ ಮಾಡಲಾಗಿದೆ. ಈ ವಿದ್ಯಾರ್ಥಿಗಳು 2013ರ ಏಪ್ರಿಲ್/ಮೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತೀರ್ಪಿನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.