ಜ್ವರದಿಂದ ಮಕ್ಕಳ ಸಾವು: ಅಧಿಕಾರಿಗಳಿಂದ ತಪಾಸಣೆ

Team Udayavani, Jul 26, 2019, 6:33 AM IST

baby

ಕುಂಬಳೆ/ಬದಿಯಡ್ಕ: ಜ್ವರ ಬಾಧಿಸಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವಿಗೀಡಾದ ಸಹೋದರರಾದ ಇಬ್ಬರು ಮಕ್ಕಳ ರಕ್ತದ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗಾಗಿ ಪುಣೆಗೆ ಕಳುಹಿಸಲಾಗಿದೆ. ಸಾವಿಗೀಡಾದ ಮಕ್ಕಳ ಕನ್ಯಪ್ಪಾಡಿಯಲ್ಲಿರುವ ಮನೆಗೆ ಗುರುವಾರ ಬೆಳಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಕ್ಕಳಿಗೆ ನ್ಯುಮೋನಿಯಾ ತಗಲಿತ್ತು.

ಆದರೆ ಒಂದು ದಿನದೊಳಗೆ ಸಾವು ಸಂಭವಿಸಬಹುದಾದ ಜ್ವರ ಇದಲ್ಲ. ಅದ್ದರಿಂದ ಮಕ್ಕಳಿಗೆ ವೈರಾಣು ಜ್ವರ ತಗಲಿ ರಬಹುದೆಂದು ಶಂಕಿಸಲಾಗಿದೆ. ಮಕ್ಕಳ ಹೆತ್ತವರ ರಕ್ತ ಸ್ಯಾಂಪಲನ್ನು ಕೂಡ ಉನ್ನತ ಮಟ್ಟದ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಸಾವಿಗೆ ಕಾರಣವಾದ ಜ್ವರ ಯಾವುದೆಂದು ರಕ್ತ ಮಾದರಿಯ ವರದಿ ಬಂದ ಬಳಿಕವಷ್ಟೇ ತಿಳಿಯಬಹುದು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ಪಿ. ದಿನೇಶ್‌ ಕುಮಾರ್‌ ತಿಳಿಸಿದ್ದಾರೆ.

ಕನ್ಯಪ್ಪಾಡಿ ಪಳ್ಳಿಕಂಡ ನಿವಾಸಿ ಅಂಗಡಿಮೊಗರು ಶಾಲೆಯ ಅಧ್ಯಾಪಕ ಸಿದ್ಧಿಕ್‌ – ನಿಸಾ ದಂಪತಿಯ ಮಕ್ಕಳಾದ ಮೊದೀನ್‌ ಸಿನಾಸ್‌ (ನಾಲ್ಕೂವರೆ ವರ್ಷ), ಫಿದರತ್ತುಲ್‌ ಮುಂತಹಾನ್‌ (ಆರು ತಿಂಗಳು) ಜ್ವರದಿಂದ ಸಾವಿಗೀಡಾಗಿದ್ದರು. ಮಕ್ಕಳ ತಾಯಿ ಅಸರುನ್ನೀಸಾ ಅವರಿಗೆ ಜ್ವರ ಬಾಧಿಸಿದ್ದು ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಣ್ಣೀರ ಕೋಡಿ
ಹೆತ್ತವರಿಗೆ ಇಬ್ಬರೇ ಮಕ್ಕಳಿದ್ದು ಅವರಿಬ್ಬರನ್ನೂ ಕಳೆದುಕೊಂಡ ಕುಟುಂಬದಲ್ಲಿ ಕಣ್ಣೀರ ಕೋಡಿ ಹರಿದಿದೆ. ನೆರೆಯ 18 ವರ್ಷದ ಓರ್ವ ವ್ಯಕ್ತಿಯೂ ಜ್ವರದಿಂದ ಮಂಗಳೂರು ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು, ಪರಿಸರದ ಜನತೆ ಆತಂಕಕ್ಕೊಳಗಾಗಿದ್ದಾರೆ.

ಭಯ ಬೇಡ: ಸಚಿವೆ
ಸ್ಥಳಕ್ಕೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ತಪಾಸಣೆ ನಡೆಸಲಾಗಿದೆ. ಆತಂಕ ಪಡುವಂತಹ ಯಾವುದೇ ಅಂಶಗಳು ಪತ್ತೆಯಾಗಿಲ್ಲ. ಆದರೂ ಸಂಪೂರ್ಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಸ್ಥಳೀಯರು ಈ ಕುರಿತು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯವಿಲ್ಲ.
– ಕೆ.ಕೆ. ಶೈಲಜಾ ಟೀಚರ್‌, ರಾಜ್ಯ ಆರೋಗ್ಯ ಸಚಿವೆ

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.