ಜಿಲ್ಲೆಯಲ್ಲಿ ಕಿಸಾನ್‌ ಸಮ್ಮಾನ್‌ ನೋಂದಣಿ ಯಶಸ್ವಿ

ಯೋಜನೆಗೆ ಶೇ.95ರಷ್ಟು ರೈತರ ಸ್ಪಂದನೆ • 2.04 ಲಕ್ಷ ಮಂದಿ ಆನ್‌ಲೈನ್‌ನಲ್ಲಿ ನೋಂದಣಿ • 60 ದಿನದಲ್ಲಿ ಪೂರ್ಣ ಸದಸ್ಯತ್ವ ಗುರಿ

Team Udayavani, Jul 26, 2019, 10:56 AM IST

mysuru-tdy-1

ಮೈಸೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ಮೈಸೂರು ಜಿಲ್ಲೆಯಲ್ಲಿ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರೈತರ ಸಬಲೀಕರಣದ ಉದ್ದೇಶದಿಂದ ಕೇಂದ್ರ ಸರ್ಕಾರ ಕಳೆದ ಬಜೆಟ್‌ನಲ್ಲಿ ಜಾರಿಗೆ ತಂದಿದ್ದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ಮೈಸೂರಿನ ಶೇ.95 ರಷ್ಟು ರೈತರು ನೋಂದಣಿ ಮಾಡಿಕೊಂಡಿರುವುದು ಗಮನಾರ್ಹ. ಈಗಾಗಲೇ ಯೋಜನೆಯು ಮೂರನೇ ಕಂತಿನ ಹಣವೂ ಬಂದಿದ್ದು, ಉಳಿದ ರೈತರ ನೋಂದಣಿ ಪ್ರಕ್ರಿಯೆಯೂ ನಡೆಯುತ್ತಿದೆ.

ಎರಡೂವರೆ ಲಕ್ಷ ರೈತರ ಗುರಿ: ಈ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ರೈತರ ನೋಂದಣಿಗೆ ಗುರಿ ನೀಡಲಾಗಿತ್ತು. ಈವರೆಗೆ 2.04 ಲಕ್ಷ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇಲಾಖೆಯಿಂದ ದಿನಪತ್ರಿಕೆಗಳಲ್ಲಿ ಜಾಹೀರಾತು, ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮಾಡಲಾಗಿದೆ. ಈ ಯೋಜನೆಯಲ್ಲಿ ಅರ್ಹ ಫ‌‌ಲಾನುಭವಿಗಳನ್ನು ರಾಜ್ಯ ಸರಕಾರವೇ ಗುರುತಿಸಬೇಕಿದ್ದು, ನೋಂದಣಿಯಾದ ರೈತರ ದಾಖಲಾತಿಗಳನ್ನು ಗ್ರಾಮ ಲೆಕ್ಕಿಗರು ಪರಿಶೀಲಿಸಿ ಅಂತಿಮಗೊಳಿಸಿದ ನಂತರ ರಾಜ್ಯ ಸರ್ಕಾರ ಕೇಂದ್ರದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಲಿದೆ.

ಮೊದಲಿಗೆ ಆಸಕ್ತಿ ಇರಲಿಲ್ಲ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ರೈತರು ನೋಂದಣಿ ಮಾಡಿಸಿಕೊಳ್ಳು ವಂತೆ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಭೇಟಿ ನೀಡುತ್ತಿದ್ದರೂ, ಮೊದ ಮೊದಲು ಯೋಜನೆಯಡಿ ಘೋಷಣೆಗಳನ್ನು ಸಲ್ಲಿಸಲು ಅನೇಕರು ಆಸಕ್ತಿ ತೋರಿ ಸುತ್ತಿಲ್ಲ. ಅರ್ಹ ರೈತರನ್ನು ನಾವೇ ಸಂಪರ್ಕಿಸುತ್ತಿದ್ದರೂ ನೋಂದಣಿ ಮಾಡಿಕೊಳ್ಳಲು ಮುಂದೆ ಬರುತ್ತಿರಲಿಲ್ಲ. ಲೋಕಸಭಾ ಚುನಾವಣೆಯ ನಂತರ ನೋಂದಣಿ ಪ್ರಕ್ರಿಯೆ ಪುನಾರಂಭವಾದ ನಂತರ ಹೆಚ್ಚು ಹೆಚ್ಚು ರೈತರು ಹೆಸರು ನೋಂದಣಿ ಮಾಡಿಕೊಂಡು, ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ ಎಂಬುದು ಅಧಿಕಾರಿಗಳ ಮಾತು.

ಅರ್ಹರಲ್ಲದವರೇ ಲಕ್ಷದಷ್ಟಿದ್ದಾರೆ: ಮೈಸೂರು ಜಿಲ್ಲೆಯಲ್ಲಿ 2010-11ರ ಅಂಕಿ ಅಂಶಗಳ ಪ್ರಕಾರ 3.49 ಲಕ್ಷ ಮಂದಿ ರೈತರಿದ್ದು, ಈವರೆಗೆ ಜಿಲ್ಲೆಯಲ್ಲಿ 2.04 ಲಕ್ಷ ಮಂದಿ ಯೋಜನೆಯ ಫ‌ಲಾನುಭವಿ ಗಳಾಗಿದ್ದಾರೆ. ಉಳಿದ ರೈತರು ಸರ್ಕಾರಿ ನೌಕರರು, ಸಾಂವಿಧಾನಿಕ ಹುದ್ದೆಯಲ್ಲಿರುವವರು, ವೃತ್ತಿಪರ ಕೆಲಸದಲ್ಲಿರುವವರು, ಕೆಲವು ಸಂಸ್ಥೆಗಳ ಹೆಸರಿನಲ್ಲಿ ಜಮೀನು ಇರುವುದು ಸೇರಿದಂತೆ 10 ಸಾವಿರಕ್ಕಿಂತ ಹೆಚ್ಚು ಪಿಂಚಣಿ ಪಡೆಯುವ ಕುಟುಂಬಗಳಾಗಿವೆ. ಈ ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಇವರ ಸಂಖ್ಯೆ ಜಿಲ್ಲೆಯಲ್ಲಿ ಲಕ್ಷದಷ್ಟಿದೆ.

ಈ ಯೋಜನೆಗೆ ಸಣ್ಣ, ಮಧ್ಯಮ ಮತ್ತು ದೊಡ್ಡ ರೈತರೂ ಅರ್ಹರಾಗಿದ್ದು, ಕ್ಷೇತ್ರ ಸಿಬ್ಬಂದಿ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಹಳ್ಳಿಗಳಲ್ಲಿ ಮೈಕ್‌ ಮೂಲಕವೂ ಪ್ರಚಾರ ಮಾಡಿರುವುದರ ಪರಿಣಾಮ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯವಾಗುತ್ತಿದೆ ಎಂದು ಕೃಷಿ ಇಲಾಖೆಯ ಅಧಿಕಾರಿ ಪತ್ರಿಕೆಗೆ ವಿವರಿಸಿದರು.

 

● ಸತೀಶ್‌ ದೇಪುರ

ಟಾಪ್ ನ್ಯೂಸ್

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.